Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು 2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ಬಯಸಿದೆ. ಇದಕ್ಕಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಅವಧಿಯಲ್ಲಿ 10 ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿತ್ತು.

ಗೃಹ ಸಚಿವ ಅನಿಲ್ ದೇಶ್‌ಮುಖ್, ಹಿರಿಯ ಎನ್‌ಸಿಪಿ ಮುಖಂಡ, ಪುಣೆಯ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಮುಂಬೈನ ಸಭೆಗೆ ಕರೆದಿದ್ದಾರೆ. ಜೈಲಿನಲ್ಲಿದ್ದ ಕಾರ್ಯಕರ್ತರ ವಿರುದ್ಧದ ಸಾಕ್ಷ್ಯಗಳ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಪಡೆದ ನಂತರ ಪ್ರಕರಣದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರಣಕ್ಕಾಗಿ ಈ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ತನ್ನ ಸಿದ್ಧಾಂತವನ್ನು ವಿರೋಧಿಸಿದ ಕಾರ್ಯಕರ್ತರನ್ನು “ನಗರ ನಕ್ಸಲ್” ಎಂದು ಬ್ರಾಂಡ್ ಮಾಡಿ ಜೈಲಿಗೆ ತಳ್ಳಿರುವ ಆರೋಪ ಎದುರಿಸುತ್ತಿದೆ.

ಮರಾಠಿ ದಿನಪತ್ರಿಕೆ ‘ಲೋಕಸತ್ತ’ ಜೊತೆ ಮಾತನಾಡಿದ ದೇಶ್‌ಮುಖ್, ಹಿಂದಿನ ಸರ್ಕಾರವು ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವವರನ್ನು “ನಗರ ನಕ್ಸಲ್” ಎಂದು ಕರೆದಿದೆ. ಆದರೆ ಪ್ರಸ್ತುತ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಆಡಳಿತವು ಆ ರೀತಿ ನಡೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸರ್ಕಾರವು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ ಎಂಬುದನ್ನು ನಂಬುತ್ತದೆ ಎಂದು ಹೇಳಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಸಂಗಕ್ಕೆ ಸಂಬಂಧಿಸಿದಂತೆ ನಾವು ಈ ಬಗ್ಗೆ ಯೋಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸುವ ಬಗ್ಗೆ ಬೇಡಿಕೆಗಳು ಬರುತ್ತಿವೆ. ನಾವು ಇದನ್ನು ನಮ್ಮ ಅಧಿಕಾರಿಗಳ ಮೂಲಕ ಪರಿಶೀಲಿಸುತ್ತೇವೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ” ಎಂದು ದೇಶ್‌ಮುಖ್ ಹೇಳಿದ್ದಾರೆ.

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...