Homeಮುಖಪುಟಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ ಎಂಬ ಆಶಯದೊಂದಿಗೆ 4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದೆ.

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ದೇಶದ ಬಹುದೊಡ್ಡ ಪಾದಾಯಾತ್ರೆಗೆ ಸಜ್ಜಾಗಿದ್ದಾರೆ. ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,500 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭಿಸಲಿದ್ದಾರೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

1991ರಲ್ಲಿ ಹತ್ಯೆಯಾದ ರಾಜೀವ್ ಗಾಂಧಿಯವರ ಸ್ಮಾರಕವಿರುವ ಶ್ರೀಪೆರಂಬದೂರ್‌ನಲ್ಲಿ ನಮನ ಸಲ್ಲಿಸಿದ ನಂತರ ಸೆಪ್ಟಂಬರ್ 07ರಂದು ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಉದ್ಘಾಟನೆಯಾಗಲಿದೆ. ಅಲ್ಲಿಂದು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಯೋಗೇಂದ್ರ ಯಾದವ್

ಹಿರಿಯ ಚಿಂತಕ, ರಾಜಕೀಯ ತಜ್ಞ, ಆಪ್ ತೊರೆದು ಸ್ವರಾಜ್ಯ ಇಂಡಿಯಾ ಪಕ್ಷ ಕಟ್ಟಿರುವ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌ರವರು ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ್ದು, ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ ಎಂದಿದ್ದಾರೆ.

ಅರುಣಾ ರಾಯ್

ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌ರವರು 1990ರ ದಶಕದಲ್ಲಿ ನಾಗರೀಕ ಸೇವೆ ತೊರೆದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನ್ ಕಟ್ಟಿದ್ದರು. ನರೇಗಾ ಯೋಜನೆಗಾಗಿ ಸಾಕಷ್ಟು ದುಡಿದಿರುವ ಅವರು, ದಿನಗೂಲಿ ಕಾರ್ಮಿಕರ ಪರವಾಗಿ ದಿಟ್ಟ ಹೋರಾಟ ನಡೆಸಿದ್ದರು. ಆರ್‌ಟಿಐ ಕಾರ್ಯಕರ್ತರಾಗಿ ಅರವಿಂದ್ ಕೇಜ್ರಿವಾಲ್ ಜೊತೆಗೂಡಿ ಕೆಲಸ ಮಾಡಿದ್ದರು. ಲೋಕಪಾಲ್ ಮಸೂದೆ ಸಂಬಂಧ ಆಪ್ ತೊರೆದು ಹೊರಬಂದ ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ.

ದೇವನೂರ ಮಹದೇವ

ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವರವರು ತಮ್ಮ ಕಥೆಗಳಿಗಾಗಿ ಪ್ರಸಿದ್ದರು. ಅವರ ಇತ್ತೀಚಿಗಿನ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿ ಚರ್ಚೆಗೆ ಕಾರಣವಾಗಿತ್ತು. ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಯಾಗಿ ಸಾಹಿತ್ಯ ಅಕಾಡೆಮಿ ಮತ್ತು ಪ್ರದ್ಮಶ್ರೀ ಪ್ರಶಸ್ತಿಗಳನ್ನು ವಾಪಸ್ ಮಾಡಿದ್ದ ಅವರು ಸ್ವರಾಜ್ ಇಂಡಿಯಾ ಮತ್ತು ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಗಣೇಶ್ ದೇವಿ

ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ‘ಕರ್ನಾಟಕ ಬಿಲ್ಕಿಸ್ ಜೊತೆಗಿದೆ’: ಬಿಜೆಪಿ ಸರ್ಕಾರದ ನಡೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...