ಭೋವಿ ನಿಗಮ ಹಗರಣದಲ್ಲಿ ಆರೋಪಿಯಾಗಿದ್ದ 33 ವರ್ಷದ ಮಹಿಳೆಯೊಬ್ಬರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ಸಿಐಡಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಆಕೆಯ ಸೂಸೈಡ್ ನೋಟ್‌ನಲ್ಲಿ, ತನಿಖಾಧಿಕಾರಿಯಿಂದ ಕಿರುಕುಳವನ್ನು ಅವರು ಆರೋಪಿಸಿದ್ದಾರೆ.
ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಹಿಳೆಯನ್ನು ವಿಚಾರಣೆ ನಡೆಸಿದ್ದರು. ಅವರು ಶುಕ್ರವಾರ ಇಲ್ಲಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಅವರು ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ ಎಂದು ವರದಿಯಾಗಿದೆ. ಅದರಲ್ಲಿ ಅವರು ತಮ್ಮ ಸಾವಿಗೆ ಸಿಐಡಿಯ ತನಿಖಾಧಿಕಾರಿಗಳನ್ನು ದೂಷಿಸಿದ್ದಾರೆ.
ಸಾವನ್ನು ದೃಢಪಡಿಸಿರುವ ಬೆಂಗಳೂರು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ.ಜಗಲಾಸರ್, ಡಿವೈ ಕನಕಲಕ್ಷ್ಮಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೃತರನ್ನು ಜೀವಾ ಎಂದು ಗುರುತಿಸಲಾಗಿದೆ. ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನಿಗಮಕ್ಕೆ ನೀಡಿದ್ದ ಒಟ್ಟು ₹97 ಕೋಟಿಯನ್ನು 500 ಫಲಾನುಭವಿಗಳ ಹೆಸರಿನಲ್ಲಿ ದುರ್ಬಳಕೆ ಮಾಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಈ ಹಣದ ಒಂದು ಭಾಗವನ್ನು ಮೃತ ಮಹಿಳೆಯ ಹೆಸರಿನ ಖಾತೆಗಳಿಗೆ ವರ್ಗಾಯಿಸಲಾಗಿದೆ. ಅಲ್ಲಿಂದ ಇತರ ಆರೋಪಿಗಳಿಗೆ ವಿತರಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಹೇಳುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಐಡಿ ಬಿಜೆಪಿ ಎಂಎಲ್‌ಸಿ ಸುನೀಲ್ ವಲ್ಯಾಪುರೆ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ಇದನ್ನೂ ಓದಿ; ಗ್ಯಾರಂಟಿ, ಅಭಿವೃದ್ದಿಯ ಗೆಲುವು : ಡಿ.ಕೆ ಶಿವಕುಮಾರ್


