Homeಚಳವಳಿಪೌರತ್ವ ವಿರೋಧಿ ಹೋರಾಟ: ಪೊಲೀಸರಿಂದ ಲಾಠಿಚಾರ್ಜ್‌, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ ಬಂಧನ

ಪೌರತ್ವ ವಿರೋಧಿ ಹೋರಾಟ: ಪೊಲೀಸರಿಂದ ಲಾಠಿಚಾರ್ಜ್‌, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ ಬಂಧನ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರೋಧಿಸಿ ದೆಹಲಿಯ ಜಮಾ ಮಸೀದಿಯಲ್ಲಿ ನಿನ್ನೆ ನಡೆದ ಬೃಹತ್‌ ನಿರಂತರ ಹೋರಾಟ ಈಗ ಛಿದ್ರಗೊಂಡಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠೀ ಚಾರ್ಜ್‌ ಮಾಡಿ ನೇತೃತ್ವ ವಹಿಸಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ರವರನ್ನು ಬಂಧಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಚಂದ್ರಶೇಖರ್‌ ಅಜಾದ್‌ರೊಂದಿಗೆ 40 ಜನರನ್ನು ಬಂಧಿಸಿದ್ದು ಅದರಲ್ಲಿ ಎಳೆಯ ಹುಡುಗರು ಸಹ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ನಮಾಜ್‌ನ ನಂತರ ಜಮಾ ಮಸೀದಿಯಿಂದ ಜಂತರ್ ಮಂತರ್ ಕಡೆಗೆ ಮೆರವಣಿಗೆ ಹೊರಟ ಪ್ರತಿಭಟನಾಕಾರರನ್ನು ದೆಹಲಿ ಗೇಟ್ ಬಳಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ತಡೆದರು. ಇದೇ ಸಮಯದಲ್ಲಿ ದರಿಯಗಂಜ್‌ನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಘಟನೆ ಜರುಗಿದೆ. ತದನಂತರ ಪ್ರತಿಭಟನೆ ಹಿಂಸಾತ್ಮಕವಾಯಿತು, ಇದರಿಂದಾಗಿ ಪೊಲೀಸರು ಲಾಠಿ ಚಾರ್ಜ್ ಮತ್ತು ನೀರಿನ ಫಿರಂಗಿಗಳನ್ನು ಸಿಡಿಸಿದ್ದಾರೆ.

ದೆಹಲಿ ಮಾತ್ರವಲ್ಲದೇ, ಉತ್ತರ ಪ್ರದೇಶ ಸೇರಿದಂತೆ ದೇಶದ ಅನೇಕ ಪಕ್ಷಗಳಲ್ಲಿ ಪ್ರತಿಭಟನೆ ಅಬಾಧಿತವಾಗಿ ಮುಂದುವರೆದಿದ್ದು, ಹಿಂಸಾಚಾರದಲ್ಲಿ ಶುಕ್ರವಾರ ಆರು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ.

“ಕಾಯ್ದೆಯನ್ನು ವಾಪಸ್‌ ಪಡೆಯುವಂತೆ ಮಾಡಲು ನಾವು ಯಾವ ತ್ಯಾಗಕ್ಕೂ ಸಿದ್ದರಾಗಿದ್ದೇವೆ. ಆದರೆ ನಾವೆಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ನಾವು ಶುಕ್ರವಾರ ಬೆಳಿಗ್ಗೆಯಿಂದ ಮಸೀದಿಯೊಳಗೆ ಕುಳಿತಿದ್ದೆವು. ಹಾಗಾಗಿ ನಮ್ಮ ಜನರು ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ. ಪೊಲೀಸರು ಅನಾವಶ್ಯಕವಾಗಿ ನಮ್ಮನ್ನು ಬಂಧಿಸಿದ್ದಾರೆ” ಎಂದು ಆಜಾದ್ ಹೇಳಿದ್ದಾರೆ.

ಆದರೆ ಪೊಲೀಸರು ಪ್ರತಿಭಟನಾಕಾರರು ದರಿಯಗಂಜ್‌ನ ಸುಭಾಷ್ ಮಾರ್ಗದಲ್ಲಿ ನಿಲ್ಲಿಸಿದ್ದ ಖಾಸಗಿ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಕಲ್ಲು ತೂರಾಟ ಮತ್ತು ಪೊಲೀಸ್ ಕ್ರಮದಲ್ಲಿ ಕನಿಷ್ಠ 46 ಜನರು ಗಾಯಗೊಂಡಿದ್ದಾರೆ.

ಪೊಲೀಸ್ ಅಂದಾಜಿನ ಪ್ರಕಾರ ಸಂಜೆ 5 ಗಂಟೆಗೆ ಪ್ರತಿಭಟನಾಕಾರರ ಸಂಖ್ಯೆ ಸುಮಾರು 15,000 ಕ್ಕೆ ಏರಿತು ಮತ್ತು ಅವರು ಬ್ಯಾರಿಕೇಡ್‌ಗಳನ್ನು ಅನ್ನು ಮುರಿಯಲು ಪ್ರಾರಂಭಿಸಿದರು ಎಂದಿದ್ದರೆ. ಪೊಲೀಸ್ ವಕ್ತಾರ ಎಂ.ಎಸ್. ರಾಂಧವಾ ಮಾತನಾಡಿ, ಭದ್ರತಾ ಸಿಬ್ಬಂದಿ ಮೊದಲು ಜನಸಮೂಹವನ್ನು ಚದುರಿಸಲು ನೀರಿನ ಫಿರಂಗಿಗಳನ್ನು ಉಡಾಯಿಸಿದರು ಮತ್ತು ಆನಂತರ ಆಂದೋಲನಕಾರರು ಖಾಸಗಿ ವಾಹನವನ್ನು ಸುಟ್ಟು, ಕಲ್ಲುಗಳನ್ನು ಹೊಡೆಯಲು ಪ್ರಾರಂಭಿಸಿದರು ಎಂದಿದ್ದಾರೆ.

ಆದಾಗ್ಯೂ, ಈ ಪ್ರದೇಶದ ಕೆಲವು ಸ್ಥಳೀಯ ಜನರು ಪೊಲೀಸರ ಪ್ರತಿಕ್ರಿಯೆ ಅಸಮರ್ಪಕ ಮತ್ತು ವಿವೇಚನೆಯಿಂದ ಕೂಡಿರಲಿಲ್ಲ. ಹಿಂಸೆಗೆ ಪೊಲೀಸರೆ ಕಾರಣ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...