ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA
PC: The hindu

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹೈದರಾಬಾದ್‌ನ EFL ವಿಶ್ವವಿದ್ಯಾನಿಲಯದ ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದೆ.

ಸಿ.ಆರ್.ಪಿ.ಸಿ ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸೆಪ್ಟಂಬರ್ 9, 2020ರಂದು ಸಾಕ್ಷಿಯಾಗಿ ಹಾಜರಾಗಲು NIA ಸಮನ್ಸ್ ಹೊರಡಿಸಿದೆ. “ಇದೇ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಪತ್ರಕರ್ತರು ಮತ್ತು ನನ್ನ ಸಹೋದರರಾದ ಕೆ.ವಿ.ಕುರ್ಮನಾಥ್ ಅವರಿಗೂ ಸಮನ್ಸ್ ಜಾರಿಗೊಳಿಸಿದೆ” ಎಂದು ಸತ್ಯನಾರಾಯಣ್ ಹೇಳಿದ್ದಾರೆ.

“ನಿಮಗೆ ತಿಳಿದಿರುವಂತೆ, ನನ್ನ ಮಾವ, ಕ್ರಾಂತಿಕಾರಿ ಕವಿ ವರವರ ರಾವ್ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸುವ ನೆಪದಲ್ಲಿ ನನ್ನ ಫ್ಲಾಟ್ ಮೇಲೆ ಪುಣೆ ಪೊಲೀಸರು ಆಗಸ್ಟ್ 2018 ರಲ್ಲಿ ದಾಳಿ ನಡೆಸಿದ್ದರು. ನಾನು ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದೇನೆ. ವರವರ ರಾವ್ ನನ್ನ ಸಂಬಂಧಿ ಎನ್ನುವ ಕಾರಣಕ್ಕೆ, ನನ್ನ ಮನೆಯ ಮೇಲೆ ದಾಳಿ ಮಾಡಿ, ನನಗೆ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

“ನಾನು ವರವರ ರಾವ್‌ಗೆ ಸಂಬಂಧಿ ಎಂಬುದು ಸತ್ಯ. ಆದರೆ ಭೀಮಾ ಕೋರೆಗಾಂವ್ ಪ್ರಕರಣಕ್ಕೂ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮತ್ತೊಮ್ಮೆ ಹೇಳುತ್ತೇನೆ. ವರವಾರ ರಾವ್ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಜೊತೆಗೆ ಮುಂಬೈನಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿರುವ ಸಮಯದಲ್ಲಿ NIA ಸಮನ್ಸ್ ನಮ್ಮ ಕುಟುಂಬದ ಸಂಕಟವನ್ನು ಇನ್ನಷ್ಟು ಹೆಚ್ಚಿಸಿದೆ” ಎಂದು ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

NIA ಈ ಪ್ರಕರಣದ ನೆಪದಲ್ಲಿ ಅನೇಕರನ್ನು ವಿಚಾರಣೆಯ ಹೆಸರಿನಲ್ಲಿ ಬಂಧಿಸಿ ಹಿಂಸಿಸುತ್ತಿದೆ ಎಂದು ಜೆ.ಎನ್.ಯು ವಿದ್ಯಾರ್ಥಿಗಳು ಆರೋಪಿಸಿ ಈ ಹಿಂದೆಯೇ ಪ್ರತಿಭಟನೆ ನಡೆಸಿದ್ದರು.

ಈಗಾಗಲೇ ಈ ಪ್ರಕರಣದಲ್ಲಿ 12 ಜನ ಮಾನವ ಹಕ್ಕುಗಳ ಹೋರಾಟಗಾರರನ್ನು ಭಯೋತ್ಪಾದನೆಯ ಆರೋಪದಡಿ ಬಂಧಿಸಲಾಗಿದೆ. ಭೀಮಾ ಕೋರೆಗಾಂವ್ ಘಟನೆಗೆ ಸಂಬಂಧಿಸಿದ ಸುಳ್ಳು ಆರೋಪಗಳ ಮೇಲೆ ಹಲವಾರು ವ್ಯಕ್ತಿಗಳನ್ನು ಹಿಂಸಿಸಲಾಗುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ. ಇಂತಹ ಕೃತ್ಯಗಳು ನಮ್ಮ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ, ನಾಗರಿಕ ಸ್ವಾತಂತ್ರ್ಯಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಅವರು, ಸಾಂವಿಧಾನಿಕ ಕ್ರಮವನ್ನು ಕುಗ್ಗಿಸುವ ಹಾಗೂ ಶಿಕ್ಷಣ ತಜ್ಞರು ಮತ್ತು ಕಾರ್ಯಕರ್ತರ ಮೇಲಿನ ಉದ್ದೇಶಪೂರ್ವಕ ಕಿರುಕುಳವನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದರು.


ಇದನ್ನೂ ಓದಿ: ಭೀಮರಾಜ್ಯದ ಮುಂದೆ ರಾಮರಾಜ್ಯ ಧೂಳಿಪಟವಾಗುತ್ತದೆ; ಒಂದು ಪ್ರತಿಕ್ರಿಯೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here