Homeಮುಖಪುಟ"ಭಾರತ್ ಮಾತಾ ಕಿ ಜೈ ವಿವಾದ" : ಮನಮೋಹನ್ ಸಿಂಗ್ ಮೇಲೆ ಮೋದಿ ವಾಗ್ದಾಳಿ

“ಭಾರತ್ ಮಾತಾ ಕಿ ಜೈ ವಿವಾದ” : ಮನಮೋಹನ್ ಸಿಂಗ್ ಮೇಲೆ ಮೋದಿ ವಾಗ್ದಾಳಿ

- Advertisement -
- Advertisement -

“ಭಾರತ್ ಮಾತಾ ಕಿ ಜೈ ಘೋಷಣೆಯು ಕೆಲವರಿಗೆ ಕಿರಿಕಿರಿಯೆನಿಸುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಇಂದು ನಡೆದ ಬಿಜೆಪಿ ಸಂಸತ್ ಸದಸ್ಯರ ಸಭೆಯಲ್ಲಿ ಮನಮೋಹನ್‌ ಸಿಂಗ್‌ರವರ ಹೆಸರು ಹೇಳದೆ ಟೀಕಾಪ್ರಹಾರ ನಡೆಸಿದ್ದಾರೆ. ಆ ಮೂಲಕ ಕಾಂಗ್ರೆಸ್ ನಾಯಕರು ರಾಷ್ಟ್ರೀಯತಾವಾದಿ ಘೋಷಣೆಗೆ “ನಾಚಿಕೆಪಡುತ್ತಾರೆ” ಎಂಬ ಬಿಜೆಪಿಯ ಆರೋಪವನ್ನು ಪ್ರಧಾನಿ ಪುನರ್‌ ಪ್ರತಿಪಾದಿಸಿದ್ದಾರೆ.

ಜವಾಹರಲಾಲ್ ನೆಹರೂ ಅವರ ಮೇಲೆಯೂ ಮುಗಿಬಿದ್ದ ಮೋದಿ “ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿಯೂ ಸಹ, ಭಾರತ್ ಮಾತಾ ಘೋಷಣೆಯ ಬಗ್ಗೆ ಕೆಲವರು ಅದೇ ರೀತಿ ಭಾವಿಸಿದರು” ಎಂದು ಪ್ರಧಾನಿ ಟೀಕಿಸಿದ್ದಾರೆ.

ಕಳೆದ ವಾರ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಾ ಮನಮೋಹನ್‌ ಸಿಂಗ್‌ರವರು “ರಾಷ್ಟ್ರೀಯತೆಯ ಪರಿಕಲ್ಪನೆ ಮತ್ತು ಭಾರತ್ ಮಾತಾ ಕಿ ಜೈ ಘೋಷಣೆ ಇಂದು ದುರುಪಯೋಗವಾಗುತ್ತಿದೆ. ಉಗ್ರವಾದಿ ಜನರು ಸಂಪೂರ್ಣ ಭಾವನಾತ್ಮಕ ನೆಲಯಲ್ಲಿ ಇದನ್ನು ಉಪಯೋಗಿಸುತ್ತಿರುವುದರಿಂದ ಲಕ್ಷಾಂತರ ನಾಗರಿಕರು ಹೊರಗುಳಿಯುವ ಅಪಾಯವಿದೆ” ಎಂದು ಹೇಳಿದ್ದರು.

ಜವಾಹರಲಾಲ್ ನೆಹರೂ ಅವರ ಮಾತನ್ನು ಉಲ್ಲೇಖಿಸಿ, “ಈ ಭಾರತ್ ಮಾತಾ ಯಾರು? ನೀವು ಯಾರ ಗೆಲುವು ಬಯಸುತ್ತೀರಿ? ಪರ್ವತಗಳು ಮತ್ತು ನದಿಗಳು, ಕಾಡುಗಳು ಮತ್ತು ಹೊಲಗಳು ಎಲ್ಲರಿಗೂ ಪ್ರಿಯವಾದವು, ಆದರೆ ಅಂತಿಮವಾಗಿ ಎಣಿಸಲ್ಪಟ್ಟದ್ದು ಭಾರತದ ಜನರು … ವಿಶಾಲವಾದ ಭೂಮಿಯಲ್ಲಿ ಹರಡಿದ್ದಾರೆ” ಎಂದು ಮನಮೋಹನ್‌ ಸಿಂಗ್‌ರವರು ಜವಾಹರಲಾಲ್ ನೆಹರೂ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು.

ಭಾರತ್ ಮಾತಾ ಘೋಷಣೆ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಿವಾದದ ವಸ್ತುವಾಗಿದೆ. ಎರಡು ವರ್ಷಗಳ ಹಿಂದೆ, ಪಕ್ಷದ ಆಗಿನ ಮುಖ್ಯಸ್ಥ ಅಮಿತ್ ಶಾ ಅವರು ಈ ಘೋಷಣೆಯನ್ನು ಕೂಗಲು ಕಾಂಗ್ರೆಸ್ “ನಾಚಿಕೆಪಡುತ್ತದೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...