Homeಮುಖಪುಟಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ಆರೋಪ!

ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ಆರೋಪ!

ಬುಲಂದ್‌ ಶಹರ್‌ನ ಉಪಚುನಾವಣೆಗೆ ಆಜಾದ್ ಸಮಾಜ್ ಪಕ್ಷ ಧುಮುಕಿದೆ. ಇದು ಎದುರಾಳಿ ಪಕ್ಷಗಳನ್ನು ಭಯಭೀತರನ್ನಾಗಿಸಿದೆ. ಹಾಗಾಗಿ ಅವರು ನಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ -ಆಜಾದ್

- Advertisement -
- Advertisement -

ಆಜಾದ್ ಸಮಾಜ್ ಪಕ್ಷದ ಪರವಾಗಿ ಉತ್ತರ ಪ್ರದೇಶದ ಬುಲಂದ್‌ಶಹರ್‌ ನಲ್ಲಿ ಪ್ರಚಾರ ಮುಗಿಸಿ ವಾಪಸಾಗುತ್ತಿದ್ದಾಗ ಚಂದ್ರಶೇಖರ್ ಆಜಾದ್‌ರವರ ಬೆಂಗಾವಲು ವಾಹನದ ಮೇಲೆ ಕೆಲ ಅಪರಿಚಿತ ಗೂಂಡಾಗಳು ಗುಂಡು ಹಾರಿಸಿದ್ದಾರೆ ಎಂದು ಭೀಮ್‌ ಆರ್ಮಿ ಆರೋಪಿಸಿದೆ.

ನವೆಂಬರ್ 3 ರಂದು ನಡೆಯುವ ಬುಲಂದ್‌ ಶಹರ್‌ನ ಸದರ್ ಕ್ಷೇತ್ರದ ಉಪಚುನಾವಣೆಯಲ್ಲಿ ಅಜಾದ್ ಸಮಾಜ್ ಪಕ್ಷದಿಂದ ಸ್ಪರ್ಧಿಸಿರುವ ಹಾಜಿ ಯಾಮಿನ್‌ರವರ ಪರವಾಗಿ ಚಂದ್ರಶೇಖರ್ ಆಜಾದ್‌ರವರು ಪ್ರಚಾರ ಮುಗಿಸಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಜಾದ್ ಮಾಧ್ಯಮ ಸಂಯೋಜಕ ಕು‍ಷ್ ತಿಳಿಸಿದ್ದಾರೆ.

ಬುಲಂದ್‌ ಶಹರ್‌ನ ಉಪಚುನಾವಣೆಗೆ ಆಜಾದ್ ಸಮಾಜ್ ಪಕ್ಷ ಧುಮುಕಿದೆ. ಇದು ಎದುರಾಳಿ ಪಕ್ಷಗಳನ್ನು ಭಯಭೀತರನ್ನಾಗಿಸಿದೆ. ಅಷ್ಟೇ ಅಲ್ಲದೆ ಇಂದಿನ ನಮ್ಮ ರ್ಯಾಲಿ ನೋಡಿ ಅವರ ನಿದ್ರೆಕೆಡಿಸಿದೆ. ಹಾಗಾಗಿ ಅವರು ನಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ. ವಾತವಾರಣವನ್ನು ಕೆಡಿಸುವುದು ಅವರ ಉದ್ದೇಶ. ಅದಕ್ಕೆ ನಾವು ಆಸ್ಪದ ಕೊಡುವುದಿಲ್ಲ ಎಂದು ಚಂದ್ರಶೇಖರ್ ಆಜಾದ್ ಟ್ವೀಟ್‌ ಮಾಡಿದ್ದಾರೆ.

ಅಜಾದ್‌ರವರ ಬೆಂಗಾವಲು ವಾಹನದ ಮೇಲೆ ಗುಂಡು ಹಾರಿಸಿ ಅಪರಿಚಿತ ಗೂಂಡಾಗಳು ಪಲಾಯನಗೈದರು. ವಿಷಯ ತಿಳಿಯುತ್ತಿದ್ದಂತೆ ಭೀಮ್‌ ಆರ್ಮಿಯ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭೀಮ್ ಆರ್ಮಿ ಪಕ್ಷವು ಈ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.


ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್


ಆದರೆ ಗುಂಡಿನ ದಾಳಿಯ ಘಟನೆಯನ್ನು ಬುಲಂದ್‌ಶಹರ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಎಸ್‌ಕೆ ಸಿಂಗ್ ನಿರಾಕರಿಸಿದ್ದಾರೆ. ಸ್ಥಳೀಯರು ಗುಂಡಿನ ದಾಳಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಎಂಐಎಂ) ಅಭ್ಯರ್ಥಿ ದಿಲಾಶಾದ್ ಮತ್ತು ಅಜಾದ್ ಸಮಾಜ್ ಪಕ್ಷದ ಹಾಜಿ ಯಾಮಿನ್ ಅವರ ಬೆಂಬಲಿಗರ ನಡುವೆ ಜಗಳ ನಡೆದು ಪರಸ್ಪರ ಕುರ್ಚಿ ಎಸೆಯುವುದು ನಡೆದಿದೆ ಎಂದಿದ್ದಾರೆ.

ಬುಲಂದ್‌ ಶಹರ್‌ನ ಸದರ್ ಕ್ಷೇತ್ರದ ಬಿಜೆಪಿ ಶಾಸಕ ವೀರೇಂದ್ರ ಶಿರೋಲಿ ಮರಣ ಹೊಂದಿದ ಕಾರಣಕ್ಕಾಗಿ ಉಪಚುನಾವಣೆ ನಡೆಯತ್ತಿದೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...