Homeಮುಖಪುಟಭೀಮಾ ಕೋರೆಗಾಂವ್‌: 8 ಹೋರಾಟಗಾರರಿಗೆ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್‌: 8 ಹೋರಾಟಗಾರರಿಗೆ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದ ಎಂಟು ಆರೋಪಿಗಳು ಜಾಮೀನು ನಿರಾಕರಿಸಿದ ಆದೇಶವನ್ನು ಸರಿಪಡಿಸುವಂತೆ ಕೋರಿ ಸಲ್ಲಿಸಿದ ಮನವಿಯಲ್ಲಿ ಮಧ್ಯಪ್ರವೇಶಿಸಲು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿತರಾದ 16 ಜನರಲ್ಲಿ ಎಂಟು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ಇದ್ದಾರೆ.

ಬಂಧಿತಕ್ಕೊಳಗಾಗಿರುವ ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರನ್ನು ಪ್ರತಿನಿಧಿಸುವ ವಕೀಲರು ಪ್ರಸ್ತುತ ಮನವಿಯನ್ನು ವಿಲೇವಾರಿ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಎಂಟು ಮಂದಿ ಆರೋಪಿಗಳಾದ ಸುಧೀರ್ ಧವಳೆ, ವರವರ ರಾವ್, ರೋನಾ ವಿಲ್ಸನ್, ಸುರೇಂದ್ರ ಗಡ್ಲಿಂಗ್, ಶೋಮಾ ಸೇನ್, ಮಹೇಶ್ ರಾವುತ್, ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಡಿಸೆಂಬರ್ 1ರಂದು ಬಾಂಬೆ ಹೈಕೋರ್ಟ್ ಡೀಫಾಲ್ಟ್ ಜಾಮೀನು ನಿರಾಕರಿಸಿತ್ತು. ಅರ್ಜಿದಾರರು ಸಕಾಲದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಆದರೆ, ಅದೇ ದಿನ, ಪ್ರಕರಣದಲ್ಲಿ ಬಂಧಿತರಾದ 16 ಜನರಲ್ಲಿ ಒಬ್ಬರಾದ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರಿಗೆ ನ್ಯಾಯಾಲಯ ಡೀಫಾಲ್ಟ್ ಜಾಮೀನು ನೀಡಿತ್ತು. ಆರೋಪಪಟ್ಟಿ ಸಲ್ಲಿಸುವ ಮೊದಲು ಭಾರದ್ವಾಜ್ ಪುಣೆ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದನ್ನು ನ್ಯಾಯಾಲಯ ಗಮನಿಸಿತ್ತು. ಭಾರದ್ವಾಜ್ ಅವರ 90 ದಿನಗಳ ಬಂಧನ ಅವಧಿಯೂ ಮುಗಿದರೂ ಚಾರ್ಜ್‌ಶೀಟ್ ಸಲ್ಲಿಸದಿರುವುದರಿಂದ ಅವರಿಗೆ ಡೀಫಾಲ್ಟ್ ಜಾಮೀನು ನೀಡಲಾಗಿತ್ತು.

ಭಾರದ್ವಾಜ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ, ಧವಳೆ, ವಿಲ್ಸನ್, ಗಾಡ್ಲಿಂಗ್, ಸೇನ್ ಮತ್ತು ರಾವುತ್ ಅವರು ತಮ್ಮ ಬಂಧನದ 90 ದಿನಗಳ ನಂತರ ಮತ್ತು ತಮ್ಮ ವಿರುದ್ಧ ಆರೋಪಪಟ್ಟಿ ಸಲ್ಲಿಸುವ ಆರು ವಾರಗಳ ಮೊದಲು ತಮ್ಮ ಡೀಫಾಲ್ಟ್ ಜಾಮೀನು ಅರ್ಜಿಗಳನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಗೊನ್ಸಾಲ್ವೆಸ್, ರಾವ್ ಮತ್ತು ಫೆರೀರಾ ಅವರೂ ಡೀಫಾಲ್ಟ್ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಪುಣೆ ನ್ಯಾಯಾಲಯವು ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ಸಾಮಾನ್ಯ ಆದೇಶದಲ್ಲಿ ತಿರಸ್ಕರಿಸಿದೆ. ಆದಾಗ್ಯೂ, ಬಾಂಬೆ ಹೈಕೋರ್ಟ್ ಡಿಸೆಂಬರ್ 1 ರಂದು ಭಾರದ್ವಾಜ್ ಅವರಿಗೆ ಡೀಫಾಲ್ಟ್ ಜಾಮೀನು ನೀಡುವಾಗ ಪುಣೆ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ ಎಂದು ಕಾರ್ಯಕರ್ತರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...