Homeಮುಖಪುಟಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

- Advertisement -
- Advertisement -

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಜು.14) ನೋಟಿಸ್ ಜಾರಿ ಮಾಡಿದೆ.

ಆದರೆ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು, ನಿಗದಿಪಡಿಸಿದ ದಿನಗಳಲ್ಲಿ ಹಿಂದೂಗಳ ಪೂಜೆಯೊಂದಿಗೆ ಮುಸ್ಲಿಮರಿಗೆ ಶುಕ್ರವಾರದಂದು ನಮಾಝ್ ಮಾಡಲು ಅವಕಾಶ ನೀಡುತ್ತಿದ್ದ ಹಿಂದಿನ ಯಥಾಸ್ಥಿತಿಯನ್ನು ಮರುಸ್ಥಾಪಿಸಬೇಕೆಂಬ ಅರ್ಜಿದಾರರ ಮಧ್ಯಂತರ ಆದೇಶದ ಕೋರಿಕೆಯನ್ನು ತಿರಸ್ಕರಿಸಿದೆ.

“ಯಾವುದೇ ಉದ್ವಿಗ್ನತೆಗೆ ಕಾರಣವಾಗಬಹುದಾದ ಯಾವುದೇ ಆದೇಶವನ್ನು ನಾವು ಹೊರಡಿಸುವುದು ಬೇಡ” ಎಂದು ಮುಖ್ಯ ನ್ಯಾಯಮೂರ್ತಿ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರದಂದು ಮಧ್ಯಾಹ್ನ 1 ರಿಂದ 3 ಗಂಟೆಯ ನಡುವೆ ನಮಾಝ್ ಮಾಡಲು ಮುಸ್ಲಿಂ ಧರ್ಮೀಯರಿಗೆ ಸದರಿ ಸ್ಥಳಕ್ಕೆ ಹೊಂದಿಕೊಂಡಂತೆ ಇರುವ ಪ್ರತ್ಯೇಕ ಮುಕ್ತ ಜಾಗವನ್ನು ಒದಗಿಸುವಂತೆ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ವ್ಯವಸ್ಥೆಯು ತಾತ್ಕಾಲಿಕವಾಗಿದ್ದು, ಪ್ರಕರಣದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಮತ್ತು ಇದು ಯಾವುದೇ ಪಕ್ಷಗಳ ವಾದಗಳಿಗೆ ಬಾಧಕವಾಗುವುದಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ.

ಇದಲ್ಲದೆ, ಮುಸ್ಲಿಂ ಪರ ಹಿರಿಯ ನ್ಯಾಯವಾದಿ ಹುಝೇಫಾ ಅಹ್ಮದಿ ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ತನ್ನ ಪೂರ್ವಾನುಮತಿಯನ್ನು ಪಡೆಯದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಈ ಸ್ಮಾರಕದ ಯಾವುದೇ ರಚನಾತ್ಮಕ ಬದಲಾವಣೆಗಳನ್ನು ಮಾಡಬಾರದು ಎಂದು ನಿರ್ದೇಶಿಸಿದೆ.

ಮುಂದಿನ ಮೂರು ವಾರಗಳ ನಂತರ ಅಂತಿಮ ವಿಚಾರಣೆಗಾಗಿ ಈ ವಿಷಯವನ್ನು ಪಟ್ಟಿ ಮಾಡಲಾಗುವುದು ಎಂದು ಪೀಠವು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...