Homeಕರ್ನಾಟಕಆರನೇ ದಿನಕ್ಕೆ ಕಾಲಿಟ್ಟ 'ಭೂಮಿ ಸತ್ಯಾಗ್ರಹ': ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ‘ಭೂಮಿ ಸತ್ಯಾಗ್ರಹ’ ಬುಧವಾರ (ಜು.2) ಆರನೇ ದಿನಕ್ಕೆ ಕಾಲಿಟ್ಟಿದೆ. ಫ್ರೀಡಂ ಪಾರ್ಕ್‌ ಮತ್ತು ಚನ್ನರಾಯಪಟ್ಟಣ ಎರಡೂ ಕಡೆ ರೈತರು, ಹೋರಾಟಗಾರರು ಉಪವಾಸ ಕೈಗೊಂಡಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್‌. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ, ಯಾಮ್ರೋಸ್ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ.

ಚನ್ನರಾಯಪಟ್ಟಣದಲ್ಲಿ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ನೂರಾರು ರೈತರು ಉಪವಾಸದಲ್ಲಿದ್ದಾರೆ.

ಭೂ ಸ್ವಾಧೀನ ವಿರೋಧಿಸಿ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ನಡೆಸುತ್ತಿದ್ದ ನಿರಂತರ ಹೋರಾಟ 2025 ಜೂನ್ 25ಕ್ಕೆ 1,180 ದಿನಗಳನ್ನು ಪೂರೈಸಿತ್ತು. ಹಾಗಾಗಿ, ಅಂದು ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಣಾಯಕ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಬಹುಭಾಷಾ ನಟ ಪ್ರಕಾಶ್ ರಾಜ್, ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ಪ್ರಾಂತ ರೈತ ಸಂಘದ ನಾಯಕ ಯಶವಂತ, ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ, ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಿದ್ದರು. ಚನ್ನರಾಯಪಟ್ಟ ಹೋಬಳಿ ಮಾತ್ರವಲ್ಲದೆ ಇತರೆಡೆಗಳಿಂದಲೂ ರೈತರು ಆಗಮಿಸಿದ್ದರು.

ಆರಂಭದಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಪೊಲೀಸರು ಕೊಂಚ ಅಡ್ಡಿಪಡಿಸಿದರೂ, ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನಾ ಸಮಾವೇಶ ಸುಸೂತ್ರವಾಗಿ ನಡೆದಿತ್ತು. ಆದರೆ, ಸಂಜೆ 6.30ರ ಸುಮಾರಿಗೆ ರೈತರು ಮತ್ತು ಹೋರಾಟಗಾರರನ್ನು ಪೊಲೀಸರು ಅಮಾನುಷವಾಗಿ ಬಂಧಿಸಿದ್ದರು.

ಇದರಿಂದ ಆಕ್ರೋಶಗೊಂಡ ಹೋರಾಟಗಾರರು, ಜೂನ್ 27ರಿಂದ ಫ್ರೀಡಂ ಪಾರ್ಕ್‌ನಲ್ಲಿ ಬಿಡಾರ ಹೂಡಿ ‘ಭೂಮಿ ಸತ್ಯಾಗ್ರಹ’ ಹಮ್ಮಿಕೊಂಡಿದ್ದಾರೆ.

ಸಚಿವ ಸಂಪುಟ ಮತ್ತು ಸಿಎಂ ಸಭೆ

ಜೂನ್ 26ರಂದು ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಲವಂತದ ಭೂ ಸ್ವಾಧೀನ ಕೈ ಬಿಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಜುಲೈ4ರಂದು ಸಮಗ್ರ ಸಭೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಈ ನಡುವೆ ಜುಲೈ 2ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ರೈತ ಪರ ತೀರ್ಮಾನ ಕೈಗೊಳ್ಳುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗ್ತಿದೆ. ರೈತರು ಮತ್ತು ಹೋರಾಟಗಾರರು ನಂದಿ ಬೆಟ್ಟದ ಸಂಪುಟ ಸಭೆಯಿಂದ ನಿಟ್ಟುಸಿರು ಬಿಡುವ ಸುದ್ದಿ ಬರಲು ಕಾಯುತ್ತಿದ್ದಾರೆ. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...