HomeಚಳವಳಿNIA ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸಮ್ಮತಿ

NIA ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸಮ್ಮತಿ

ಭೀಮಾ ಕೊರೆಗಾಂವ್‌ – ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಅವರು 2020ರ ಏಪ್ರಿಲ್‌ನಿಂದಲೂ ಬಂಧನದಲ್ಲಿದ್ದಾರೆ

- Advertisement -
- Advertisement -

ಭೀಮಾ ಕೊರೆಗಾಂವ್‌-ಎಲ್ಗರ್ ಪರಿಷತ್ ಪ್ರಕರಣದಲ್ಲಿ ವಿದ್ವಾಂಸ, ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಅವರಿಗೆ ಜಾಮೀನು ನೀಡಲು ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಾಂಬೆ ಹೈಕೋರ್ಟ್ ಆದೇಶದಲ್ಲಿ ಮಾಡಿರುವ ಅವಲೋಕನಗಳು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿದ್ದಕ್ಕೆ ವಿರುದ್ಧವಾಗಿದೆ. ಜಾಮೀನು ಆದೇಶದಲ್ಲಿನ ಅವಲೋಕನಗಳು, ವಿಚಾರಣೆ ಮತ್ತು ತನಿಖೆಯ ಮೇಲೆ ಪ್ರಭಾವ ಬೀರುತ್ತವೆ” ಎಂದು ಈ ಹಿಂದೆ ತೇಲ್ತುಂಬ್ಡೆಗೆ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿತ್ತು.

ಇದನ್ನೂ ಓದಿ: 2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

“ತನಿಖಾ ಸಂಸ್ಥೆಯು ಈಗಾಗಲೇ ತೆಲ್ತುಂಬ್ಡೆ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪಡೆಯುವಲ್ಲಿ ಬಹಳ ಕಷ್ಟವನ್ನು ಎದುರಿಸುತ್ತಿದೆ. ಒಂದು ವೇಳೆ ಅವರಿಗೆ ಜಾಮೀನು ನೀಡಿದರೆ ಇದಕ್ಕೆ ಮಾರಣಾಂತಿಕ ಹೊಡೆತ ನೀಡಿದಂತಾಗುತ್ತದೆ. ಅವರು ನ್ಯಾಯಾಂಗ ಬಂಧನದಿಂದ ಬಿಡುಗಡೆಯಾದ ನಂತರ ಯಾವುದೇ ಪುರಾವೆಗಳು ಹೊರ ಬರದಂತೆ ನೋಡಿಕೊಳ್ಳುತ್ತಾರೆ” ಎಂದು ತನ್ನ ವಿಶೇಷ ರಜೆ ಅರ್ಜಿಯಲ್ಲಿ (SLP) ಎನ್‌ಐಎ ಕೋರ್ಟ್‌ನಲ್ಲಿ ಹೇಳಿತ್ತು.

ಕಳೆದ ವಾರ, ಬಾಂಬೆ ಹೈಕೋರ್ಟ್ ಆನಂದ್‌ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಿತ್ತು. ಅವರು 2020ರ ಏಪ್ರಿಲ್‌ನಿಂದಲೂ ಬಂಧನದಲ್ಲಿದ್ದು, ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ಹೇಳಿತ್ತು.

ಆನಂದ್‌ ತೇಲ್ತುಂಬ್ಡೆ ಅವರು ಭೀಮಾ ಕೊರೆಗಾಂವ್‌-ಎಲ್ಗರ್‌ ಪರಿಷತ್‌ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದ ಮೂರನೇ ಆರೋಪಿಯಾಗಿದ್ದಾರೆ. ಅವರ ಸಹ ಆರೋಪಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಪಡೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ಈ ಹಿಂದೆ ಹೋರಾಟಗಾರ್ತಿ ಸುಧಾ ಭಾರದ್ವಾಜ್‌ ಅವರಿಗೆ ಡೀಫಾಲ್ಟ್ ಜಾಮೀನು ನೀಡಲಾಗಿದೆ. ತೇಲ್ತುಂಬ್ಡೆ ಅವರು ಹೈಕೋರ್ಟ್‌ನಿಂದ ಅರ್ಹತೆಯ ಮೇರೆಗೆ ಜಾಮೀನು ಪಡೆದ ಪ್ರಕರಣದ ಮೊದಲ ಆರೋಪಿಯಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...