Homeಚಳವಳಿಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ’ಭಾರತ ಉಳಿಸಿ’ ರ್‍ಯಾಲಿ ಇಂದು...

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ’ಭಾರತ ಉಳಿಸಿ’ ರ್‍ಯಾಲಿ ಇಂದು…

- Advertisement -
- Advertisement -

ಆರ್ಥಿಕ ಕುಸಿತ, ನಿರುದ್ಯೋಗದ ಹೆಚ್ಚಳ, ರೈತರ ಆತ್ಮಹತ್ಯೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ’ಭಾರತ ಉಳಿಸಿ’ ರ್‍ಯಾಲಿ ಹಮ್ಮಿಕೊಂಡಿದೆ.

ಕಾಂಗ್ರೆಸ್‌ ಪಕ್ಷದ ಮುಖ್ಯ ನಾಯಕರಾದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕರ್ನಾಟಕದಿಂದ ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಸಹ ಭಾಗವಹಿಸಲಿದ್ದಾರೆ.

ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯಿಂದ ವರ್ತಿಸುತ್ತಿದೆ. ಭಾರತದ ಆರ್ಥಿಕತೆ ಐಸಿಯುನಲ್ಲಿದೆ. ಪ್ರಜಾಪ್ರಭುತ್ವದ ಹತ್ಯೆ ನಡೆಯುತ್ತಿದೆ. ಹಾಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಭಾರತ್ ಬಚಾವೊ (ಸೇವ್ ಇಂಡಿಯಾ) ರ್‍ಯಾಲಿ ನಡೆಯುತ್ತಿದೆ ಎಂದು ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದಿಂದ ಕನಿಷ್ಠ ಒಂದು ಲಕ್ಷ ಜನರು ರಾಮ್‌ಲೀಲಾ ಮೈದಾನದಲ್ಲಿ ಇಂದು ಸೇರಲಿದ್ದಾರೆ.

ಕಾಂಗ್ರೆಸ್ಸಿನ ಸಾಗರೋತ್ತರ ಘಟಕಗಳು ವಿಶ್ವದಾದ್ಯಂತ ಇರುವ ಭಾರತದ ರಾಯಭಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸುವ ಮೂಲಕ “ಭಾರತ್ ಬಚಾವೊ” ರ್‍ಯಾಲಿಗೆ ಬೆಂಬಲ ಸೂಚಿಸಲಿವೆ.

“ವಿಭಜನೆ, ದುರಹಂಕಾರ ಮತ್ತು ಅಸಮರ್ಥತೆಯಿಂದ ಭಾರತವನ್ನು ಉಳಿಸುವ ನಮ್ಮ ಸಂದೇಶವು ವಿಶ್ವಾದ್ಯಂತ ಹರಡುತ್ತದೆ” ಎಂದು ಸಾಗರೋತ್ತರ ಕಾಂಗ್ರೆಸ್ ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...