Homeಚಳವಳಿಇಂದು 'ಸಾರ್ವತ್ರಿಕ ಮುಷ್ಕರ': 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

ಇಂದು ‘ಸಾರ್ವತ್ರಿಕ ಮುಷ್ಕರ’: 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

- Advertisement -
- Advertisement -

ಕೇಂದ್ರದ ‘ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ’ ನೀತಿಗಳ ವಿರುದ್ಧ ಇಂದು (ಜು.9) ದೇಶದಾದ್ಯಂತ ಬೃಹತ್ ಮುಷ್ಕರಕ್ಕೆ ಕರೆ ಕೊಡಲಾಗಿದೆ. ವಿವಿಧ ಕ್ಷೇತ್ರಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ.

ರೈತ ಸಂಘಟನೆಗಳು ಮತ್ತು ಕಾರ್ಮಿಕ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರ ಅಥವಾ ‘ಭಾರತ್ ಬಂದ್’ಗೆ ಕರೆ ಕೊಟ್ಟಿದೆ. ಬ್ಯಾಂಕಿಂಗ್, ಅಂಚೆ ಕಾರ್ಯಾಚರಣೆಗಳು, ಸಾರಿಗೆ ಮತ್ತು ವಿದ್ಯುತ್ ಸರಬರಾಜು ಸೇರಿದಂತೆ ಅಗತ್ಯ ಸಾರ್ವಜನಿಕ ಸೇವೆಗಳಲ್ಲಿ ಅಡಚಣೆ ಉಂಟಾಗುವ ನಿರೀಕ್ಷೆಯಿದೆ.

ಏನಿರುತ್ತೆ.. ಏನಿರಲ್ಲ?

ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು, ಅಂಚೆ ಕಾರ್ಯಾಚರಣೆಗಳು, ಕಲ್ಲಿದ್ದಲು ಗಣಿಗಾರಿಕೆ ಮತ್ತು ಕೈಗಾರಿಕಾ ಉತ್ಪಾದನೆ, ಸರ್ಕಾರಿ ಸಾರ್ವಜನಿಕ ಸಾರಿಗೆ, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು, ಗ್ರಾಮೀಣ ಪ್ರದೇಶಗಳಲ್ಲಿ ರೈತರ ನೇತೃತ್ವದ ಕಾರ್ಯಚರಣೆಗಳು ಇಂದು ಬಂದ್ ಆಗುವ ಸಾಧ್ಯತೆ ಇದೆ.

ಶಾಲಾ, ಕಾಲೇಜುಗಳು, ಖಾಸಗಿ ಕಚೇರಿಗಳು ಕಾರ್ಯಾಚರಿಸಲಿವೆ. ರೈಲು ಸೇವೆಗಳು ಇದ್ದರೂ, ವಿಳಂಬ ಆಗುವ ಸಾಧ್ಯತೆಗಳು ಹೆಚ್ಚಿದೆ.

“ದೇಶದಾದ್ಯಂತ ರೈತರು ಮತ್ತು ಗ್ರಾಮೀಣ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಎಐಟಿಯುಸಿಯ ಅಮರ್‌ಜೀತ್ ಕೌರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಸರ್ಕಾರ ನಮ್ಮ 17 ಅಂಶಗಳ ಬೇಡಿಕೆ ಪಟ್ಟಿಯನ್ನು ನಿರ್ಲಕ್ಷಿಸಿದೆ ಮತ್ತು ಕಳೆದ 10 ವರ್ಷಗಳಲ್ಲಿ ವಾರ್ಷಿಕ ಕಾರ್ಮಿಕ ಸಮ್ಮೇಳನವನ್ನು ಸಹ ಕರೆದಿಲ್ಲ” ಎಂದು ಅವರು ಹೇಳಿದ್ದಾರೆ.

“ಸಾರ್ವತ್ರಿಕ ಮುಷ್ಕರದಿಂದ ದೇಶದಾದ್ಯಂತ ಸಾರ್ವಜನಿಕ ಸೇವೆಗಳು ಅಸ್ತವ್ಯಸ್ತಗೊಳ್ಳಲಿವೆ. ಬ್ಯಾಂಕಿಂಗ್, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಕಾರ್ಖಾನೆಗಳು, ರಾಜ್ಯ ಸಾರಿಗೆ ಸೇವೆಗಳ ಮೇಲೆ ಮುಷ್ಕರದ ಪರಿಣಾಮ ಬೀರಲಿದೆ” ಎಂದು ಹಿಂದ್ ಮಜ್ದೂರ್ ಸಭಾದ ಹರ್ಭಜನ್ ಸಿಂಗ್ ಸಿಧು ಪಿಟಿಐಗೆ ತಿಳಿಸಿದ್ದಾರೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA)ನೊಂದಿಗೆ ಸಂಯೋಜಿತವಾಗಿರುವ ಬಂಗಾಳ ಪ್ರಾಂತೀಯ ಬ್ಯಾಂಕ್ ನೌಕರರ ಸಂಘವು ಬ್ಯಾಂಕಿಂಗ್ ಮತ್ತು ವಿಮಾ ವಲಯಗಳೆರಡೂ ಮುಷ್ಕರದಲ್ಲಿ ಭಾಗವಹಿಸಲಿವೆ ಎಂದು ದೃಢಪಡಿಸಿದೆ. ಇಂದು ಔಪಚಾರಿಕ ಬ್ಯಾಂಕಿಂಗ್ ರಜೆ ಇಲ್ಲದಿದ್ದರೂ, ಶಾಖೆಗಳು ಮತ್ತು ಎಟಿಎಂಗಳಲ್ಲಿನ ಸೇವೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ.

ವಿದ್ಯುತ್ ಸರಬರಾಜಿನ ಮೇಲೂ ಪರಿಣಾಮ ಬೀರಬಹುದು. ಪಿಟಿಐ ವರದಿಯ ಪ್ರಕಾರ, 27 ಲಕ್ಷಕ್ಕೂ ಹೆಚ್ಚು ವಿದ್ಯುತ್ ಕ್ಷೇತ್ರದ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ರೈಲ್ವೆ ಇಲಾಖೆ ಯಾವುದೇ ಅಧಿಕೃತ ಮುಷ್ಕರ ಸೂಚನೆಯನ್ನು ನೀಡಿಲ್ಲ. ಆದಾಗ್ಯೂ, ಪ್ರತಿಭಟನೆಗಳು ಅಥವಾ ಸಾಗಣೆ ಪರಿಣಾಮಗಳಿಂದಾಗಿ ರೈಲು ಸೇವೆಗಳಲ್ಲಿ ಸಂಭವನೀಯ ಅಡಚಣೆಗಳು ಅಥವಾ ವಿಳಂಬಗಳು ಸಂಭವಿಸಬಹುದು.

ಈ ಮುಷ್ಕರ ಕೇವಲ ಔಪಚಾರಿಕ ವಲಯದ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಅನೌಪಚಾರಿಕ ವಲಯದ ಕಾರ್ಮಿಕರು, ಸ್ವಯಂ ಉದ್ಯೋಗಿ ಮಹಿಳಾ ಸಂಘ (SEWA) ನಂತಹ ಸ್ವಯಂ ಉದ್ಯೋಗಿ ಗುಂಪುಗಳು ಮತ್ತು ಗ್ರಾಮೀಣ ಸಮುದಾಯಗಳು ಸಹ ಭಾಗವಹಿಸಲಿವೆ.

ಮುಷ್ಕರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಂತಹ ರೈತ ಒಕ್ಕೂಟಗಳ ಬೆಂಬಲ ದೊರೆತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಈಗ ರದ್ದುಗೊಂಡಿರುವ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧದ ಐತಿಹಾಸಿಕ ರೈತರ ಆಂದೋಲನದ ನೇತೃತ್ವ ವಹಿಸಿತ್ತು.

ಎನ್‌ಎಂಡಿಸಿ ಲಿಮಿಟೆಡ್, ಉಕ್ಕು ಸ್ಥಾವರಗಳು ಮತ್ತು ರೈಲ್ವೆ ಕಾರ್ಯಾಚರಣೆಗಳು ಸೇರಿದಂತೆ ಪ್ರಮುಖ ಕೈಗಾರಿಕೆಗಳ ಸಾರ್ವಜನಿಕ ವಲಯದ ಉದ್ಯೋಗಿಗಳು ಸಹ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು), ಹಿಂದ್ ಮಜ್ದೂರ್ ಸಭಾ (ಹೆಚ್‌ಎಂಎಸ್‌), ಸೆಲ್ಫ್ ಎಂಪ್ಲಾಯಿಡ್ ವುಮೆನ್ಸ್ ಅಸೋಸಿಯೇಷನ್ (ಎಸ್‌ಇಡಬ್ಲ್ಯುಎ), ಲೇಬರ್ ಪ್ರೊಗ್ರೆಸಿವ್ ಫೆಡರೇಶನ್ (ಎಲ್‌ಪಿಎಫ್‌), ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಯುಟಿಯುಸಿ), ಸಂಯುಕ್ತ ಕಿಸಾನ್ ಮೊರ್ಚಾ, ರೂರಲ್ ವರ್ಕರ್ಸ್ ಯೂನಿಯನ್ ಹಾಗೂ ರೈಲ್ವೆ, ಎನ್‌ಎಂಡಿಸಿ ಲಿಮಿಟೆಡ್ ಮತ್ತು ಉಕ್ಕಿನ ಕೈಗಾರಿಕೆಗಳ ಸಾರ್ವಜನಿಕ ವಲಯದ ಸಿಬ್ಬಂದಿ ಮಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಸತ್ತು ಅಂಗೀಕರಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂಬುವುದೇ ಮುಷ್ಕರದ ಪ್ರಮುಖ ಬೇಡಿಕೆಯಾಗಿದೆ.

ಈ ಕಾರ್ಮಿಕ ಸಂಹಿತೆಗಳು ಮುಷ್ಕರ ನಡೆಸುವುದನ್ನು ಹೆಚ್ಚು ಕಷ್ಟಕರವಾಗಿಸುವ ಮೂಲಕ, ಕೆಲಸದ ಸಮಯವನ್ನು ಹೆಚ್ಚಿಸುವ ಮೂಲಕ ಮತ್ತು ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದಾಗ ಉದ್ಯೋಗದಾತರನ್ನು ದಂಡದಿಂದ ರಕ್ಷಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಕಾರ್ಮಿಕ ಸಂಘಗಳು ವಾದಿಸಿವೆ.

ಅಲ್ಲದೆ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣಕ್ಕೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಹೆಚ್ಚು ಕೆಲಸಗಾರರನ್ನು ನೇಮಿಸಲು ಅವಕಾಶ ನೀಡುತ್ತದೆ. ಹೊರ ಗುತ್ತಿಗೆ ಉದ್ಯೋಗ ಭದ್ರತೆ ಮತ್ತು ನ್ಯಾಯಯುತ ವೇತನಕ್ಕೆ ಧಕ್ಕೆ ತರುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಇಷ್ಟೊಂದು ದೊಡ್ಡ ಪ್ರಮಾಣದ ಮುಷ್ಕರ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2020, 2022 ಮತ್ತು 2024ರಲ್ಲಿ ನಡೆದ ಇದೇ ರೀತಿಯ ರಾಷ್ಟ್ರವ್ಯಾಪಿ ಮುಷ್ಕರಗಳಲ್ಲಿ ಲಕ್ಷಾಂತರ ಕಾರ್ಮಿಕರು ಬೀದಿಗಿಳಿದು ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿವಾದಾತ್ಮಕ ಆರ್ಥಿಕ ಸುಧಾರಣೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು.

ಜುಲೈ 9ಕ್ಕೆ ಭಾರತ್ ಬಂದ್: 25 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ – ದೇಶದಾದ್ಯಂತ ಸೇವೆಗಳ ವ್ಯಾಪಕ ವ್ಯತ್ಯಯ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...