Homeಮುಖಪುಟಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

- Advertisement -
- Advertisement -

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, ‘ಝೀ ನ್ಯೂಸ್’ (Zee News) ವಾಹಿನಿಗೆ ‘ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಅಂಡ್ ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ’ (NBDSA) 2 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರ ಅಧ್ಯಕ್ಷತೆಯ ಪ್ರಾಧಿಕಾರವು ಈ ಕುರಿತು ಆದೇಶ ಹೊರಡಿಸಿದೆ ಎಂದು livelaw.in ವರದಿ ಮಾಡಿದೆ.

ವಿವಾದಿತ ದೃಶ್ಯಾವಳಿಗಳನ್ನು (ಪ್ರಸಾರಗಳಿಗೆ ಪ್ರವೇಶ ಕಲ್ಪಿಸುವ ಹೈಪರ್‌ಲಿಂಕ್‌ಗಳು ಸೇರಿದಂತೆ) ತನ್ನ ವೆಬ್‌ಸೈಟ್, ಯೂಟ್ಯೂಬ್ ಮತ್ತು ಇತರ ಚಾನೆಲ್ ವೇದಿಕೆಗಳಿಂದ ತೆಗೆದುಹಾಕುವಂತೆಯೂ ಪ್ರಾಧಿಕಾರವು ‘ಝೀ ನ್ಯೂಸ್’ಗೆ ನಿರ್ದೇಶನ ನೀಡಿದೆ.

2025ರ ಆಗಸ್ಟ್ 16ರಂದು ಪ್ರಸಾರವಾದ “ದೇಶ್‌ಹಿತ್ : ಎಎಂಯು ಮೇ ‘ಫಿಲಿಸ್ತೀನ್ ಪ್ರೇಮಿ ಗ್ಯಾಂಗ್’.. ‘ಯೋಗಿ ಸ್ಟೈಲ್’ ಮೇ ಹೋಗಾ ಇಲಾಜ್!” ಮತ್ತು “ಡಿಎನ್‌ಎ: ಫೀಸ್ ಮಾಫಿ ವಾಲೆ ಆಂದೋಲನ್ ಮೇ ಫಿಲಿಸ್ತೀನ್ ಜಿಂದಾಬಾದ್ ಕಹಾ ಸೆ ಆ ಗಯಾ? ಅಲಿಗಢ್ ಮುಸ್ಲಿಂ ಯೂನಿವರ್ಸಿಟಿ” ಸೇರಿದಂತೆ ಹಲವು ಕಾರ್ಯಕ್ರಮಗಳ ವಿರುದ್ಧ ತಲ್ಹಾ ಮನ್ನನ್ ಎಂಬುವವರು ಸಲ್ಲಿಸಿದ್ದ ದೂರಿನ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಮೌಲಾನಾ ಆಝಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ (MANU) ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ಹಾಗೂ ಎಎಂಯುನ ಹಳೆ ವಿದ್ಯಾರ್ಥಿಯಾಗಿರುವ ಮನ್ನನ್, ಶುಲ್ಕ ಏರಿಕೆಯ ವಿರುದ್ಧ ಮತ್ತು ವಿದ್ಯಾರ್ಥಿ ಸಂಘವನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ 2025ರ ಆಗಸ್ಟ್ 12ರಂದು ನಡೆದ ಶಾಂತಿಯುತ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಸುಮಾರು 18 ನಿಮಿಷಗಳ ಕಾಲ ಭಾಷಣ ಮಾಡಿದ್ದರು.

ನಂತರ ‘ಝೀ ನ್ಯೂಸ್’ (Zee News) ಪ್ರತಿಭಟನೆಯ ವೇಳೆ ಕೂಗಲಾದ ಘೋಷಣೆಗಳ ಆಯ್ದ 10-15 ಸೆಕೆಂಡುಗಳ ದೃಶ್ಯಾವಳಿಗಳನ್ನು ಪ್ರಸಾರ ಮಾಡಿತ್ತು. ಆ ಮೂಲಕ ಪ್ಯಾಲೆಸ್ತೀನ್ ಪರವಾಗಿ ವ್ಯಕ್ತಪಡಿಸಿದ ಕಾನೂನುಬದ್ಧ ಬೆಂಬಲವನ್ನು ಅಪರಾಧ ಅಥವಾ ದೇಶವಿರೋಧಿ ಕೃತ್ಯವೆಂಬಂತೆ ಬಿಂಬಿಸಿತ್ತು ಎಂದು ಅವರು ಆರೋಪಿಸಿದ್ದರು.

“ಝೀ ನ್ಯೂಸ್ ಪ್ರತಿಭಟನೆಯ ಮುಖ್ಯ ಉದ್ದೇಶವಾದ ‘ಶುಲ್ಕ ಹೆಚ್ಚಳ’ವನ್ನು ಕೈಬಿಟ್ಟು, ಪ್ಯಾಲೆಸ್ತೀನ್ ಪರ ಘೋಷಣೆಗಳ ಮೇಲೆ ಗಮನಹರಿಸುವ ಮೂಲಕ, ಆ ಪ್ರತಿಭಟನೆಯು ಪ್ಯಾಲೆಸ್ತೀನ್ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ ಎಂಬ ಭಾವನೆಯನ್ನು ಮೂಡಿಸಿದೆ” ಎಂದು NBDSA ಹೇಳಿದೆ.

“ಎಎಂಯುನಲ್ಲಿ ಪ್ಯಾಲೆಸ್ತೀನ್ ಪರ ಗುಂಪು” ಮತ್ತು “ಯೋಗಿ ಶೈಲಿಯಲ್ಲಿ ಚಿಕಿತ್ಸೆ ನೀಡಲಾಗುವುದು” ಮುಂತಾದ ಪರದೆಯ ಮೇಲಿನ ಬರಹಗಳನ್ನೂ (tickers) ಪ್ರಾಧಿಕಾರವು ಪರಿಶೀಲಿಸಿದ್ದು, ಈ ರೀತಿಯ ಪ್ರಸಾರವು ಘಟನೆಗೆ ಪ್ರಚೋದನಾಕಾರಿ ಸ್ವರೂಪವನ್ನು ನೀಡಿದ್ದಲ್ಲದೆ, ನಿಷ್ಪಕ್ಷಪಾತ ವರದಿಯ ಬದಲಿಗೆ ಅಪರಾಧ ಕೃತ್ಯದಂತಹ ಕ್ರಮವನ್ನು ಸಮರ್ಥಿಸುವಂತಿದೆ” ಎಂದು ಅದು ಅಭಿಪ್ರಾಯಪಟ್ಟಿದೆ.

“ಪರಿಣಾಮವಾಗಿ, ಪ್ರಸಾರಕರಿಗೆ (ಝೀ ನ್ಯೂಸ್‌) 2 ಲಕ್ಷ ರೂಪಾಯಿ ದಂಡ ವಿಧಿಸಲು NBDSA ನಿರ್ಧರಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದೂರುದಾರರು ಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಹಾಗೂ ಪರಿಹಾರ ಪಡೆಯುವ ಎರಡೂ ಹಂತಗಳಲ್ಲಿ ದೂರು ಸಲ್ಲಿಸುವಾಗ ಉಂಟಾದ ವಿಳಂಬಕ್ಕೆ ಅವರು ನೇರ ಕಾರಣರಲ್ಲ ಎಂದು ಗಮನಿಸಿದ ಪ್ರಾಧಿಕಾರವು, ಆ ವಿಳಂಬವನ್ನು ಮನ್ನಿಸಿದೆ.

Cortesy : livelaw.in




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...