ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶದಾದ್ಯಂತ ಭಾರತ್ ಬಂದ್ ಆಚರಿಸಲಾಯಿತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರೈತ ನಾಯಕ ರಾಕೇಶ್ ಟಿಕಾಯತ್, “ನಮ್ಮ ಭಾರತ್ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬಂದ್‌ಗೆ ದೇಶವ್ಯಾಪಿಯಾಗಿ ರೈತರು ದೊಡ್ಡ ಪ್ರಮಾಣದಲ್ಲಿ ಬೆಂಬಲ ವ್ಯಕ್ತ ಪಡಿಸಿದ್ದಾರೆ” ಎಂದರು.
’ಭಾರತ್ ಬಂದ್ ಎಂದು ನಾವು ಎಲ್ಲವನ್ನೂ ಮುಚ್ಚುವುದಿಕ್ಕೆ ಸಾಧ್ಯವಾಗುವುದಿಲ್ಲ. ಜನರ ಓಡಾಟಕ್ಕೆ ಅನುವು ಮಾಡಿಕೊಡಲೇಬೇಕು. ಇದೆಲ್ಲದರ ಹೊರತಾಗಿ ಇಂದಿನ ಭಾರತ್ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ನಾವು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಸರ್ಕಾರದ ಪ್ರತಿನಿಧಿಗಳೇ ನಮ್ಮೊಂದಿಗೆ ಚರ್ಚೆ ನಡೆಸಲು ಮುಂದೆ ಬರುತ್ತಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ: ಭಾರತ್ ಬಂದ್: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು
SKM के आव्हान पर देशभर में भारत बंद को मिला अभूतपूर्व समर्थन,नागरिकों को हो रही परेशानी के लिए क्षमा चाहते हैं लेकिन किसान भी 10 महीने से झेल रहे हैं तमाम परेशानियां,किसानों द्वारा आक्समिक वाहनों को निकलवाने व यात्रियों हेतु पानी चाय दूध के बेहतर इंतजाम किए गए हैं।#BharathBandh
— Rakesh Tikait (@RakeshTikaitBKU) September 27, 2021
ಮುಂದುವರೆದು ಉತ್ತರ ಪ್ರದೇಶ ಸರ್ಕಾರ ಕಬ್ಬಿನ ಖರೀದಿ ದರವನ್ನು ಹೆಚ್ಚಿಸಿರುವ ಬಗ್ಗೆ ವ್ಯಂಗ್ಯವಾಡಿ ಅವರು, “ಯು.ಪಿ ಸರ್ಕಾರ ಪ್ರತಿ ಕ್ವಿಂಟಾಲ್ ಕಬ್ಬಿಗೆ 25 ರೂಪಾಯಿ ಹೆಚ್ಚಳ ಮಾಡಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಷ್ಟು ಕಡಿಮೆ ಪ್ರಮಾಣದಲ್ಲಿ ದರ ಹೆಚ್ಚಳ ಮಾಡುವ ಮೂಲಕ ಯೋಗಿ ಸರ್ಕಾರ ರೈತರ ವಿಚಾರದಲ್ಲಿ ತಮಾಷೆ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿಯೂ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ಬೆಂಗಳೂರಿನಲ್ಲಿ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಆನಂದರಾವ್ ವತ್ತದ ಬಳಿಯ ಗಾಂಧಿ ಪ್ರತಿಮೆ, ಸ್ವಾತಂತ್ರ್ಯ ಉದ್ಯಾನ, ಕೆ.ಆರ್.ವೃತ್ತ, ನೃಪತುಂಗ ವೃತದ ಮೂಲಕ ತೆರಳಿದ ಮೆರವಣಿಗೆ ಮೈಸೂರು ಬ್ಯಾಂಕ್ ವೃತ್ತಕ್ಕೆ ತಲುಪಿತು. ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಮೆಜಸ್ಟಿಕ್, ಕಾರ್ಪೋರೇಷನ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.
ಇದನ್ನೂ ಓದಿ: ಭಾರತ್ ಬಂದ್: ದೇಶದಾದ್ಯಂತ ಆರಂಭಗೊಂಡ ಪ್ರತಿಭಟನೆ, ಪಂಜಾಬ್, ಹರಿಯಾಣ ಸಂಪೂರ್ಣ ಬಂದ್


