Homeಮುಖಪುಟಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

ಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

- Advertisement -
- Advertisement -

ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಶಂಕಿತರನ್ನು ವಾರಣಾಸಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದು, ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಎನ್ನಲಾಗುತ್ತಿದೆ.

ವಾರಣಾಸಿಯ ಬ್ರಿಜ್ ಎನ್‌ಕ್ಲೇವ್ ಕಾಲೋನಿ ಸುಂದರ್‌ಪುರದ ಕುನಾಲ್ ಪಾಂಡೆ ಮತ್ತು ಜಿವಾಧಿಪುರ ಬಜಾರ್ದಿಹಾದ ಆನಂದ್ ಅಲಿಯಾಸ್ ಅಭಿಷೇಕ್ ಚೌಹಾನ್ ಮತ್ತು ಸಕ್ಷಮ್ ಪಟೇಲ್ ಬಂಧಿತ ವ್ಯಕ್ತಿಗಳು. ಅಪರಾಧ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ಗೆ ಸಂಪರ್ಕ ಹೊಂದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ತಿಳಿದುಬಂದಿದೆ. ಕುನಾಲ್ ಪಾಂಡೆ ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಮೆಟ್ರೋಪಾಲಿಟನ್ ಸಂಯೋಜಕ ಸ್ಥಾನವನ್ನು ಹೊಂದಿದ್ದರೆ, ಸಕ್ಷಮ್ ಪಟೇಲ್ ಐಟಿ ಸೆಲ್‌ನಲ್ಲಿ ವಾರಣಾಸಿ ಮೆಟ್ರೋಪಾಲಿಟನ್ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಖಿಲೇಶ್ ಖಂಡನೆ:

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಈ ಪ್ರಕರಣದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಬಂಧಿತರು ಬಿಜೆಪಿಯ ಹಿರಿಯ ನಾಯಕರ ಆಶ್ರಯದಲ್ಲಿರುವ ಹೊಸ ಬಿಜೆಪಿ ಕಾರ್ಯಕರ್ತರು ಎಂದು ತೋರಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದು, ಬಿಜೆಪಿಯ ಉನ್ನತ ನಾಯಕರಿಂದ ವಿನಾಯಿತಿ ಪಡೆದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಆಗಿದ್ದೇನು?

ಐಐಟಿ ಬಿಎಚ್‌ಯುನಲ್ಲಿ ನವೆಂಬರ್ 1ರ ರಾತ್ರಿ ಈ ಭಯಾನಕ ಘಟನೆ ಸಂಭವಿಸಿದ್ದು, ಬೈಕ್‌ನಲ್ಲಿ ಬಂದ ಮೂವರು ಯುವಕರು ಬಂದೂಕು ತೋರಿಸಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸುವಂತೆ ಒತ್ತಾಯಿಸಿದರು. ಆಕೆಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಲು ಮುಂದಾದ ಅವರು, ಹೇಯ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗಣಿತ ಇಂಜಿನಿಯರಿಂಗ್ ವಿಭಾಗದ ಬಿ.ಟೆಕ್ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಮಧ್ಯರಾತ್ರಿ 1:30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕ್ಯಾಂಪಸ್‌ನ ಗಾಂಧಿ ಸ್ಮೃತಿ ಹಾಸ್ಟೆಲ್ ಬಳಿ ಬಳಿ ತನ್ನ ಸ್ನೇಹಿತೆಗೆ ಎದುರಾಗಿದ್ದಳು. ಆಗ ಬೈಕಿನಲ್ಲಿ ಬಂದ ಮೂವರು ಕಾಮುಕರು ಯುವತಿಯರನ್ನು ಅಡ್ಡಗಟ್ಟಿದ್ದಾರೆ. ಅಂತಿಮವಾಗಿ ಸಂತ್ರಸ್ತೆಯ ಸ್ನೇಹಿತೆಯನ್ನು ಕಳುಹಿಸಿ, ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿದ್ದೂ ಅಲ್ಲದೆ, ಫೋನ್ ಅನ್ನು ಕಸಿದುಕೊಂಡಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ವಾರಣಾಸಿ ಪೊಲೀಸರು ತೀವ್ರ ತನಿಖೆ ಪ್ರಾರಂಭಿಸಿದ್ದರು. ಐಐಟಿ ಬಿಎಚ್‌ಯು ಕ್ಯಾಂಪಸ್‌ನಲ್ಲಿರುವ 170ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದರು. ಸರಿಸುಮಾರು ಎರಡು ತಿಂಗಳ ನಂತರ ನಂತರ, ಸುಸುವಾಹಿ ಪ್ರದೇಶದ ಕುನಾಲ್ ಪಾಂಡೆ ಮತ್ತು ಅವರ ಸ್ನೇಹಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...