Homeಮುಖಪುಟ“ಭೂತಕೋಲ ಹಿಂದೂ ಸಂಸ್ಕೃತಿಯಲ್ಲ” ಎಂದ ನಟ ಚೇತನ್‌ ವಿರುದ್ಧ ದೂರು

“ಭೂತಕೋಲ ಹಿಂದೂ ಸಂಸ್ಕೃತಿಯಲ್ಲ” ಎಂದ ನಟ ಚೇತನ್‌ ವಿರುದ್ಧ ದೂರು

- Advertisement -
- Advertisement -

ಕಾಂತಾರ ಚಿತ್ರದ ಕುರಿತು ಪ್ರತಿಕ್ರಿಯೆ ನೀಡುತ್ತಾ “ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ” ಎಂದಿದ್ದ ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ನಟ ಚೇತನ್‌, “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದರು.

ಮುಂದುವರಿದು “ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಆಗ್ರಹಿಸಿದ್ದರು.

ಚೇತನ್ ಅವರ ಅಭಿಪ್ರಾಯಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಶ್ಲೀಲ ಪದಗಳಿಂದ ಟ್ರೋಲ್ ಮಾಡಲಾಗಿತ್ತು. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಚೇತನ್‌ ಅವರ ಹೇಳಿಕೆಯನ್ನು ಸಮರ್ಥಿಸುವಂತೆ ‘ಒಂದು ಮುತ್ತಿನ ಕಥೆ’ ಸಿನಿಮಾದ ದೃಶ್ಯವೊಂದು ವೈರಲ್ ಆಗಿತ್ತು.

ಭಾರತವು ವೈವಿಧ್ಯಮಯವಾದ ಮತ್ತು ರೋಮಾಂಚಕವಾದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ. ನಮ್ಮ ಆದಿವಾಸಿ/ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸುವ ಮತ್ತು ಗುರುತಿಸುವ ಆಂದೋಲನವು ನಡೆಯುತ್ತಿದೆ. ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ – ಇಂತಹ ‘ಆಮದು ಮಾಡಿಕೊಂಡ’ ಧರ್ಮಗಳು – ಇತರ ಎಲ್ಲಾ ಧರ್ಮಗಳಂತೆಯೇ ಅವಿಭಾಜ್ಯವಾಗಿವೆ.
ಎಲ್ಲಾ ಅಸಮಾನತೆಗಳನ್ನ ನಾವು ವಿರೋಧಿಸಬೇಕು ಎಂದು ಚೇತನ್ ಮತ್ತೆ ಪೋಸ್ಟ್ ಮಾಡಿದ್ದರು.

ಚೇತನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ಕಾಂತಾರ ಚಿತ್ರ ನಿರ್ದೇಶಕ, ನಟ ರಿಷಬ್ ಶೆಟ್ಟಿ, “ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ, ನೋ ಕಮೆಂಟ್ಸ್” ಎಂದಿದ್ದಾರೆ.

ಇದನ್ನೂ ಓದಿ: ಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...