Homeಚಳವಳಿಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

- Advertisement -
- Advertisement -

1818 ರ ಆಂಗ್ಲೋ-ಮರಾಠಾ ಯುದ್ಧದ ನೆನಪಿಗಾಗಿ ಪುಣೆಯಿಂದ 40 ಕಿ.ಮೀ ದೂರದಲ್ಲಿರುವ ಭೀಮಾ ಕೋರೆಗಾಂವ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ದಲಿತರು ಒಟ್ಟುಗೂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರವು ಸುಮಾರು 10,000 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದೆ ಮತ್ತು ಇಂಟರ್ನೆಟ್ ಪ್ರವೇಶವನ್ನು ಸ್ಥಗಿತಗೊಳಿಸಿದೆ ಎಂದು ಪುಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವದಂತಿಯನ್ನು ತಡೆಯಲು ಸರ್ಕಾರವು ಕಾರ್ಯಕ್ರಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲವನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪುಣೆ ಜಿಲ್ಲಾಧಿಕಾರಿ ನೇವಲ್ ಕಿಶೋರ್ ರಾಮ್ ಈ ಹಿಂದೆ ಸೂಚಿಸಿದ್ದರು. ಸುಮಾರು ಐದು ಲಕ್ಷ ಜನರು ಈಗಾಗಲೇ ಸ್ಥಳದಲ್ಲಿ ಜಮಾಯಿಸಿದ್ದಾರೆ ಎಂದು ವಿಶೇಷ ಇನ್ಸ್‌ಪೆಕ್ಟರ್ ಜನರಲ್ (ಕೊಲ್ಹಾಪುರ ಶ್ರೇಣಿ) ಸುಹಾಸ್ ವಾಡ್ಕೆ ತಿಳಿಸಿದ್ದಾರೆ. ಸ್ಮಾರಕದ ಬಳಿ ಒಟ್ಟು ಸೇರುವ ಜನರ ಸಂಖ್ಯೆ ಇನ್ನು ಸಹ ಏರಿಕೆಯಾಗುವ ನಿರೀಕ್ಷೆಯಿದೆ. ಕಳೆದ ವರ್ಷ ಇಲ್ಲಿ 10 ಲಕ್ಷ ಜನರು ಭಾಗವಹಿಸಿದ್ದರು.

ಇಂದು ಮುಂಜಾನೆಯೆ ಸ್ಮಾರಕಕ್ಕೆ ಭೇಟಿ ನೀಡಿ ಹೂ ಅರ್ಪಿಸಿದವರಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಪ್ರಮುಖ ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್ ಸೇರಿದ್ದಾರೆ. ಹಲವು ಮಂತ್ರಿಗಳು ಸಹ ಭಾಗವಹಿಸುವ ನಿರೀಕ್ಷೆಯಿದೆ.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ಆ ಯುದ್ಧದ ವಿಜಯದ ನೆನಪಿಗಾಗಿ ಭೀಮಾ ಕೋರೆಗಾಂವ್‌ನಲ್ಲಿ ಸ್ಮಾರಕ ‘ಜೈ ಸ್ತಂಭ’ ಸ್ಥಾಪಿಸಲಾಗಿದೆ. ಅಲ್ಲಿ ವಿಜಯದ 202 ನೇ ವಾರ್ಷಿಕೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ಆದರೆ ಎರಡು ವರ್ಷಗಳ ಹಿಂದೆ ಭೀಮಾ ಕೋರೆಗಾಂವ್‌ನಲ್ಲಿ 2018 ರ ಸಂಭ್ರಮಾಚರಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು.

ಈ ಕುರಿತು ಹಲವಾರು ದಲಿತ ಚಿಂತಕರ ಮೇಲೆ ಕೇಸುಗಳು ದಾಖಲಾಗಿವೆ. ಅವೆಲ್ಲವೂ ಸುಳ್ಳು ಕೇಸುಗಳಾಗಿದ್ದು, ಅವುಗಳನ್ನು ಹಿಂಪಡೆಯಬೇಕೆಂದು ಬಹಳಷ್ಟು ಹೋರಾಟಗಾರರು ಒತ್ತಾಯಿಸುತ್ತಲೇ ಇದ್ದಾರೆ.

ಈ ಬಾರಿಯ ಭದ್ರತೆ ಮತ್ತು ಜನಸಮೂಹ ನಿರ್ವಹಣಾ ವ್ಯವಸ್ಥೆಗಳು ತೃಪ್ತಿದಾಯಕವಾಗಿದ್ದವು ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...