Homeಮುಖಪುಟಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

- Advertisement -
- Advertisement -

ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಿಭವ್ ಕುಮಾರ್ ಅವರನ್ನು ಮುಖ್ಯಮಂತ್ರಿ ನಿವಾಸದ ಬಳಿಯಿಂದ ಬಂಧಿಸಿ ಕರೆದೊಯ್ದಿರುವ ಬಗ್ಗೆ ವರದಿಯಾಗಿದೆ. ಮಲಿವಾಲ್ ದೂರಿನ ಮೇರೆಗೆ ದೆಹಲಿ ಪೊಲೀಸರು ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಮೇ.13ರಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಹೋದಾಗ ಬಿಭವ್ ಕುಮಾರ್ ತನಗೆ 7–8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ ಮತ್ತು ಪದೇ ಪದೇ ಎದೆ ಮತ್ತು ಹೊಟ್ಟೆಗೆ ಒದೆ ನೀಡಿದ್ದಾನೆ. ತನಗೆ ಪಿರಿಯಡ್ಸ್ ಆಗುತ್ತಿದೆ ಎಂದು ಹೇಳಿದ ನಂತರವೂ ಬಿಭವ್ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಮಲಿವಾಲ್ ದೂರಿನಲ್ಲಿ ಆರೋಪಿಸಿದ್ದರು.

ಶುಕ್ರವಾರ, ದೆಹಲಿ ಪೊಲೀಸರು ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಮಲಿವಾಲ್ ಅವರನ್ನು ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಕರೆದೊಯ್ದಿದ್ದರು. ತೀಸ್ ಹಜಾರಿ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಮಲಿವಾಲ್‌ ಹೇಳಿಕೆಯನ್ನೂ ದಾಖಲಿಸಿದ್ದರು.

ಈ ಮಧ್ಯೆ ಬಿಭವ್ ಕುಮಾರ್ ಅವರು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಪ್ರತಿದೂರು ನೀಡಿದ್ದು, ಮಲಿವಾಲ್ ಅವರು ಬಲವಂತವಾಗಿ ಮತ್ತು ಅನಧಿಕೃತವಾಗಿ ಮುಖ್ಯಮಂತ್ರಿಯ ನಿವಾಸಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಗದ್ದಲವನ್ನು ಸೃಷ್ಟಿಸಲು ಮತ್ತು ಹಲ್ಲೆ ಮಾಡಲು ಪ್ರಯತ್ನಿಸಿದರು. ಕೇಜ್ರಿವಾಲ್‌ಗೆ ಹಾನಿ ಮಾಡುವ ಉದ್ದೇಶ ಹೊಂದಿದ್ದರು ಎಂದು ಆರೋಪಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಚಿವೆ ಅತಿಶಿ,  ಮುಖ್ಯಮಂತ್ರಿ ಕೇಜ್ರಿವಾಲ್‌ ವಿರುದ್ಧದ ಪಿತೂರಿಯ ಭಾಗವಾಗಲು ಮಲಿವಾಲ್ ಅವರನ್ನು ಬಿಜೆಪಿ “ಬ್ಲ್ಯಾಕ್‌ಮೇಲ್” ಮಾಡಿದೆ. ಆಪ್ ಸಂಸದರನ್ನು ದೆಹಲಿ ಮುಖ್ಯಮಂತ್ರಿ ಮನೆಯಿಂದ ಭದ್ರತಾ ಸಿಬ್ಬಂದಿ ಹೊರಕ್ಕೆ ಕರೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಮಲಿವಾಲ್ ಅವರು ನಾಟಕವಾಡುತ್ತಿದ್ದಾರೆ. ವೀಡಿಯೊದಲ್ಲಿ ಅವರು ಯಾವುದೇ ಕುಂಟುತ್ತಿಲ್ಲದೆ ನಡೆಯುತ್ತಿರುವುದು ಕಂಡುಬಂದಿದೆ. ಆಕೆಯ ಬಟ್ಟೆ ಹರಿದಿಲ್ಲ, ನೋವಿನಿಂದ ಇರಲಿಲ್ಲ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು. ಎಫ್‌ಐಆರ್‌ನಲ್ಲಿ ಬರೆದಿರುವುದೆಲ್ಲ ಸುಳ್ಳು ಎಂದು ಈ ವಿಡಿಯೋ ತೋರಿಸುತ್ತದೆ. ಅವರು ಬಿಭವ್ ಕುಮಾರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಅವರು ಆರಾಮವಾಗಿ ಸಿಎಂ ಕಚೇರಿಯಿಂದ ಹೊರಗೆ ಹೋಗುತ್ತಿದ್ದಾರೆ ಎಂದು ತೋರಿಸುತ್ತದೆ ಎಂದು ಅತಿಶಿ ಹೇಳಿದ್ದರು.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...