ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ, ದಲಿತ ಹೋರಾಟಗಾರ ಚಂದ್ರಶೇಖರ್ ಅಜಾದ್‌ರವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಕಾರಿನಲ್ಲಿ ಬಂದಿದ್ದ ಶಸ್ತ್ರಧಾರಿ ವ್ಯಕ್ತಿಗಳು ಅಜಾದ್ ಕಾರಿನ ಮೇಲೆ ಮತ್ತು ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ. “ಒಂದು ಗುಂಡು ಅಜಾದ್ ಬೆನ್ನಿಗೆ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಆಝಾದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಆಜಾದ್, “ನನಗೆ ಸರಿಯಾಗಿ ನೆನಪಿಲ್ಲ ಆದರೆ ನನ್ನೊಟ್ಟಿಗೆ ಇದ್ದವರು ಅವರನ್ನ ಗುರುತಿಸಿದ್ದಾರೆ. ಅವರ ಕಾರು ಸಹರಾನ್‌ಪುರದ ಕಡೆಗೆ ಹೊರಟಿತು. ನಾವು ಯು-ಟರ್ನ್ ತೆಗೆದುಕೊಂಡೆವು. ಘಟನೆ ಸಂಭವಿಸಿದಾಗ ನನ್ನ ಕಿರಿಯ ಸಹೋದರ ಸೇರಿದಂತೆ ನಾವು ಐವರು ಕಾರಿನಲ್ಲಿದ್ದೆವು” ಎಂದಿದ್ದಾರೆ.
VIDEO | Bhim Army chief Chandrashekhar Azad was rushed to a local hospital. More details are awaited. pic.twitter.com/HhUz8RZnVw
— Press Trust of India (@PTI_News) June 28, 2023
ಅಂಬೇಡ್ಕರ್‌ವಾದಿ ಕಾರ್ಯಕರ್ತ ಅಜಾದ್ ಬೆಂಗಾವಲು ವಾಹನದ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಸಹರಾನ್‌ಪುರ ಎಸ್‌ಎಸ್‌ಪಿ ಡಾ.ವಿಪಿನ್ ತಾಡಾ ತಿಳಿಸಿದ್ದಾರೆ.
“ಅರ್ಧ ಗಂಟೆಯ ಹಿಂದೆ, ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ವಾಹನದ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದರು. ಒಂದು ಗುಂಡು ಅವನನ್ನು ದಾಟಿತು. ಅವರು ಆರೋಗ್ಯವಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಸಿಎಚ್‌ಸಿಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡಿರುವ ಆಜಾದ್ ಅವರ ಛಾಯಾಚಿತ್ರಗಳನ್ನು ಅವರ ಫೇಸ್‌ಬುಕ್ ಖಾತೆಯಿಂದ ಹಂಚಿಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಕಾರ್ಯಕರ್ತನಿಗೆ ಭದ್ರತೆ ಒದಗಿಸಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೈ-ಬೆಂ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಸಾವು


