Homeಮುಖಪುಟಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

- Advertisement -
- Advertisement -

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ ನಡೆಯಿತು. ಈ ಹೋರಾಟದಲ್ಲಿ ನಟ ಪ್ರಕಾಶ್ ರಾಜ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಚುಕ್ಕಿ ನಂಜುಡಸ್ವಾಮಿ, ಸಾಮಾಜಿಕ ಕಾರ್ಯಕರ್ತ ಎಸ್‌.ಆರ್.ಹಿರೇಮಠ್, ಬಡಗಲಪುರ ನಾಗೇಂದ್ರ, ನೂರ್ ಶ್ರೀಧರ್, ಎಸ್. ವರಲಕ್ಷ್ಮೀ, ಬಸವರಾಜಪ್ಪ, ಲಕ್ಷ್ಮಣ್ ಹೂಗಾರ್ ಸೇರಿದಂತೆ ಹಲವು ಪ್ರಮುಖ ರೈತ ನಾಯಕರು ಮತ್ತು ಸಾಮಾಜಿಕ ಹೋರಾಟಗಾರರು ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಹೋರಾಟದ ತೀವ್ರತೆಯನ್ನು ಮನಗಂಡ ಮುಖ್ಯಮಂತ್ರಿಗಳು ಮಧ್ಯಾಹ್ನ 3 ಗಂಟೆಗೆ ‘ಕೃಷ್ಣಾ’ ಗೃಹ ಕಚೇರಿಯಲ್ಲಿ ರೈತ ಮುಖಂಡರ ನಿಯೋಗದೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಬಿಡದಿ ಭಾಗದ ಸಣ್ಣ ಮತ್ತು ಮಧ್ಯಮ ಕ್ರಮಾಂಕದ ರೈತರು ಭಾಗವಹಿಸಿ, ನಾವು ಯಾವುದೇ ಕಾರಣಕ್ಕೂ ಜೀವನಾಧಾರವಾಗಿರುವ ಭೂಮಿಯನ್ನು ಮಾರಾಟ ಮಾಡಲು ಸಿದ್ಧರಿಲ್ಲ, ಟೌನ್‌ಶಿಪ್ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಿ ನಮ್ಮ ಬದುಕನ್ನು ಉಳಿಸಿಕೊಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಯುಕ್ತ ಹೋರಾಟದ ಮುಖಂಡರು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಈ ಯೋಜನೆ ಕೃಷಿ, ಪರಿಸರ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ಹಾನಿಕಾರಕವಾಗಿದ್ದು, ಜಸ್ಟಿಸ್ ಗೋಪಾಲಗೌಡರ ನೇತೃತ್ವದ ಸಮಿತಿಯು ನಡೆಸಿದ ಸಾರ್ವಜನಿಕ ವಿಚಾರಣೆಯ ವರದಿ ಹಾಗೂ ಶೇಕಡಾ 80ಕ್ಕೂ ಹೆಚ್ಚು ರೈತರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ಸಹಿ ಮಾಡಿರುವ ಬೃಹತ್ ಕಡತವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.

ರೈತರ ನಿಯೋಗವು ಸರ್ಕಾರಕ್ಕೆ ಪ್ರಮುಖವಾಗಿ ನಾಲ್ಕು ಹಕ್ಕೊತ್ತಾಯಗಳನ್ನು ಮುಂದಿಟ್ಟಿದೆ:

  1. ಸರ್ಕಾರ ರಚಿಸುವ ಸಮಿತಿಯು ಕಾಲಹರಣ ಮಾಡದೆ ಒಂದು ತಿಂಗಳ ನಿಗದಿತ ಅವಧಿಯೊಳಗೆ ತನ್ನ ಕಾರ್ಯ ಮುಗಿಸಿ ವರದಿ ನೀಡಬೇಕು.
  2. ಈ ಸಮಿತಿಯಲ್ಲಿ ಕಡ್ಡಾಯವಾಗಿ ಪರಿಸರ, ಕೃಷಿ ಮತ್ತು ಸಾಮಾಜಿಕ ತಜ್ಞರನ್ನು ಒಳಗೊಳ್ಳಬೇಕು.
  3. ಸಮಿತಿಯ ಸದಸ್ಯರು ಬೆಂಗಳೂರಿನಲ್ಲೇ ಉಳಿಯದೆ ಖುದ್ದಾಗಿ ಬಿಡದಿ ರೈತರ ಜಮೀನುಗಳಿಗೆ ಭೇಟಿ ನೀಡಿ ರೈತರ ನೇರ ಅಭಿಪ್ರಾಯ ಸಂಗ್ರಹಿಸಬೇಕು.
  4. ಸಮಿತಿಯ ಅಂತಿಮ ವರದಿ ಬಂದು ಈ ವಿಷಯ ಇತ್ಯರ್ಥವಾಗುವವರೆಗೆ ಬಿಡದಿ ಭೂಸ್ವಾಧೀನಕ್ಕೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆಯನ್ನು ಮುಂದುವರಿಸಬಾರದು.

ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, “ನಾನು ಅದೇ ಜಿಲ್ಲೆಯವನಾಗಿದ್ದು, ನೀವು ಬೆಳೆಸಿದ ಹಸಿರನ್ನು ಕಣ್ಣಾರೇ ಕಂಡಿದ್ದೇನೆ. ಹಸಿರು ನಾಶವಾಗುವುದನ್ನು ನಾನು ಬಯಸುವುದಿಲ್ಲ, ನೀವು ಕೃಷಿಯಲ್ಲಿ ಮುಂದುವರಿಯುವುದಾದರೆ ನನಗೂ ಸಂತೋಷವೇ ಎಂದು ಭರವಸೆ ನೀಡಿದರು. ಅಲ್ಲದೆ, ಬಲವಂತವಾಗಿ ಯಾರ ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಹಾಗೂ ರೈತರು ಭೂಮಿ ಮಾರಾಟ ಮಾಡಬೇಡಿ ಎಂದು ಸಲಹೆ ನೀಡಿದರು. ಹೋರಾಟಗಾರರು ನೀಡುವ ಶಿಫಾರಸುಗಳನ್ನು ಪರಿಗಣಿಸಿ ಸಮಿತಿಯನ್ನು ರಚಿಸುವುದಾಗಿ ತಿಳಿಸಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು

ಸರ್ಕಾರದ ಭರವಸೆಯನ್ನು ಸ್ವಾಗತಿಸಿರುವ ಹೋರಾಟಗಾರರು, ತಮ್ಮ ಮೂಲ ಹೋರಾಟದ ಸ್ಥಳವಾದ ಬೈರಮಂಗಲದಲ್ಲಿ ಪ್ರತಿಭಟನೆಯನ್ನು ಮುಂದುವರಿಸಲಿದ್ದಾರೆ. 1 ತಿಂಗಳ ಕಾಲಮಿತಿಯೊಳಗೆ ಸೂಕ್ತ ಅಂತಿಮ ತೀರ್ಮಾನ ಬರದಿದ್ದರೆ ಮತ್ತೆ ಬೆಂಗಳೂರಿನಲ್ಲಿ ಬೃಹತ್ ಹೋರಾಟ ರೂಪಿಸುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್, ಚುಕ್ಕಿ ನಂಜುಡಸ್ವಾಮಿ, ಸಾಮಾಜಿಕ ಕಾರ್ಯಕರ್ತ ಎಸ್‌.ಆರ್.ಹಿರೇಮಠ್, ದರ್ಶನ್ ಪುಟ್ಟಣಯ್ಯ, ಬಡಗಲಪುರ ನಾಗೇಂದ್ರ, ನೂರ್ ಶ್ರೀಧರ್, ಎಸ್. ವರಲಕ್ಷ್ಮೀ, ಬಸವರಾಜಪ್ಪ, ಲಕ್ಷ್ಮಣ್ ಹೂಗಾರ್ ಮತ್ತಿತರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...