Homeಚಳವಳಿಭೀಮಾ ಕೋರೆಗಾಂವ್: ಹೋರಾಟಗಾರ ಗೌತಮ್ ನವಲಖಾ ಜಾಮೀನು ಅರ್ಜಿಯ ಕುರಿತು NIA ಪ್ರತಿಕ್ರಿಯೆ ಕೋರಿದ ಸುಪ್ರೀಂ

ಭೀಮಾ ಕೋರೆಗಾಂವ್: ಹೋರಾಟಗಾರ ಗೌತಮ್ ನವಲಖಾ ಜಾಮೀನು ಅರ್ಜಿಯ ಕುರಿತು NIA ಪ್ರತಿಕ್ರಿಯೆ ಕೋರಿದ ಸುಪ್ರೀಂ

- Advertisement -
- Advertisement -

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಗೌತಮ್ ನವಲಖಾ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯಿಂದ ಪ್ರತಿಕ್ರಿಯೆ ಕೋರಿದೆ.

ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಫೆಬ್ರವರಿ 8 ರ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಹೋರಾಟಗಾರನ ಮನವಿಯ ಕುರಿತು ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ನ್ಯಾಯಪೀಠ ತನಿಖಾ ಸಂಸ್ಥೆಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ನವಲಖಾ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಂಕ್ಷಿಪ್ತ ಸಲ್ಲಿಕೆಯನ್ನು ನ್ಯಾಯಪೀಠ ವಿಚಾರಣೆ ನಡೆಸಿ ಮಾರ್ಚ್ 15 ರೊಳಗೆ ಪ್ರತಿಕ್ರಿಯಿಸಲು ಎನ್ಐಎಗೆ ಸೂಚಿಸಿದೆ.

ಪೊಲೀಸರ ಪ್ರಕಾರ, ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಭೆಯಲ್ಲಿ ಕೆಲವು ಹೋರಾಟಗಾರರು ಉದ್ವೇಗಕಾರಿ ಭಾಷಣಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು, ಇದು ಮರುದಿನ ಜಿಲ್ಲೆಯ ಭೀಮಾ ಕೋರೆಗಾಂವ್‌ನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...