Homeಮುಖಪುಟ'ಭಾರತ ಜೋಡೋ ನ್ಯಾಯ ಯಾತ್ರೆ'ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

‘ಭಾರತ ಜೋಡೋ ನ್ಯಾಯ ಯಾತ್ರೆ’ಗೆ ಮಣಿಪುರ ಹಿಂಸಾಚಾರದ ಕರಿ ನೆರಳು!

- Advertisement -
- Advertisement -

ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿನ ಹಿಂಸಾಚಾರ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಮೇಲೆ ಕರಿನೆರಳು ಬೀರಿದೆ. ಜ.14ರಂದು ಕಾಂಗ್ರೆಸ್‌ ಪಕ್ಷವು ಹಿಂಸಾಚಾರ ಪೀಡಿತ ಮಣಿಪುರದಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ ಆರಂಭಿಸುವ ಗುರಿಯನ್ನು ಹೊಂದಿತ್ತು. ಆದರೆ ಇದಕ್ಕೆ ಮಣಿಪುರ ರಾಜ್ಯ ಸರಕಾರ ಇನ್ನೂ ಅನುಮತಿ ನೀಡಿಲ್ಲ.

ಇಂಡೋ-ಮ್ಯಾನ್ಮಾರ್ ಗಡಿಯ ಮೊರೆಹ್‌ನಲ್ಲಿ ಮಣಿಪುರ ಪೊಲೀಸರು ಮತ್ತು ಸಶಸ್ತ್ರದಾರಿಗಳ ನಡುವೆ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತಿಳಿಯಾಗಿಲ್ಲ. ಸೋಮವಾರ ಬೆಳಗ್ಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮೊರೆಹ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ವಾರ್ಡ್ 7 ಮತ್ತು ಮೊರೆಹ್‌ ಬಜಾರ್‌ನಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಗಳು ನಡೆದಿದೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಾತನಾಡುತ್ತಾ, ಭದ್ರತಾ ಪಡೆಗಳ ಮೇಲಿನ ದಾಳಿಗೆ ಕಾರಣವಾದ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಬಂಧಿಸಲು ಅಸ್ಸಾಂ ರೈಫಲ್ಸ್, ಬಿಎಸ್ಎಫ್ ಮತ್ತು ರಾಜ್ಯ ಪೊಲೀಸರ ಜಂಟಿ ಪ್ರಯತ್ನದ ಭಾಗವಾಗಿ ಕಾರ್ಯಾಚರಣೆ ನಡೆಯುತ್ತಿದೆ. ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ಕುರಿತು ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ರಾಹುಲ್ ಗಾಂಧಿಯವರ ರ್ಯಾಲಿಗೆ ಅನುಮತಿ ನೀಡುವ ಬಗ್ಗೆ ಪರಿಗಣನೆಯಲ್ಲಿದೆ. ನಾವು ವಿವಿಧ ಭದ್ರತಾ ಏಜೆನ್ಸಿಗಳಿಂದ ವರದಿಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಅವರಿಂದ ವರದಿಗಳನ್ನು ಸ್ವೀಕರಿಸಿದ ನಂತರ ನಾವು ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಜನವರಿ 14ರಂದು ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬುಂಗ್‌ನಿಂದ ‘ಭಾರತ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದೆ. ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾತನಾಡಿ, ಯಾತ್ರೆಗೆ ಮಣಿಪುರ ಸರ್ಕಾರದಿಂದ ಅನುಮತಿಗಾಗಿ ಪಕ್ಷವು ಕಾಯುತ್ತಿದೆ ಎಂದು ಹೇಳಿದ್ದಾರೆ.

ಭಾರತ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗುವ ನಿರೀಕ್ಷೆಯಿದ್ದು, ಈ ಯಾತ್ರೆಯು 14 ರಾಜ್ಯಗಳ ಒಟ್ಟು 85 ಜಿಲ್ಲೆಗಳಲ್ಲಿ 6,700 ಕಿ.ಮೀ. ಕ್ರಮಿಸಲಿದೆ. ಮಹಾರಾಷ್ಟ್ರ ತಲುಪುವ ಮುನ್ನ ನಾಗಾಲ್ಯಾಂಡ್‌, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ, ಛತ್ತೀಸಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಸಾಗಲಿದೆ. ಯಾತ್ರೆಯ ಬಹುಭಾಗ ಬಸ್‌ನಲ್ಲಿ ಸಾಗಲಿದ್ದು, ಆಯ್ದ ಸ್ಥಳಗಳಲ್ಲಿ ಪಾದಯಾತ್ರೆ ನಡೆಯಲಿದೆ.

ಕಾಂಗ್ರೆಸ್ ಆರಂಭದಲ್ಲಿ ಅರುಣಾಚಲದ ಪಾಸಿಘಾಟ್‌ನಿಂದ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ವರೆಗೆ ಯಾತ್ರೆ ನಡೆಸಲು ಚಿಂತಿಸಿತ್ತು. ಆದರೆ ಮೇ 3ರಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರವು ಕಾಂಗ್ರೆಸ್ ಯಾತ್ರೆಯ ದಿಕ್ಕನ್ನು ಬದಲಾಯಿಸುವಂತೆ ಮಾಡಿತ್ತು. ಆದರೆ ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆ ಮಣಿಪುರ ಸರಕಾರದಿಂದ ಯಾತ್ರೆಗೆ ಅನುಮತಿ ಈವರೆಗೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...