Homeಚಳವಳಿಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

’ಬಂದೂಕುಗಳು ಮತ್ತು ಪಿಸ್ತೂಲ್‌ಗಳನ್ನು ಖರೀದಿಸಲು ಸರ್ಕಾರ ನಮಗೆ ಪರವಾನಗಿ ನೀಡಿ 50% ಸಹಾಯಧನವನ್ನು ನೀಡಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುತ್ತೇವೆ’ - ಚಂದ್ರಶೇಖರ್ ಆಜಾದ್

- Advertisement -

ಹತ್ರಾಸ್‌ನ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಇಂದು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹತ್ರಾಸ್‌ಗೆ ಹೊರಟಿದ್ದಾರೆ.

ಪಾದಯಾತ್ರೆ, ಪ್ರತಿಭಟನೆ, ಬಂಧನಗಳ ಬಳಿಕ ನಿನ್ನೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿದ್ದರು.

ಪ್ರಕರಣ ನಡೆದಾಗಿನಿಂದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್ ಸಂತ್ರಸ್ತೆಗೆ ನ್ಯಾಯಕ್ಕಾಗಿ ಆಗ್ರಹಿಸಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೊದಲೇ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಹ ಪೊಲೀಸರು ಅವಕಾಶ ನೀಡದೇ ಅವರನ್ನು ಕೆಲ ಸಮಯದ ಗೃಹಬಂಧನದಲ್ಲಿಟ್ಟಿದ್ದರು. ನಂತರ ತನ್ನ ಕಾರ್ಯಕರ್ತರೊಂದಿಗೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಜಾದ್ ಇಂದು ಹತ್ರಾಸ್‌ಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಇದನ್ನೂ ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

ಸಂವಿಧಾನದ ವಾಸಿಸುವ ಹಕ್ಕನ್ನು ಉಲ್ಲೇಖಿಸಿರುವ ಅಜಾದ್, ಸರ್ಕಾರಗಳು ದಲಿತರ ರಕ್ಷಣೆ ಮಾಡುವುಲ್ಲಿ ವಿಫಲವಾಗಿವೆ. ಹಾಗಾಗಿ ದೇಶದ ಹಿಂದುಳಿದ ವರ್ಗಗಳಿಗೆ ಬಂದೂಕು ಪರವಾನಗಿ ನೀಡಬೇಕು. ನಮ್ಮನ್ನು ನಾವೇ ರಕ್ಷಿಸಿಕೊಳ್ಳುತ್ತೇವೆ ಎಂದಿದ್ದಾರೆ.

“ದೇಶದ 20 ಲಕ್ಷ ಬಹುಜನರಿಗೆ ತಕ್ಷಣ ಬಂದೂಕು ಪರವಾನಗಿ ನೀಡಬೇಕು ಎಂಬುದು ನಮ್ಮ ಬೇಡಿಕೆ. ಬಂದೂಕುಗಳು ಮತ್ತು ಪಿಸ್ತೂಲ್‌ಗಳನ್ನು ಖರೀದಿಸಲು ಸರ್ಕಾರ ನಮಗೆ 50% ಸಹಾಯಧನವನ್ನು ನೀಡಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುತ್ತೇವೆ ”ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.

ಹತ್ರಾಸ್‌ಗೆ ಪ್ರತಿಪಕ್ಷಗಳ ನಾಯಕರು, ಮಾಧ್ಯಮಗಳು ಯಾರಿಗೂ ಪ್ರವೇಶ ನೀಡದಂತೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರ ಭೇಟಿಯನ್ನು ತಡೆಯಲಾಗಿತ್ತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿ, ಬಿಡುಗಡೆ ಮಾಡಿದ್ದರು. ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ. ಇವುಗಳ ವಿರುದ್ಧ ದೇಶದ ಜನ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 5ಕ್ಕಿಂತ ಕಡಿಗೆ ಜನರ ಗುಂಪಿಗೆ ನಿನ್ನೆಯಿಂದ ಹತ್ರಾಸ್ ಭೇಟಿಗೆ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: ಪ್ರಭುತ್ವಕ್ಕೆ “ಚಂದ್ರಶೇಖರ್‌ ಆಝಾದ್ ರಾವಣ್” ಎಂದರೆ ಆತಂಕ ಯಾಕೆ?

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

0
ಮುಂಬರುವ ಉತ್ತರ ಪ್ರದೇಶದ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಶಾಸಕರನ್ನು ಅವರ ಸ್ವಂತ ಕ್ಷೇತ್ರ ಮುಜಾಫರ್‌ನಗರದ ಗ್ರಾಮಸ್ಥರು ಓಡಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...
Wordpress Social Share Plugin powered by Ultimatelysocial