Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...