Homeಮುಖಪುಟಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಖ್ಯಾತ ಮಾನವ ಹಕ್ಕು ಹೋರಾಟಗಾರ, ಚಿಂತಕ ಪ್ರೊ. ಆನಂದ್ ತೇಲ್ತುಂಬ್ಡೆರವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ತಮ್ಮ ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿರುವುದನ್ನು ಪ್ರಶ್ನಸಿ ತೇಲ್ತುಬ್ಡೆಯವರು 2021ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಜಸ್ಟೀಸ್ ಎ.ಎಸ್ ಗಡ್ಕರಿ ಮತ್ತು ಮಿಲಿಂಡ್ ಜಾಧವ್‌ರವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದ ಆರೋಪಿ ಆಗಿರುವ ಆನಂದ್ ತೇಲ್ತುಂಬೆ ಅವರು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ 2020ರ ಏಪ್ರಿಲ್ 14ರ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನದಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಶರಣರಾಗಿದ್ದರು.

ಯುಎಪಿಎಯ ಸೆಕ್ಷನ್ 38 ಮತ್ತು 39 ಹೊರತುಪಡಿಸಿ ಸೆಕ್ಷನ್ 13, 16 ಮತ್ತು 18 ರ ಅಡಿಯಲ್ಲಿ ಅಪರಾಧಗಳನ್ನು ಮಾಡಲಾಗಿಲ್ಲ ಎಂದು ಗಮನಿಸಿದ ನ್ಯಾಯಾಲಯ ತಲಾ ಒಂದು ಲಕ್ಷ ರೂ.ಗಳ ಎರಡು ಶ್ಯೂರಿಟಿ ಪಿಆರ್ ಬಾಂಡ್ ಮೇಲೆ ಜಾಮೀನು ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಎನ್‌ಐಎಗೆ ಒಂದು ವಾರ ಕಾಲಾವಕಾಶ ನೀಡಿರುವ ನ್ಯಾಯಾಲಯ ಈ ಜಾಮೀನಿನಗೆ ಒಂದು ವಾರಗಳ ತಡೆಯಾಜ್ಞೆ ಸಹ ನೀಡಿದೆ. ಹಾಗಾಗಿ ಒಂದು ವಾರಗಳ ಕಾಲ ತೇಲ್ತುಂಬ್ಡೆಯವರು ಬಿಡುಗಡೆಯಾಗುವುದಿಲ್ಲ.

ಏನಿದು ಪ್ರಕರಣ

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ, 200 ವರ್ಷಗಳ ಹಿಂದಿನ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯಗಳಿಸಿದ ಮಹರ್‌ ಜನಾಂಗದ 200ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

ಆನಂತರ ಅವರು ಪ್ರಧಾನಿ  ಮೋದಿಯವರನ್ನು ಹತ್ಯೆಗೈಯಲು ಸಂಚು ರೂಪಿಸಿದ ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಎನ್‌ಐಎ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಪ್ರಕರಣಗಳನ್ನು ಹೇರಿತ್ತು.

ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಘೋಷಿಸಿತ್ತು.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ. ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...