Homeಕರ್ನಾಟಕಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

ಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

- Advertisement -
- Advertisement -

ಭಾರತದ ರಾಜಕಾರಣದ ಒಂದು ವಿಶೇಷವಾದ ವಿದ್ಯಮಾನ ನಮ್ಮ ಕಣ್ಣೆದುರಿನಲ್ಲೇ ಘಟಿಸುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3570 ಕಿಲೋಮೀಟರ್ ಉದ್ದದ ಹಾದಿಯನ್ನು ಐದು ತಿಂಗಳ ಅವಧಿಯಲ್ಲಿ, ಕಾಲ್ನಡಿಗೆಯಲ್ಲಿ ಕ್ರಮಿಸುತ್ತಿದ್ದಾರೆ. ಸೆಪ್ಟೆಂಬರ್ 7ನೇ ತಾರೀಕು ಕನ್ಯಾಕುಮಾರಿಯಲ್ಲಿ ಆರಂಭವಾದ ಈ ಪಾದಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಾಗಿ ಇದೀಗ ತೆಲಂಗಾಣದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈಗಾಗಲೇ ಒಟ್ಟು ಸುಮಾರು 1200 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ಕ್ರಮಿಸಿದ್ದಾರೆ.

ಪಾದಯಾತ್ರೆ ಎಂಬುದು ಭಾರತದ ಪರಂಪರೆಯಲ್ಲಿ ಹೊಸದೇನಲ್ಲ. ಹರಕೆ ತೀರಿಸಲು ತೀರ್ಥಕ್ಷೇತ್ರಗಳಿಗೆ ಕಾಲ್ನಡಿಗೆಯಲ್ಲಿ ನಡೆಯುವ ಸಂಪ್ರದಾಯ ಬಹಳ ಹಳೆಯದು. ಧಾರ್ಮಿಕ ಪಾದಯಾತ್ರೆಗಳಲ್ಲದೆ ಸಾಮಾಜಿಕ, ರಾಜಕೀಯ ಉದ್ದೇಶಗಳಿಗಾಗಿ ಸಾಕಷ್ಟು ಪಾದಯಾತ್ರೆಗಳು ನಡೆದಿವೆ. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಗಾಂಧೀಜಿ 1930ರಲ್ಲಿ ನಡೆಸಿದ ದಂಡಿಯಾತ್ರೆ, ನಂತರ 1934ರಲ್ಲಿ ನಡೆಸಿದ ಅಸ್ಪೃಶ್ಯತಾ ವಿರೋಧಿ ಪಾದಯಾತ್ರೆಗಳು ಕೋಟ್ಯಂತರ ಜನರಲ್ಲಿ ಸಂಚಲನ ಮೂಡಿಸಿದ ಇತಿಹಾಸವಿದೆ. ಸ್ವಾತಂತ್ರ್ಯಾ ನಂತರದಲ್ಲಿ, 1951ರಲ್ಲಿ ವಿನೋಬಾ ಭಾವೆ ಅವರು ಭೂದಾನ ಚಳವಳಿಯ ಭಾಗವಾಗಿ ಪಾದಯಾತ್ರೆ ನಡೆಸಿದ್ದರು. 1983ರಲ್ಲಿ ಜನತಾ ಪರಿವಾರದ ನಾಯಕ ಚಂದ್ರಶೇಖರ್ ಅವರು ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಸುಮಾರು ಐದೂವರೆ ತಿಂಗಳ ಕಾಲ ಸುದೀರ್ಘ ಪಾದಯಾತ್ರೆ ನಡೆಸಿದ್ದು ಇತಿಹಾಸದ ಪುಟಗಳಲ್ಲಿ ಸೇರಿಹೋಗಿದೆ.

ಈಗಿನ ರಾಹುಲ್ ಗಾಂಧಿಯ ’ಭಾರತ್ ಜೋಡೋ’ ಪಾದಯಾತ್ರೆ ಕೂಡ ಇದೇ ಸಾಲಿನಲ್ಲಿ ಇತಿಹಾಸದ ಪುಟಗಳಲ್ಲಿ ದಾಖಲಾಗುವುದು ನಿಚ್ಚಳವಾಗಿದೆ.

ಕಳೆದ ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಈ ಪಾದಯಾತ್ರೆ ಆರಂಭವಾದಾಗಲೂ ಇದರ ಪರಿಣಾಮದ ಕುರಿತು ಮಾಧ್ಯಮದವರಿಗಿರಲಿ, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರಿಗೇ ಹೆಚ್ಚಿನ ನಿರೀಕ್ಷೆ ಇರಲಿಲ್ಲ. ಮಾತ್ರವಲ್ಲ, ನಿಜಕ್ಕೂ ರಾಹುಲ್ ಗಾಂಧಿ ಸಾವಿರಾರು ಕಿಲೋಮೀಟರ್ ದೂರ ನಡೆಯುತ್ತಾರಾ ಎಂಬ ಅನುಮಾನ ವ್ಯಕ್ತಪಡಿಸಿದವರೇ ಹೆಚ್ಚು. ಆದರೆ ಆಶ್ಚರ್ಯಕರ ರೀತಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಜನ ಬೆಂಬಲ ಸಿಕ್ಕಿ ಸಾಗುತ್ತಿದೆ.

ದಾರಿಯುದ್ದಕ್ಕೂ ಸಾವಿರಾರು ಜನರು ಪಾದಯಾತ್ರೆಯೊಂದಿಗೆ ಸೇರಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ. ರಾಹುಲ್ ಗಾಂಧಿಯನ್ನು ನೋಡಲಿಕ್ಕೆಂದು ಮಹಿಳೆಯರು, ಮಕ್ಕಳನ್ನೂ ಒಳಗೊಂಡು ಉರಿಬಿಸಿಲನ್ನೂ ಲೆಕ್ಕಿಸದೆ ತಾಸುಗಟ್ಟಲೆ ರಸ್ತೆಯಲ್ಲಿ ಕಾಯುತ್ತಾ ನಿಲ್ಲುತ್ತಿದ್ದಾರೆಂದರೆ ನಂಬುವುದು ಕಷ್ಟ. ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವವರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ಯುವಕ-ಯುವತಿಯರು ಎಂಬುದು ಗಮನಾರ್ಹ. ಮತ್ತೊಂದು ವಿಶೇಷವೆಂದರೆ ಈ ಪಾದಯಾತ್ರೆಗೆ ಸಮಾಜಮುಖಿ ಚಿಂತಕರು, ಸಂಘಟನೆಗಳನ್ನೂ ಒಳಗೊಂಡ ನಾಗರಿಕ ಸಮಾಜದ ಸಕ್ರಿಯ ಬೆಂಬಲ ವ್ಯಕ್ತವಾಗಿರುವುದು.

ರಾಜಕೀಯ ಪಕ್ಷವೊಂದರ ಈ ಪಾದಯಾತ್ರೆಯಲ್ಲಿ ಸಿವಿಲ್ ಸೊಸೈಟಿ ಯಾಕೆ ಭಾಗವಹಿಸಬೇಕು?

ಈ ಪ್ರಶ್ನೆಗೆ ಉತ್ತರ ಇಂದಿನ ಸಾಮಾಜಿಕ, ರಾಜಕೀಯ ಸನ್ನಿವೇಶದಲ್ಲಿದೆ. ದೇಶದ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ವಲಯಗಳಲ್ಲಿ ಹಿಂದುತ್ವದ ಹೆಸರಿನಲ್ಲಿ ದಾಂಧಲೆ ಎಬ್ಬಿಸುತ್ತಿರುವ ಶಕ್ತಿಗಳ ಆಟಾಟೋಪ ಎಲ್ಲ ಎಲ್ಲೆಗಳನ್ನೂ ಮೀರಿ, ನಮ್ಮ ಪ್ರಜಾತಂತ್ರದ ಬುನಾದಿಯನ್ನೇ ಅಲುಗಾಡುತ್ತಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಬದುಕುತ್ತಿದ್ದೇವೆ. ಎಲ್ಲ ಕಾನೂನುಗಳನ್ನು ಗಾಳಿಗೆ ತೂರಿ, ಸಂವಿಧಾನಿಕ ಸಂಸ್ಥೆಗಳನ್ನು ಧ್ವಂಸಗೊಳಿಸಲಾಗಿದೆ. ಹಿಂದುತ್ವ, ಹಿಂದೂ ರಾಷ್ಟ್ರದ ಹೆಸರಿನಲ್ಲಿ ಹಿಟ್ಲರ್‌ಶಾಹಿ ಫ್ಯಾಸಿಸ್ಟ್ ಆಡಳಿತವನ್ನ ಹೇರಲು ಆರೆಸ್ಸೆಸ್-ಬಿಜೆಪಿಗಳು ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿರುವ ಕರಾಳ ಸನ್ನಿವೇಶಕ್ಕೆ ನಾವು ಸಾಕ್ಷಿಯಾಗಿದ್ದೇವೆ. ಪ್ರಜಾತಾಂತ್ರಿಕ ಆಳ್ವಿಕೆಗೆ ತಳಹದಿಯಾಗಿರುವ ಭಿನ್ನಮತ ಹಾಗೂ ವಿರೋಧ ಪಕ್ಷಗಳನ್ನು ನಿರ್ಮೂಲನೆ ಮಾಡುವ ಯೋಜನೆ ತೀವ್ರಗತಿಯಲ್ಲಿ ಸಾಗುತ್ತಿದೆ.

ಇದನ್ನೂ ಓದಿ: ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ಕೆಲವೇ ಕ್ರೋನಿ ಕಂಪನಿಗಳು ಹಾಗೂ ಗದ್ದುಗೆಯಲ್ಲಿರುವ ಸರ್ಕಾರ ಜಂಟಿಯಾಗಿ ನಡೆಸುತ್ತಿರುವ ಎಗ್ಗುಸಿಗ್ಗೂ ಇಲ್ಲದ ಲೂಟಿಯಿಂದಾಗಿ ಆರ್ಥಿಕತೆ ನೆಲಕಚ್ಚಿದೆ, ನಿರುದ್ಯೋಗ ತಾರಕಕ್ಕೇರಿದೆ, ಬೆಲೆಯೇರಿಕೆ ಸುಡುತ್ತಿದೆ, ದೇಶದಲ್ಲಿ ಬಡತನ ದಾಖಲೆ ಪ್ರಮಾಣಕ್ಕೇರಿದೆ. ಇಂತಹ ದುರಾಡಳಿತ ಹಾಗೂ ಲೂಟಿಯನ್ನು ಮರೆಮಾಚಲು ಧರ್ಮ ಧರ್ಮಗಳ ನಡುವೆ, ಜಾತಿಜಾತಿಗಳ ನಡುವೆ ದ್ವೇಷವನ್ನು ಬೆಳೆಸಿ ಹಿಂಸಾಚಾರವನ್ನು ಪ್ರಾಯೋಜಿಸುವ/ ಪ್ರಚೋದಿಸುವ ಹಿಟ್ಲರ್ ಮಾದರಿ ರಾಜಕಾರಣ ಗದ್ದುಗೆಯೇರಿ ಭದ್ರವಾಗಿ ನೆಲೆಯೂರಿದೆ.

ರಾಹುಲ್ ಗಾಂಧಿ ನೇತೃತ್ವದ ’ಭಾರತ್ ಜೋಡೋ ಯಾತ್ರೆ’ಯು ನಡೆಯುತ್ತಿರುವುದು ಕರಾಳ ಕಾರ್ಮೋಡಗಳು ಕವಿದಿರುವ ಚಾರಿತ್ರಿಕ ಸನ್ನಿವೇಶದಲ್ಲಿ ಎಂಬುದನ್ನು ನಾವು ಮರೆಯುವಂತಿಲ್ಲ. ರಾಜಕೀಯ ಪಕ್ಷವೊಂದಕ್ಕೆ ಅದರದೇ ಆದ ರಾಜಕೀಯ ಲೆಕ್ಕಾಚಾರ ಇದ್ದೇ ಇರುತ್ತದೆ ಎಂಬುದರಲ್ಲಿ ಅನುಮಾನವೇ ಇಲ್ಲ, ನಿಜ. ಆದರೆ ಈ ಪಾದಯಾತ್ರೆ ಎತ್ತಿರುವ ಪ್ರಮುಖ ನಾಲ್ಕು ಪ್ರಶ್ನೆಗಳು ಇಂದು ಭಾರತ ಎದುರಿಸುತ್ತಿರುವ ಅತ್ಯಂತ ಗಂಭೀರ ಸವಾಲುಗಳಾಗಿವೆ. 1) ಬೆಲೆಯೇರಿಕೆ 2)ನಿರುದ್ಯೋಗ 3)ಭ್ರಷ್ಟಾಚಾರ ಮತ್ತು 4) ಪ್ರಜೆಗಳ ನಡುವೆ ದ್ವೇಷ, ಹಿಂಸೆಗಳನ್ನು ಬೆಳೆಸುವ ರಾಜಕಾರಣ.

ಎಲ್ಲ ಪ್ರಜಾತಾಂತ್ರಿಕ ಶಕ್ತಿಗಳು ಈ ಅಂಶಗಳ ಬಗ್ಗೆ ಒಗ್ಗೂಡಿ ಹೋರಾಡಬೇಕಿರುವ ಈ ಸಂದರ್ಭದಲ್ಲಿ ಪ್ರಮುಖ ವಿರೋಧ ಪಕ್ಷವೊಂದು ಹೋರಾಟಕ್ಕೆ ಇಳಿದಿರುವುದು ಬಹಳ ಸಕಾರಾತ್ಮಕ ಬೆಳವಣಿಗೆ. ಇದೇ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಸಂಸತ್ತಿನೊಳಗೆ ಮತ್ತು ಹೊರಗೆ ನಿರಂತರ ದನಿಯೆತ್ತುತ್ತಾ ಬಂದಿರುವುದನ್ನು ಕಾಣಬಹುದು. ಈ ಹಿನ್ನೆಲೆಯಲ್ಲಿ ನಾಗರಿಕ ಸಮಾಜ ಈ ಪಾದಯಾತ್ರೆಯೊಂದಿಗೆ ಜೊತೆಗೂಡಿ ಹೆಜ್ಜೆಹಾಕಲು ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ.

ಭಾರತ್ ಜೋಡೋ ಯಾತ್ರೆ ಆರಂಭವಾಗುವ ಕೆಲವು ವಾರಗಳ ಮೊದಲೇ ನಾಗರಿಕ ಸಮಾಜದ ಹಲವು ಗಣ್ಯರು ತಮ್ಮ ಬೆಂಬಲ ಘೋಷಿಸಿದ್ದರು. ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಅರುಣಾ ರಾಯ್, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್, ಚಿಂತಕ-ಲೇಖಕ ದೇವನೂರ ಮಹಾದೇವ, ಸಫಾಯಿ ಕರ್ಮಚಾರಿ ಆಂದೋಲನದ ಬೇಜ್ವಾಡಾ ವಿಲ್ಸನ್, ಖ್ಯಾತ ಮಾಹಿತಿ ಹಕ್ಕು ಕಾರ್ಯಕರ್ತೆ ಅಂಜಲಿ ಭಾರದ್ವಾಜ್, ಹಿರಿಯ ಪತ್ರಕರ್ತ ಮೃಣಾಲ್ ಪಾಂಡೆ, ಮಾಜಿ ಸಂಸದ ಧರ್ಮವೀರ ಗಾಂಧಿ, ಭಾಷಾ ತಜ್ಞ ಗಣೇಶ್ ದೇವಿ, ಯೋಜನಾ ಆಯೋಗದ ಮಾಜಿ ಸದಸ್ಯೆ ಸಯೀದಾ ಹಮೀದ್, ನಿವೃತ್ತ ನ್ಯಾಯಾಧೀಶ ಕೋಲ್ಸೆ ಪಾಟೀಲರಂತಹ ಗಣ್ಯರು ಮಾತ್ರವಲ್ಲದೆ ಕಾರ್ಮಿಕ, ದಲಿತ, ರೈತ, ಪರಿಸರ, ಮಾನವ ಹಕ್ಕು ಹೋರಾಟಗಳ ಹತ್ತು ಹಲವು ಸಂಘಟನೆಗಳು ಸಕ್ರಿಯ ಬೆಂಬಲ ನೀಡಿವೆ.

ಈ ಭಾರತ್ ಜೋಡೋ ಯಾತ್ರೆ ಮಾಮೂಲಿ ರಾಜಕೀಯ ಗಿಮಿಕ್ ಮಾತ್ರವೆ?

ಮೊದಲಿಗೆ ಈ ಪಾದಯಾತ್ರೆಯ ರಾಜಕೀಯ, ಸಾಮಾಜಿಕ/ರಾಜಕೀಯ ಆಯಾಮಗಳನ್ನು ನೋಡೋಣ. ಪ್ರಜಾತಂತ್ರದ ಕಾವಲು ನಾಯಿ ಎನಿಸಿಕೊಂಡ ಮಾಧ್ಯಮಗಳು ಆಳುವವರ ಪರವಾಗಿ ಬೇಟೆ ನಾಯಿಗಳಂತೆ ವರ್ತಿಸುತ್ತಿರುವ, ಪ್ರಜಾತಂತ್ರವನ್ನು ಜೀವಂತವಾಗಿರಿಸಬೇಕಾದ ಸಂಸತ್ತು, ನ್ಯಾಯಾಲಯ ಮತ್ತಿತರೆ ಸಂಸ್ಥೆಗಳು ತಮ್ಮ ಕರ್ತವ್ಯದಲ್ಲಿ ವಿಫಲವಾಗುತ್ತಿರುವ ಇಂದಿನ ಸಂದರ್ಭದಲ್ಲಿ ಬೀದಿಯಲ್ಲಿ ಜನರೊಡನೆ ಸಂಭಾಷಿಸುತ್ತಾ ಹೆಜ್ಜೆಹಾಕುವ ಕ್ರಿಯೆ ಅನಿವಾರ್ಯ ಮಾತ್ರವಲ್ಲ, ಬಹಳ ಪ್ರಭಾವಶಾಲಿಯೂ ಹೌದು.

ದ್ವೇಷ ರಾಜಕಾರಣವನ್ನೇ ಆಯುಧವನ್ನಾಗಿಸಿಕೊಂಡು ತಮಗೆ ಎದುರಾಳಿಗಳೇ ಇಲ್ಲವೆಂಬಂತೆ ಮೆರೆಯುತ್ತಿರುವ ಫ್ಯಾಸಿವಾದಕ್ಕೆ, ಸಾವಿರಾರು ಜನರು ಜೊತೆಗೂಡಿ ಹೆಜ್ಜೆಹಾಕುವ ಕ್ರಿಯೆಯು ಒಂದು ಸ್ಪಷ್ಟ ಪ್ರತಿರೋಧ. ದಶಕಗಳಿಂದಲೂ ಸಾಮಾನ್ಯವಾಗಿ ಸೆಮಿನಾರ್ ಹಾಲ್‌ಗಳಿಗೆ ಸೀಮಿತವಾಗಿರುವ ಕೋಮುವಾದಿ-ಫ್ಯಾಸಿಸ್ಟ್ ವಿರೋಧಿ ದನಿ ಸಾವಿರಾರು ಮೈಲುಗಳುದ್ದ ದೇಶದ ಬೀದಿಗಳಲ್ಲಿ ಲಕ್ಷಾಂತರ ದನಿಗಳಾಗಿ ಮಾರ್ದನಿಸುವುದರ ಪ್ರಾಮುಖ್ಯತೆಯನ್ನು ನಾವು ಮನಗಾಣಬೇಕು.

ಭಾರತ್ ಜೋಡೋ ಪ್ರತಿಪಾದಿಸುತ್ತಿರುವ ಸಂದೇಶವನ್ನು ಮುಂದಿಟ್ಟುಕೊಂಡು ಯಾವುದೇ ರಾಜಕೀಯ ಪಕ್ಷ ತನ್ನ ಬೆಂಬಲಿಗರನ್ನು ಮೊಬಿಲೈಸ್ ಮಾಡಿ ಕರೆತರುವುದು ಒಳ್ಳೆಯ ಬೆಳವಣಿಗೆಯೇ. ಆದರೆ ಈ ಯಾತ್ರೆಯಲ್ಲಿ ಸ್ವಯಂಪ್ರೇರಿತರಾಗಿ ಜನರು ಹರಿದು ಬರುತ್ತಿರುವುದು ಗಮನಿಸಲೇಬೇಕಾದ ಮತ್ತೊಂದು ಪ್ರಮುಖ ಅಂಶ.

ಫ್ಯಾಸಿಸಂ ವಿರುದ್ಧದ ದನಿಯಲ್ಲಿ ಸೆಕ್ಯುಲರಿಸಂ ಪರ ವಾದಗಳು ಅಥವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಎಂಬ ರೂಢಿಗತ ನರೆಟಿವ್‌ಗಳ ಬದಲಿಗೆ ವಿಶಾಲ ಜನಸಮುದಾಯಗಳ ದೈನಂದಿನ ಸಮಸ್ಯೆಗಳನ್ನು ಯಶಸ್ವಿಯಾಗಿ ಮುಂದೆ ತಂದಿರುವುದು ಇದರ ಸಾಧನೆ ಎನ್ನಲೇಬೇಕು. ಎಡ, ಪ್ರಗತಿಪರ ಶಕ್ತಿಗಳು ಈ ಅಂಶಗಳ ಬಗ್ಗೆ ಖಚಿತ ನಿಲುವನ್ನು ಹೊಂದಿದ್ದರೂ ಜನಪ್ರಿಯ ಮಾದರಿಗಳನ್ನು ಅನ್ವೇಷಿಸಿ, ಬೀದಿಯಲ್ಲಿ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲಾಗಿಲ್ಲ ಎಂಬ ವಾಸ್ತವವನ್ನು ಆತ್ಮವಿಮರ್ಶಾತ್ಮಕವಾಗಿ ಸ್ವೀಕರಿಸಬೇಕು.

ಈ ಹಿನ್ನೆಲೆಯಲ್ಲಿ ಭಾರತ್ ಜೋಡೊ ಯಾತ್ರೆ ಬಹುಮಟ್ಟಿಗೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಯಾತ್ರೆಯಾಗಿದ್ದರೂ ಹಲವು ಜನಪರ ಚಳವಳಿಗಳು, ಚಿಂತಕರು, ಗಣ್ಯರನ್ನೂ ಒಳಗೊಂಡ ಒಟ್ಟಾರೆ ನಾಗರಿಕ ಸಮಾಜದ ದನಿಯಾಗಿದೆ ಎಂದರೆ ತಪ್ಪಾಗಲಾರದು.

ಪಾದಯಾತ್ರೆಯ ಪರಿಣಾಮಗಳೇನು?

ಆರೆಸ್ಸೆಸ್-ಬಿಜೆಪಿಗಳು ಸೃಷ್ಟಿಸುವ ಭ್ರಮಾತ್ಮಕ, ಭಾವನಾತ್ಮಕ ಸಮಸ್ಯೆಗಳಿಗೆ ನಾಗರಿಕ ಸಮಾಜ ಹಾಗೂ ರಾಜಕೀಯ ಪಕ್ಷಗಳು ಪ್ರತಿಕ್ರಿಯಾತ್ಮಕ ಕ್ರಿಯೆಗಳಲ್ಲೇ ಮುಳುಗಿಹೋಗುವುದು ಅನೂಚಾನವಾಗಿ ನಡೆದು ಬಂದ ದುರದೃಷ್ಟಕರ ವಿದ್ಯಮಾನ. ಆದರೆ ಈ ಯಾತ್ರೆ ಬಹಳ ಸಕಾರಾತ್ಮಕವಾದ, ಪ್ರೊಆಕ್ಟಿವ್ ಆದ ಕ್ರಿಯೆಯಾಗಿದ್ದು ಪ್ರತಿಕ್ರಿಯಿಸಬೇಕಾದ ಅನಿವಾರ್ಯತೆ ಆರೆಸ್ಸೆಸ್-ಬಿಜೆಪಿಗಳಿಗೆ ಬಂದೊದಗಿದೆ. ಆದರೆ ಪಾದಯಾತ್ರೆಗೆ ಅಭೂತಪೂರ್ವ ಜನಮನ್ನಣೆ, ಬೆಂಬಲ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಯಾವರೀತಿ ಪ್ರತಿಕ್ರಿಯಿಸಬೇಕು ಎಂಬುದು ತೋಚದೆ ದಿಕ್ಕೆಟ್ಟ ಸ್ಥಿತಿಯಲ್ಲಿರುವುದು ನಿಚ್ಚಳವಾಗಿ ಕಾಣುತ್ತಿದೆ. ಎಂದಿನಂತೆ ಅಗ್ಗದ-ಕೀಳುಮಟ್ಟದ ಅಪಪ್ರಚಾರಕ್ಕಿಳಿದಿದ್ದು, ಅವು ತಿರುಗುಬಾಣವಾಗಿ ಅವರ ತಲೆನೋವನ್ನು ಹೆಚ್ಚಿಸಿದೆ. ರಾಹುಲ್ ಗಾಂಧಿಯ ಟಿ ಶರ್ಟ್ ಬೆಲೆಯ ಬಗ್ಗೆ ಪ್ರಶ್ನೆಯೆತ್ತಿದರೆ ಮೋದಿಯ ದಶಲಕ್ಷ ಬೆಲೆಯ ಸೂಟ್ ಸಂಗತಿ ತಿರುಗುಬಾಣವಾಯ್ತು. ವಿವೇಕಾನಂದರ ಪ್ರತಿಮೆಗೆ ಗೌರವ ಸಲ್ಲಿಸಿಲ್ಲವೆಂಬ ಹಸಿ ಸುಳ್ಳು, ಸಿನಿಮಾ ನಟಿಯೊಬ್ಬರ ಕೈಹಿಡಿದು ನಡೆದ ಬಗ್ಗೆ ಕೀಳು ಪ್ರಚಾರ ಇತ್ಯಾದಿಗಳು ಬಿಜೆಪಿಗರಿಗೆ ಮುಖಭಂಗವಾಗಿ ಪರಿಣಮಿಸಿವೆ.

ನಾಗಪುರದ ಪಂಡಿತರು ಇನ್ನು ಯಾವ ರೀತಿಯ ಹೊಸ ಅಸ್ತ್ರವನ್ನು ಸಂಶೋಧಿಸಿ ತರುತ್ತಾರೆ ಎಂಬುದನ್ನು ಕಾದುನೋಡಬೇಕು.

ದಶದಿಕ್ಕುಗಳಿಂದಲೂ ಆವರಿಸಿಕೊಳ್ಳುತ್ತಿರುವ ಹಿಟ್ಲರ್‌ಶಾಹಿ ಶಕ್ತಿಗಳ ಅಟ್ಟಹಾಸವನ್ನು ಕಂಡು ಆತಂಕದಲ್ಲಿ, ಅನಾಥಪ್ರಜ್ಞೆಯಲ್ಲಿದ್ದ ದಮನಿತ, ಅಲ್ಪಸಂಖ್ಯಾತ ಸಮುದಾಯಗಳಿಗೆ, ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯಕ್ಕೆ ಭಾರತ್ ಜೋಡೋ ಯಾತ್ರೆ ಒಂದು ಮಟ್ಟದ ಭರವಸೆಯನ್ನು ಮೂಡಿಸಿದೆ.ಈ ಸಮುದಾಯಗಳಿಗೆ ರಾಹುಲ್ ಗಾಂಧಿ ಒಂದು ಸಾಂತ್ವನದ ದನಿಯಂತೆ ತೋರುತ್ತಿದ್ದಾರೆ. ರಾಹುಲ್ ಗಾಂಧಿಯ ಸರಳ ನಡೆ ನುಡಿ, ಜನಸಾಮಾನ್ಯರೊಂದಿಗೆ ಯಾವುದೇ ಕೃತ್ರಿಮತೆಯಿಲ್ಲದೆ ಬೆರೆಯುವ ಸ್ವಭಾವ, ಸಮಸ್ಯೆಗಳನ್ನು ಆಲಿಸುವ, ಕಷ್ಟಗಳಿಗೆ ಮರುಗುವ ಹೃದಯವಂತಿಕೆ ಯಾತ್ರೆಯುದ್ದಕ್ಕೂ ಅನಾವರಣಗೊಳ್ಳುತ್ತಿದೆ.

ರಾಹುಲ್ ಗಾಂಧಿ ಜನಪ್ರಿಯ ರಾಜಕಾರಣಿಯಾಗಿ ನೆಲೆಗೊಂಡಿದ್ದು ಈ ಯಾತ್ರೆಯ ಪ್ರಮುಖ ಪರಿಣಾಮಗಳಲ್ಲೊಂದು. ರಾಹುಲ್ ಗಾಂಧಿಯನ್ನು ’ನಾಲಾಯಕ್ ವ್ಯಕ್ತಿ’, ’ಪಪ್ಪು’ ಎಂದು ಮಾಧ್ಯಮಗಳ ಮೂಲಕ, ಸಾಮಾಜಿಕ ಮಾಧ್ಯಮಗಳ ಮೂಲಕ ಬಿಂಬಿಸಲು ಕಳೆದೊಂದು ದಶಕದಿಂದ ನೂರಾರು ಕೋಟಿಗಳನ್ನು ಸುರಿದು ಯಶಸ್ವಿಯಾಗಿದ್ದ ಗೋಬೆಲ್ಸ್ ಸಂತತಿಯ ಹೀನ ತಂತ್ರವನ್ನು ಈ ಪಾದಯಾತ್ರೆ ಮಕಾಡೆ ಕೆಡವಿದೆ. ಯಾತ್ರೆ ಸಾಗಿದಂತೆಲ್ಲ ದಿನೇದಿನೇ ರಾಹುಲ್ ಗಾಂಧಿಯ ವ್ಯಕ್ತಿತ್ವ ಜನರ ದೃಷ್ಟಿಯಲ್ಲಿ ಎತ್ತರಕ್ಕೆ ಬೆಳೆಯುತ್ತಿದೆ.

ಅಷ್ಟು ಮಾತ್ರವಲ್ಲದೆ, ಜನರನ್ನು ಸೆಳೆಯುವ ನಾಯಕನಾಗಿ ಹೊರಹೊಮ್ಮಿರುವ ರಾಹುಲ್ ತಮ್ಮದೇ ಕಾಂಗ್ರೆಸ್ ಪಕ್ಷದೊಳಗೆ ವರ್ಚಸ್ಸನ್ನು ಹೆಚ್ಚಿಸಿಕೊಂಡಿದ್ದಾರೆ. ರಾಹುಲ್ ಗಾಂಧಿಯ ನಾಯಕತ್ವವನ್ನು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದ ಭಿನ್ನಮತೀಯ ಬಣದ ಬಾಯಿಗೆ ಸದ್ಯ ಬೀಗ ಬಿದ್ದಂತೆಯೂ ಆಗಿದೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಎಲ್ಲಕ್ಕಿಂತ ಮುಖ್ಯವಾಗಿ ಸುದೀರ್ಘ ನಿದ್ರೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ನಾಯಕ ಗಣಕ್ಕೆ ಪಾದಯಾತ್ರೆಯ ಮೂಲಕ ಚಾಟಿಯೇಟು ಕೊಟ್ಟು ಎಬ್ಬಿಸಿರುವುದು ರಾಹುಲ್ ಗಾಂಧಿಯ ಸಾಧನೆ ಎನ್ನಲೇಬೇಕು. ಅನಿವಾರ್ಯ ಕರ್ಮವೆಂಬಂತೆ ಅರೆಮನಸ್ಸಿನಿಂದ ಕ್ರಿಯೆಗಿಳಿದಿದ್ದ ಕೆಲವು ನಾಯಕರೂ ಕೂಡ ಯಾತ್ರೆಗೆ ಸಿಕ್ಕ ಜನಸ್ಪಂದನೆ, ಯಶಸ್ಸು ಕಂಡು ನಂತರದ ದಿನಗಳಲ್ಲಿ ಉತ್ಸಾಹದಿಂದಲೇ ತೊಡಗಿಸಿಕೊಂಡಿದ್ದನ್ನು ಕಾಣಬಹುದು. ಈ ಒಟ್ಟಾರೆ ಪ್ರಕ್ರಿಯೆಯಲ್ಲಿ ಆಶ್ಚರ್ಯವೆಂಬಂತೆ ಯುವ ಕಾರ್ಯಕರ್ತರು ತೊಡಗಿಸಿಕೊಂಡಿದ್ದು ಮುದಿಯಾಗಿದ್ದ ಕಾಂಗ್ರೆಸ್ ಪಕ್ಷದಲ್ಲಿ ವಿಶೇಷ ಬೆಳವಣಿಗೆ ಎನ್ನಲೇಬೇಕು. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಖರ್ಗೆಯವರು ಪಕ್ಷದ ಎಲ್ಲ ಸ್ಥರಗಳಲ್ಲಿ ಯುವಕರಿಗೆ ಶೇಕಡ 50%ರಷ್ಟು ಸ್ಥಾನಗಳನ್ನು ಒದಗಿಸುವುದಾಗಿ ಘೋಷಿಸಿದ್ದಾರೆ. ಆದರೆ ರೂಢಿಗತ ರಾಜಕಾರಣದ ಶೈಲಿಗೆ ಒಗ್ಗಿಹೋಗಿರುವ ಕಾಂಗ್ರೆಸ್ ಪಕ್ಷಕ್ಕೆ ಒದಗಿಬಂದಿರುವ ಈ ಹೊಸ ಅವಕಾಶವನ್ನು ಬಳಸಿಕೊಂಡು ತಳಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸಿದರೆ ಮಾತ್ರ ಚುನಾವಣಾ ರಾಜಕೀಯದಲ್ಲಿ ಬಿಜೆಪಿಗೆ ಸವಾಲೊಡ್ಡಬಹುದು.

ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ ಗಾದೆ ಮಾತನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ.

“ಬಕ್ರೀದ್ ಮೆ ಬಚೇಂಗೆ ತೊ ಮೊಹರಂ ಮೆ ನಾಚೇಂಗೆ” ಅಂದರೆ ಬಕ್ರೀದ್‌ನಲ್ಲಿ ಬದುಕುಳಿದರೆ ಮೊಹರಂನಲ್ಲಿ ಕುಣಿಯಬಹುದು ಅಂತ. ಈ ಗಾದೆ ಮಾತಿನ ತಥ್ಯವನ್ನು ನಾವೆಲ್ಲ ಮನದಟ್ಟು ಮಾಡಿಕೊಳ್ಳುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...