Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಪಡೆಯುವಲ್ಲಿ ತಮ್ಮ ಪಕ್ಷವು ಭಾರಿ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಆರೋಪ ಮಾಡಿದ್ದಾರೆ.

ಸಿಲಿಗುರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ, ‘ಪಕ್ಷವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದೆ. ಆದರೆ, ಶಾಲಾ ಪರೀಕ್ಷೆಗಳ ಕಾರಣದಿಂದ ಅನುಮತಿ ನೀಡಲಾಗಿಲ್ಲ’ ಎಂದರು.

‘ಪರೀಕ್ಷೆ ಕಾರಣ ನೀಡಿ ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ನಮಗೆ ಅನುಮತಿ ಸಿಗದ ಕಾರಣ ನಾವು ರಸ್ತೆ ತಡೆಗಳನ್ನು ಎದುರಿಸುತ್ತಿದ್ದೇವೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯು ಅಸ್ಸಾಂ ಸೇರಿದಂತೆ ಈಶಾನ್ಯದಲ್ಲಿ ಸಮಸ್ಯೆಗಳನ್ನು ಎದುರಿಸಿದೆ. ಈಗ ಅದು ಟಿಎಂಸಿ ಆಡಳಿತದ ಪಶ್ಚಿಮ ಬಂಗಾಳದಲ್ಲೂ ಸಮಸ್ಯೆಗಳನ್ನು ಎದುರಿಸುತ್ತಿದೆ’ ಎಂದು ಅವರು ಹೇಳಿದರು.

‘ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳಿಗೆ ವಿನಾಯಿತಿ ಸಿಗುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ’ ಎಂದು ಹೇಳಿದರು.

ಜನವರಿ 14 ರಂದು ಮಣಿಪುರದಲ್ಲಿ ಪ್ರಾರಂಭವಾದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದೆ. ಎರಡು ದಿನಗಳ ವಿರಾಮದ ನಂತರ ಜನವರಿ 28 ರಂದು ಯಾತ್ರೆ ಪುನರಾರಂಭವಾಗಲಿದೆ.

‘ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿ ಮುರಿದು ಬೀಳಲು ಅಧೀರ್ ಚೌಧರಿ ಕಾರಣ, ಎರಡನೆಯದಾಗಿ, ಎಲ್ಲಾ ವಿರೋಧ ಪಕ್ಷಗಳು ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತವೆ, ಯಾರಿಗೂ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳು ಇರುವುದರಿಂದ ಸರ್ಕಾರವು ನಿರ್ಧಾರ ತೆಗೆದುಕೊಂಡಿರಬೇಕು’ ಎಂದು ಟಿಎಂಸಿ ಸಂಸದ ಸಂತನು ಸೇನ್ ಹೇಳಿದ್ದಾರೆ.

ಇದನ್ನೂ ಓದಿ; ಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...