Homeಮುಖಪುಟಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿಗೆ ಜಾಮೀನು

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿಗೆ ಜಾಮೀನು

ರಾಜೇಶ್ವರಿ, ಅವರು ಪುತ್ರ ಮತ್ತು ಪರೋಹಿತ ಸೇರಿ ಭಾಸ್ಕರ್ ಶೆಟ್ಟಿಯವರನ್ನು ಕೊಂದು ಹೋಮಕುಂಡದಲ್ಲಿ ಹಾಕಿ ಸುಟ್ಟಿದ್ದಾರೆ ಎಂದು ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದರು.

- Advertisement -
- Advertisement -

ಕರಾವಳಿಯಲ್ಲಿ ತೀವ್ರ ಕೂತೂಹಲ ಕೆರಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿಯವರ ಕೊಲೆ ಪ್ರಕರಣದಲ್ಲಿಅವರ ಪತ್ನಿ ರಾಜೇಶ್ವರಿಗೆ ಹೈಕೋರ್ಟ್‌ನ ವಿಭಾಗೀಯ ನ್ಯಾಯ ಪೀಠ ಗುರುವಾರ ಜಾಮೀನು ಮಂಜೂರು ಮಾಡಿದೆ.

ರಾಜೇಶ್ವರಿ, ಅವರು ಪುತ್ರ ಮತ್ತು ಪರೋಹಿತ ಸೇರಿ ಭಾಸ್ಕರ್ ಶೆಟ್ಟಿಯವರನ್ನು ಕೊಂದು ಹೋಮಕುಂಡದಲ್ಲಿ ಹಾಕಿ ಸುಟ್ಟಿದ್ದಾರೆ ಎಂದು ತನಿಖಾಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ತನ್ನ ಜೀವಾವಧಿ ಶಿಕ್ಷಯನ್ನು ರದ್ದು ಪಡಿಸುವಂತೆ ರಾಜೇಶ್ವರಿಯವರು ಮೇಲ್ಮನವಿ ಸಲ್ಲಿಸಿದ್ದರು.

ರಾಜೇಶ್ವರಿ ಪರವಾಗಿ ವಕೀಲರಾದ ಹಸ್ಮತ್ ಪಾಷಾ ವಾದ ಮಂಡಿಸಿ, “ಹೋಮಕುಂಡದಲ್ಲಿ ಮೃತದೇಹ ದೊರೆತಿಲ್ಲ, ಡಿಎಎನ್‌ ಪರೀಕ್ಷೆಯ ವಿಶ್ಲೇ‍ಷಣೆ ಸಮರ್ಪಕವಾಗಿಲ್ಲ, ರಾಜೇಶ್ವರಿಯವರೇ ಕೊಲೆ ಮಾಡಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹಾಗಾಗಿ ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದುಗೊಳಿಸಿ, ಜಾಮೀನು ನೀಡಬೇಕು” ಎಂದು ಮನವಿ ಮಾಡಿದರು. ನ್ಯಾಯಾಲಯ ಅವರ ಮನವಿಯನ್ನು ಪುರಷ್ಕರಿಸಿದೆ.

ಗಲ್ಪ್ ಮತ್ತು ಉಡುಪಿಯಲ್ಲಿ ಉದ್ಯಮ ಸಾರ್ಮಾಜ್ಯ ಸ್ಥಾಪಿಸಿಕೊಂಡಿದ್ದ ಭಾಸ್ಕರ್ ಶೆಟ್ಟಿ ಉಡುಪಿಯ ಇಂದ್ರಾಳಿಯಲ್ಲಿರುವ ತನ್ನ ಮನೆಯಿಂದ 2016ರ ಜುಲೈ 28ರಂದು ಕಣ್ಮರೆಯಾಗಿದ್ದರು. ಮಣಿಪಾಲ ಪೊಲೀಸರು ಎಂಟು ದಿನದ ನಂತರ ಪತ್ನಿ, ಪುತ್ರ ಮತ್ತು ಮಂತ್ರವಾದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಕೊಲೆ ಸಂಚು ಮಾಡಿದ ಆರೋಪದಲ್ಲಿ ಮೂವರನ್ನು ತಪ್ಪಿತಸ್ಥರೆಂದು ತೀರ್ಮಾನಿಸಲಾಗಿತ್ತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ 8-6-2021ರಂದು ಆರೋಪಿಗಳಿಗೆ ಜಿವಾವಧಿ ಶಿಕ್ಷೆ ವಿಧಿಸಿ ಆದೇಶಿಸಿತ್ತು.


----------------------------------------------------------------------------------
ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದು ಉತ್ತರಖಂಡ ಪೊಲೀಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...