Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ : ಜ್ಯೋತಿ ಜಗ್ತಾಪ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣ : ಜ್ಯೋತಿ ಜಗ್ತಾಪ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಜ್ಯೋತಿ ಜಗ್ತಾಪ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ನವೆಂಬರ್ 19) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಜಗ್ತಾಪ್ ಸುಮಾರು ಐದೂವರೆ ವರ್ಷಗಳಿಂದ ಬಂಧನದಲ್ಲಿದ್ದಾರೆ ಎಂಬುವುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ ಜಾಮೀನು ನೀಡಿದೆ.

“ಅವರು (ಜಗ್ತಾಪ್) 5 ವರ್ಷ 6 ತಿಂಗಳು ಬಂಧನದಲ್ಲಿ ಕಳೆದಿದ್ದಾರೆ. ಕೋರಿಕೆಯಂತೆ ಪ್ರಕರಣವನ್ನು ಮುಂದೂಡಲಿ, ಆದರೆ ಜಾಮೀನು ಮಂಜೂರು ಮಾಡಲಿ” ಎಂದು ಜಗ್ತಾಪ್ ಪರ ಹಿರಿಯ ವಕೀಲೆ ಅಪರ್ಣಾ ಭಟ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಮನವಿ ಪರಿಗಣಿಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಕಿರಿಯ ಆರೋಪಿಗಳಲ್ಲಿ ಒಬ್ಬರಾದ ಜಗ್ತಾಪ್ ಅವರನ್ನು ಸೆಪ್ಟೆಂಬರ್ 8, 2020ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿತ್ತು. ಅಕ್ಟೋಬರ್ 9, 2020ರಂದು ಅವರ ವಿರುದ್ದ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.

ಜಗ್ತಾಪ್ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ನಿಷೇಧಿತ ಸಂಘಟನೆಯಾದ ಕಬೀರ್ ಕಲಾ ಮಂಚ್ (ಕೆಕೆಎಂ) ನ ಸದಸ್ಯರು ಎಂದು ಆರೋಪಿಸಲಾಗಿದೆ.

2002ರ ಗುಜರಾತ್‌ ಗಲಭೆಯ ನಂತರ, ಹಲವಾರು ಕಲಾವಿದರು, ಕವಿಗಳು, ಗಾಯಕರು ಮತ್ತು ಬುದ್ಧಿಜೀವಿಗಳು ಒಟ್ಟಾಗಿ ಸೇರಿಕೊಂಡು ರಚಿಸಿದ ಒಂದು ಸಾಂಸ್ಕೃತಿಕ ಗುಂಪಾಗಿದೆ ಕೆಕೆಎಂ. ಈ ಗುಂಪು ತಮ್ಮ ಸಂಗೀತ, ಕವಿತೆ, ನಾಟಕ ಮತ್ತು ಇತರ ಕಲಾರೂಪಗಳ ಮೂಲಕ ಸಾಮಾಜಿಕ ನ್ಯಾಯ, ಸಾಮರಸ್ಯ, ಜಾತ್ಯತೀತತೆ, ಮತ್ತು ಗಲಭೆಯ ಸಮಯದಲ್ಲಿ ನಡೆದ ಅತ್ಯಾಚಾರಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿತ್ತು.

ಕೆಕೆಎಂ ಮುಖ್ಯವಾಗಿ ದಲಿತ-ಬಹುಜನ ಸಮುದಾಯದ ಕಲಾವಿದರಿಂದ ರೂಪಿತವಾದ ಗುಂಪಾಗಿದ್ದು, ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಸಂತ ಕಬೀರ್ ಅವರ ಆಶಯಗಳಿಂದ ಪ್ರೇರಿತವಾಗಿತ್ತು. ಗುಂಪಿನ ಸದಸ್ಯರು ಬೀದಿ ನಾಟಕ, ಪ್ರತಿಭಟನಾ ಗೀತೆಗಳು ಮತ್ತು ಕವಿತೆಗಳ ಮೂಲಕ ಜನರನ್ನು ಒಗ್ಗೂಡಿಸುತ್ತಿದ್ದರು.

ಸರ್ಕಾರ ‘ನಕ್ಸಲ್ ಸಂಪರ್ಕ’ದ ಆರೋಪ ಮಾಡಿ ಈ ಗುಂಪಿನ ಹಲವರನ್ನು ಬಂಧಿಸಿತ್ತು. ನಂತರ ಗುಂಪನ್ನು ನಿಷೇಧ ಮಾಡಿತು.

ಫೆಬ್ರವರಿ 14, 2022 ರಂದು ವಿಶೇಷ ಎನ್‌ಐಎ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಜಗ್ತಾಪ್ ಅವರು ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅಕ್ಟೋಬರ್ 2022ರಲ್ಲಿ ಬಾಂಬೆ ಹೈಕೋರ್ಟ್ ಕೂಡ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಹಾಗಾಗಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...