Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

ಭೀಮಾ ಕೋರೆಗಾಂವ್ ಪ್ರಕರಣ: 6 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಶೋಮಾ ಸೇನ್

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿ, ಕಳೆದ ಆರು ವರ್ಷಗಳಿಂದ ಬಂಧನದಲ್ಲಿದ್ದ 66 ವರ್ಷದ ಸಾಮಾಜಿಕ ಕಾರ್ಯಕರ್ತೆ ಶೋಮಾ ಸೇನ್ ಇಂದು ಮಹಾರಾಷ್ಟ್ರದ ಬೈಕುಲ್ಲಾ ಜೈಲಿನಿಂದ ಬಿಡುಗಡೆಯಾದರು.

ನಾಗ್ಪುರ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕಿ ಶೋಮಾ ಸೇನ್ ಅವರನ್ನು 2018ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲಾಯಿತು. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆಕೆಯನ್ನು ಬಂಧಿಸಲಾಯಿತು. ಆವರ ಆರೋಗ್ಯ ಸ್ಥಿತಿ ಮತ್ತು ವಿಚಾರಣೆಯಿಲ್ಲದೆ ಸುದೀರ್ಘ ಬಂಧನವನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಜಾಮೀನು ನೀಡಿತು.

ಜಾಮೀನು ಷರತ್ತುಗಳ ಪ್ರಕಾರ, ಶೋಮಾ ಸೇನ್ ಅವರು ಪ್ರತಿ ಹದಿನೈದು ದಿನಗಳಿಗೊಮ್ಮೆ ಅವರು ವಾಸಿಸುವ ಅಧಿಕಾರ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣಾ ಅಧಿಕಾರಿಗೆ ವರದಿ ಮಾಡಬೇಕು. ವಿಶೇಷ ನ್ಯಾಯಾಲಯದ ಅನುಮೋದನೆಯಿಲ್ಲದೆ ಅವರು ಮಹಾರಾಷ್ಟ್ರವನ್ನು ತೊರೆಯಲು ಅವಕಾಶವಿಲ್ಲ ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು.

ಕಣ್ಗಾವಲಿನ ಭಾಗವಾಗಿ ಅವರು ತಾನು ವಾಸಿಸುವ ಸ್ಥಳದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ತಿಳಿಸಬೇಕು. ಆವರ ಮೊಬೈಲ್ ಫೋನ್ ಸಕ್ರಿಯವಾಗಿರಬೇಕು ಇದರಿಂದ ಭಯೋತ್ಪಾದನಾ ನಿಗ್ರಹ ಸಂಸ್ಥೆ ಆಕೆಯ ಚಲನವಲನದ ಮೇಲೆ ನಿಗಾ ಇಡಬಹುದು.

ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಶೋಮಾ ಸೇನ್ ಅವರನ್ನು ಜೂನ್ 6, 2018 ರಂದು ಬಂಧಿಸಲಾಯಿತು. ಸೇನ್ ಅವರೊಂದಿಗೆ ವರವರ ರಾವ್, ವೆರ್ನಾನ್ ಗೊನ್ಸಾಲ್ವಿಸ್, ಆನಂದ್ ತೇಲ್ತುಂಬ್ಡೆ, ಸುಧಾ ಭಾರದ್ವಾಜ್, ಅರುಣ್ ಫೆರೇರಾ, ಗೌತಮ್ ನವ್ಲಾಖಾ, ಫಾದರ್ ಸೇರಿದಂತೆ ಸ್ಟಾನ್ ಸ್ವಾಮಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಪುಣೆ ಪೊಲೀಸರು ಅವರನ್ನು “ಮಾವೋವಾದಿಗಳು” ಎಂದು ಆರೋಪಿಸಿದರು.

ಪ್ರಕರಣದ ಪ್ರಕಾರ, ಪುಣೆಯ ಶನಿವಾರವಾಡದಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳು ಭೀಮಾ ಕೋರೆಗಾಂವ್‌ನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು. ಜನವರಿ 1, 2018 ರಂದು, ಭೀಮಾ ಕೋರೆಗಾಂವ್ ಕದನದ ದ್ವಿಶತಮಾನೋತ್ಸವದಲ್ಲಿ ಭಾಗವಹಿಸಲು ಭೀಮಾ ಕೋರೆಗಾಂವ್ ಸ್ಮಾರಕದಲ್ಲಿ ಮಹರ್ ಸಮುದಾಯದ ದಲಿತರು ಸಮಾವೇಶಗೊಂಡಾಗ, ವಿವಾದಾತ್ಮಕ ಬಲಪಂಥೀಯ ನಾಯಕ ಸಂಭಾಜಿ ಭಿಡೆ ನೇತೃತ್ವದ ಮರಾಠ ಗುಂಪುಗಳು ಅವರ ಮೇಲೆ ಹಲ್ಲೆ ನಡೆಸಿದ್ದವು.

ಆರಂಭದಲ್ಲಿ ಪೊಲೀಸರು ಭಿಡೆ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಕೊಲೆ ಯತ್ನ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ್ದರೆ, ಅವರ ವಿರುದ್ಧದ ಪ್ರಕರಣವನ್ನು 2022 ರಲ್ಲಿ ಕೈಬಿಡಲಾಯಿತು. ಭಿಡೆ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ; ಯಾವ ಆಧಾರದಲ್ಲಿ 400 ಸೀಟು ಎಂದು ಹೇಳುತ್ತಿದ್ದಾರೆ.. ಅವರು ಜ್ಯೋತಿಷಿಗಳೇ..?’; ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...