Homeಕರ್ನಾಟಕದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ‘ದೇವನಹಳ್ಳಿ ಚಲೋ’ ಕಾರ್ಯಕ್ರಮದ ಮುಂದುವರಿದ ಭಾಗವಾಗಿ, ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಮತ್ತು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದಾರೆ. ಇಂದಿನಿಂದ (ಜೂನ್ 27) ಜುಲೈ 3ರವರೆಗೆ ನಡೆಯಲಿರುವ ಈ ಧರಣಿ ಮತ್ತು ಮುಂದಿನ ಕಾರ್ಯಕ್ರಮಗಳ ವಿವರವನ್ನು ಹೋರಾಟಗಾರರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಹೋರಾಟದ ಹಿನ್ನೆಲೆ ಮತ್ತು ರೈತರ ಅಸಮಾಧಾನ: ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಳೆದ ಮೂರೂವರೆ ವರ್ಷಗಳಿಂದ (1180 ದಿನ) ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ಯ ನೇತೃತ್ವದಲ್ಲಿ, ಬಲವಂತದ ಕೆಐಎಡಿಬಿ (KIADB) ಭೂಸ್ವಾಧೀನದ ವಿರುದ್ಧ ನಿರಂತರವಾಗಿ ಹೋರಾಡುತ್ತಿದ್ದಾರೆ. ಫಲವತ್ತಾದ ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ವಾಧೀನ ಪ್ರಕ್ರಿಯೆ ಆರಂಭಿಸಿತ್ತು. ಆದರೆ, ಪ್ರಸ್ತುತದ ಕಾಂಗ್ರೆಸ್ ಸರ್ಕಾರವು ರೈತರ ಪ್ರಬಲ ವಿರೋಧದ ನಡುವೆಯೂ 2025ರ ಏಪ್ರಿಲ್‌ನಲ್ಲಿ 10 ಹಳ್ಳಿಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯು ರೈತರು ಮತ್ತು ಸರ್ಕಾರದ ನಡುವಿನ ಸಂಘರ್ಷವನ್ನು ತೀವ್ರಗೊಳಿಸಿದೆ.

ದೇವನಹಳ್ಳಿ ಚಲೋ ಮತ್ತು ಪೊಲೀಸ್ ದೌರ್ಜನ್ಯ ಖಂಡನೆ: ಚನ್ನರಾಯಪಟ್ಟಣದ ರೈತರಿಗೆ ಬೆಂಬಲವಾಗಿ ದಲಿತ, ಕಾರ್ಮಿಕ, ಮಹಿಳಾ ಮತ್ತು ರೈತ ಸಂಘಟನೆಗಳ ಐಕ್ಯ ಹೋರಾಟವಾದ ‘ಸಂಯುಕ್ತ ಹೋರಾಟ-ಕರ್ನಾಟಕ’ ವತಿಯಿಂದ ಜೂನ್ 25ರಂದು ‘ದೇವನಹಳ್ಳಿ ಚಲೋ’ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಹೋರಾಟವನ್ನು ಸರ್ಕಾರವು ಪೊಲೀಸ್ ಬಲ ಬಳಸಿ ಹತ್ತಿಕ್ಕಲು ಪ್ರಯತ್ನಿಸಿದ್ದು, ಸಂವಿಧಾನಾತ್ಮಕವಾಗಿ ಭೂಸ್ವಾಧೀನ ವಿರೋಧಿಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಿದ್ದಾರೆ. ಇದಕ್ಕೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳೇ ಸಾಕ್ಷಿ ಎಂದು ಹೋರಾಟ ಸಮಿತಿಯ ಹೇಳಿಕೆ ತಿಳಿಸಿದೆ.

ಈ ಪೊಲೀಸ್ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜೂನ್ 26ರಂದು ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಲವಂತದ ಭೂಸ್ವಾಧೀನವನ್ನು ಕೈಬಿಡಬೇಕೆಂದು ಒತ್ತಾಯಿಸಿವೆ. ರೈತರ ಮೇಲಿನ ದೌರ್ಜನ್ಯ ಮತ್ತು ಕಾಂಗ್ರೆಸ್ ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ, ಚಿತ್ರನಟ ಪ್ರಕಾಶ್‌ ರಾಜ್, ಹಿರಿಯ ಪತ್ರಕರ್ತ ಹಾಗೂ ಬರಹಗಾರರಾದ ಡಾ. ವಿಜಯಮ್ಮ, ರೈತ ಸಂಘದ ವೀರಸಂಗಯ್ಯ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಮರುದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಠಿಣ ಶಬ್ದಗಳಲ್ಲಿ ಖಂಡಿಸಿ, ಕೂಡಲೇ ಬಲವಂತದ ಭೂಸ್ವಾಧೀನವನ್ನು ಕೈಬಿಡುವಂತೆ ಗಡುವು ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

 

 

 

ಮುಖ್ಯಮಂತ್ರಿ ಭರವಸೆ ಮತ್ತು ಸಂಯುಕ್ತ ಹೋರಾಟದ ಬೇಡಿಕೆಗಳು: ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ, ಜುಲೈ 4ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯವರೊಂದಿಗೆ ಸಮಗ್ರ ಸಭೆ ನಡೆಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜುಲೈ 3ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಅಂದಿನ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಬಲವಂತದ ಭೂಸ್ವಾಧೀನವನ್ನು ಹಿಂಪಡೆಯುವ ಜೊತೆಗೆ, ಕೆಐಎಡಿಬಿ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಕೃಷಿ ಭೂಮಿ ದುರುಪಯೋಗಕ್ಕೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ ಒತ್ತಾಯಿಸಿದೆ.

ಭೂಮಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಗಣ್ಯರು ಮತ್ತು ಮುಂದಿನ ಕಾರ್ಯಕ್ರಮಗಳು: ಇಂದು (ಜೂನ್ 27) ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆಯನ್ನು ದಸಂಸ ಹಿರಿಯ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಉದ್ಘಾಟಿಸಿ ಮಾತನಾಡಿದರು. ವಿವಿಧ ಚಳುವಳಿಗಳ ಹಿರಿಯ ನಾಯಕರಾದ ಸಿದ್ಧನಗೌಡ ಪಾಟೀಲ್‌, ವಿ. ನಾಗರಾಜ್‌, ಡಿ.ಎಚ್. ಪೂಜಾರ್‌ ಮೊದಲಾದವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕ ವಿ. ನಾಗರಾಜ, ಇಂದೂಧರ ಹೊನ್ನಾಪುರ, ಸಿದ್ಧನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್‌ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಪ್ರಭಾ ಬೆಳವಂಗಲ, ಮತ್ತು ಚನ್ನರಾಯಪಟ್ಟಣದ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ಚೀಮಾಚನಳ್ಳಿ ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವು ಗಣ್ಯರು ಮತ್ತು ರೈತರು ಉಪಸ್ಥಿತರಿದ್ದರು ಎಂದು ಸಂಯುಕ್ತ ಹೋರಾಟ ಸಮಿತಿಯು ತಿಳಿಸಿದೆ.

ನವದೆಹಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (AIAWU)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ವೆಂಕಟ್ ಹಾಗೂ ಎಸ್‌ಕೆಎಂ (SKM) ರಾಷ್ಟ್ರೀಯ ನಾಯಕರು ಇಂದು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು ಈ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.

ಭೂಮಿ ಸತ್ಯಾಗ್ರಹ ಮುಂದಿನ ವಿಚಾರಗೋಷ್ಠಿಗಳ ವೇಳಾಪಟ್ಟಿ (ಜುಲೈ 3ರವರೆಗೆ):ನಾಳೆಯಿಂದ (ಜೂನ್ 28) ನಡೆಯಲಿರುವ ಪ್ರತಿಭಟನೆಯು ಪ್ರತಿದಿನವೂ ರೈತರ ಭೂಮಿ ಮತ್ತು ಬದುಕಿಗೆ ಸಂಬಂಧಿಸಿದ ಗಹನವಾದ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿದೆ. ಭೂಮಿ ಕುರಿತ ಕಾಯ್ದೆಗಳು, ಅವುಗಳಿಗೆ ಬಂದಿರುವ ತಿದ್ದುಪಡಿಗಳು, ಕೆಐಎಡಿಬಿ ಮೊದಲಾದ ಸರ್ಕಾರಿ ಅಂಗಗಳ ಮೂಲಕ ನಡೆಯುವ ಭೂಕಬಳಿಕೆಯ ಹುನ್ನಾರಗಳು ಮುಂತಾದ ವಿಷಯಗಳ ಬಗ್ಗೆ ವಿಷಯ ತಜ್ಞರನ್ನು ಕರೆಸಿ ವಿಚಾರಗೋಷ್ಠಿ ನಡೆಸಲಾಗುತ್ತದೆ. ಈ ಚಿಂತನ-ಮಂಥನಗಳು ಪ್ರತಿದಿನ ಪಾಲ್ಗೊಳ್ಳುವ ರೈತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ತಮ್ಮ ಅರಿವನ್ನು ವಿಸ್ತರಿಸಿಕೊಳ್ಳಲು ವೇದಿಕೆಯಾಗಲಿವೆ ಎಂದು ಪ್ರತಿಭಟನೆಯ ಸಮನ್ವಯಕಾರರು ತಿಳಿಸಿದ್ದಾರೆ.

ಮುಂದಿನ ಭೂಮಿ ಸತ್ಯಾಗ್ರಹ ಹೋರಾಟದ ವಿವರಗಳನ್ನು ಈ ಕೆಳಗಿನಂತೆ ಇರಲಿವೆ ಎಂದು ಹೋರಾಟ ಸಮಿತಿ  ತಿಳಿಸಿದೆ.

ದಿನಾಂಕ

ವಿಚಾರ

June 28

ಬಿಜೆಪಿ ಮಾಡಿದ ಭೂ ಕಾಯ್ದೆಯ ತಿದ್ದುಪಡಿಯನ್ನು ಕಾಂಗ್ರೆಸ್‌ ಸಹ ಮುಂದುವರೆಸುತ್ತಿದೆ ಏಕೆ?

ವಿಷಯ ತಜ್ಞರು: ಬಡಗಲಪುರ ನಾಗೇಂದ್ರ, ರಾಜ್ಯಾಧ್ಯಕ್ಷರು, ವಿ.ಗಾಯತ್ರಿ, ಕೃಷಿ ತಜ್ಞರು ಮತ್ತು ಹೋರಾಟಗಾರರು.

June 29

ಸರ್ಕಾರದ ಭೂ ನೀತಿ ಕಾಯುತ್ತಿರುವುದು ಯಾರ ಹಿತ?

June 30

ಬಗರ್‌ ಹುಕುಂ ಸಮಸ್ಯೆ: ಬಗೆಹರಿಸಲಾಗದ ಸಮಸ್ಯೆಯೋ, ಬಗೆಹರಿಸಲು ಸಿದ್ಧವಿಲ್ಲದ ಸಮಸ್ಯೆಯೋ?
July 1

ವಸತಿ ಸಮಸ್ಯೆ; ಸಾವಿರಾರು ಎಕರೆ ಪ್ರತಿಯೊಬ್ಬ ರಾಜಕಾರಣಿಗೇ ಇದ್ದರೂ ಕೋಟ್ಯಾಂತರ ಜನರ ತಲೆ ಮೇಲೆ ಒಂದು ಸ್ವಂತದ ಸೂರು ಇಲ್ಲ ಏಕೆ?

July 2

ಅರಣ್ಯ ನೀತಿ; ಕಾಡಿನ ವಾಸಿಗಳು ತಬ್ಬಲಿಗಳಾಗಿರುವ ಕಥೆ,

July 3

KIADB ಎಂಬ ಕಾರ್ಪರೇಟ್‌ ಭೂ ಮಾಫಿಯಾ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...