Homeಚಳವಳಿಭೀಮಾ ಕೊರೆಗಾಂವ್‌: ವರವರ ರಾವ್ ಅವರ ಜಾಮೀನು ವಿಸ್ತರಣೆ ಅರ್ಜಿ ವಿಚಾರಣೆ ಸೆ.6 ಕ್ಕೆ

ಭೀಮಾ ಕೊರೆಗಾಂವ್‌: ವರವರ ರಾವ್ ಅವರ ಜಾಮೀನು ವಿಸ್ತರಣೆ ಅರ್ಜಿ ವಿಚಾರಣೆ ಸೆ.6 ಕ್ಕೆ

- Advertisement -
- Advertisement -

ಕ್ರಾಂತಿಕಾರಿ ಕವಿ, ಹೋರಾಟಗಾರ ವರವರ ರಾವ್ ಅವರ ವೈದ್ಯಕೀಯ ಜಾಮೀನು ವಿಸ್ತರಣೆಯ ಮನವಿಯನ್ನು ಆಲಿಸುವವರೆಗೆ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಮುಂಬಯಿ ಹೈಕೋರ್ಟ್‌ಗೆ ಮೌಖಿಕವಾಗಿ ಹೇಳಿಕೆ ನೀಡಿದೆ.

ಭೀಮಾಕೊರೆಗಾಂವ್‌‌-ಎಲ್ಗರ್ ಪರಿಷತ್‌ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ವರವರ ರಾವ್ ಅವರು, ಪ್ರಸ್ತುತ ಫೆಬ್ರವರಿಯಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ವೈದ್ಯಕೀಯ ಜಾಮೀನಿನಲ್ಲಿ ಇದ್ದಾರೆ. ಅವರು ಸೆಪ್ಟೆಂಬರ್ 5 ರಂದು ತಾಲೋಜಾ ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕಾಗಿದೆ.

ವರವರ ರಾವ್‌ ಅವರ ವಕೀಲರಾಗಿರುವ ಹಿರಿಯ ವಕೀಲ ಆನಂದ್ ಗ್ರೋವರ್ ಅವರು ಶುಕ್ರವಾರ ಜಸ್ಟಿಸ್ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಮಾದರ್ ಅವರ ಪೀಠದ ಮುಂದೆ ಜಾಮೀನು ವಿಸ್ತರಿಸುವಂತೆ ಕೋರಿದ್ದಾರೆ. ಆದರೆ, ಸಮಯದ ಕೊರತೆಯಿಂದಾಗಿ, ಅರ್ಜಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಭೀಮಾ ಕೊರೆಗಾಂವ್ – ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್‌ಗೆ ಆರು ತಿಂಗಳ ಜಾಮೀನು

ಸೆಪ್ಟೆಂಬರ್ 6 ರಂದು ಮನವಿಯನ್ನು ಆಲಿಸುವುದಾಗಿ ಹೈಕೋರ್ಟ್ ಹೇಳಿದೆ. ಈ ಹಿನ್ನಲೆಯಲ್ಲಿ, ಅಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನೋಡಿಕೊಳ್ಳುವಂತೆ ಗ್ರೋವರ್ ಹೈಕೋರ್ಟ್‌ಗೆ ಕೇಳಿಕೊಂಡಿದ್ದಾರೆ.

ಹೀಗಾಗಿ, ಎನ್‌ಐಎ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಮೌಖಿಕ ಹೇಳಿಕೆ ನೀಡಿ, “ಮುಂದಿನ ವಿಚಾರಣೆಯವರೆಗೆ ನಾವು ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ವರ್ಷ ಫೆಬ್ರವರಿ 22 ರಂದು ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಮತ್ತು ಮನೀಶ್ ಪಿತಾಲೆ ಅವರ ಪೀಠವು “ಮಾನವೀಯತೆಯ ಆಧಾರದ ಮೇಲೆ” 82 ವರ್ಷದ ವರವರ ರಾವ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ನೀಡಲಾಗಿತ್ತು.

ಜಾಮೀನು ನೀಡುವ ಸಮಯದಲ್ಲಿ, ಅವರು ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ವರವರ ರಾವ್‌ ಅವರು ತಲೋಜಾ ಜೈಲಿನಿಂದ ಹೊರಬಂದು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...