Homeಮುಖಪುಟಭಾರತ್ ಜೋಡೋ ಯಾತ್ರೆ - ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಎರಡನೇ ದಿನದಂದು ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಈ ಯಾತ್ರೆಯು ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ. ಯಾತ್ರೆಯಲ್ಲಿ ತಾನೋರ್ವ ಯಾತ್ರಿಯಾಗಿ ಮಾತ್ರ ಭಾಗವಹಿಸುತ್ತಿದ್ದು, ಯಾತ್ರೆಯನ್ನು ಮುನ್ನಡೆಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ಯಾತ್ರೆಯ ಬಗ್ಗೆ ಆರೆಸ್ಸೆಸ್-ಬಿಜೆಪಿಗೆ ಅವರದ್ದ ಆದ ಅಭಿಪ್ರಾಯಗಳಿವೆ. ಅವರ ಅಭಿಪ್ರಾಯಗಳಿಗೆ ಸ್ವಾಗತ, ಆದರೆ ಕಾಂಗ್ರೆಸ್ ಪಕ್ಷವು ಯಾತ್ರೆಯ ಮೂಲಕ ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿ ದೇಶವನ್ನು ವಿಭಜಿಸಿದೆ ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷ ತೊರೆಯುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಿದ ಅವರು,‘‘ಪಕ್ಷ ತೊರೆಯುವ ನಾಯಕರು ಒತ್ತಡದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯ ನೆರೆ ಪರಿಶೀಲನೆ ಸಭೆಯಲ್ಲಿ ನಿದ್ದೆ ಹೊಡೆದ ಸಚಿವ ಆರ್‌. ಅಶೋಕ್‌: ಕಾಂಗ್ರೆಸ್‌‌ ಆಕ್ರೋಶ

ದೇಶದ ಮೇಲೆ ಒಂದೇ ದೃಷ್ಟಿಕೋನವನ್ನು ಹೇರುವ ಪ್ರಯತ್ನ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಪಕ್ಷಗಳನ್ನು ಒಗ್ಗೂಡಿಸುವುದು ಮತ್ತು ಯಾತ್ರೆ ಎರಡು ಪ್ರತ್ಯೇಕ ವಿಷಯಗಳಾಗಿವೆ. ಆದರೆ ಇವೆರಡೂ ಒಟ್ಟಿಗೆ ಬಂದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಯಾತ್ರೆಯ ಸಂದರ್ಭದಲ್ಲಿ ತಾನು ಸಂವಾದ ನಡೆಸಿದ ಯುವತಿಯೊಬ್ಬಳನ್ನು ಉಲ್ಲೇಖಿಸಿದ ಅವರು, ಭಾರತದ ಜನರು ಭಾರತದಲ್ಲಿ ಸಾಮರಸ್ಯದಿಂದ ಬದುಕುತ್ತಿದ್ದಾರೆ, ಆದರೆ ದೇಶವನ್ನು ಧಾರ್ಮಿಕ ಮತ್ತು ರಾಜ್ಯಗಳ ನಡುವೆ ವಿಭಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಬೆಲೆ ಏರಿಕೆ ಮತ್ತು ನಿರುದ್ಯೋಗ ಉತ್ತುಂಗದಲ್ಲಿರುವಾಗ ಕೇವಲ ಎರಡು-ಮೂರು ವ್ಯಾಪಾರ ಸಂಸ್ಥೆಗಳು ದೇಶವನ್ನು ನಿಯಂತ್ರಿಸುತ್ತಿವೆ. ಆದರೆ ದೇಶದ ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ರಾಹುಲ್ ಗಾಂಧಿ ಅವರು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸುವ 3,570 ಕಿಮೀ ‘ಭಾರತ್ ಜೋಡೋ’ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ.

ಯಾತ್ರೆಯ ಸಮಯದಲ್ಲಿ, ರಾಹುಲ್ ಗಾಂಧಿ ಮತ್ತು ಅವರ ಸಂಗಡಿಗರು ಪ್ರತಿದಿನ ಬೆಳಿಗ್ಗೆ 7 ರಿಂದ 10.30 ರವರೆಗೆ ಆಯ್ದ ಜನರನ್ನು ಭೇಟಿಯಾಗಲಿದ್ದಾರೆ. ಸಂಜೆ ಸಾಮೂಹಿಕ ಸಂಪರ್ಕ ಕಾರ್ಯಕ್ರಮ ನಡೆಯಲಿದೆ. ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಯಾತ್ರಿಗಳು ದಿನದ ಕೊನೆಯಲ್ಲಿ ವಿಶೇಷವಾಗಿ ನಿರ್ಮಿಸಲಾದ ಕಂಟೈನರ್‌ಗಳಲ್ಲಿ ವಿಶ್ರಾಂತಿ ಪಡೆಯುತ್ತಾರೆ.

ಯಾತ್ರೆಗೆ ಮುನ್ನ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಮಾತನಾಡಿ, ಇದು ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ನೀಡಲಿದೆ ಮತ್ತು ಹೊಸ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಈ ನಡುವೆ ಬಹು ನಿರೀಕ್ಷಿತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಸೆಪ್ಟೆಂಬರ್ 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 21 ರೊಳಗೆ ಕಾಂಗ್ರೆಸ್ ಹೊಸ ಅಧ್ಯಕ್ಷರನ್ನು ಹೊಂದಬೇಕಿತ್ತು, ಆದರೆ ಗಡುವನ್ನು ಒಂದು ತಿಂಗಳು ವಿಸ್ತರಿಸಲಾಯಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...