Homeಕರ್ನಾಟಕ​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

- Advertisement -
- Advertisement -


​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.

​ಭೂಸ್ವಾಧೀನದ ವಿರುದ್ಧ ತಿರುಗಿಬಿದ್ದ ಬಿಡದಿ ರೈತರು ಕಳೆದ ಒಂದು ವರ್ಷದಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಬಿಎಂಆರ್‌ಡಿಎ (ಅಥವಾ ಜಿಬಿಎ) ಟೌನ್‌ಶಿಪ್‌ಗಾಗಿ ಬೈರಮಂಗಲ, ಕೆಂಚಗಾರನಹಳ್ಳಿ ಗ್ರಾಮ ಪಂಚಾಯಿತಿಗಳ 26 ಹಳ್ಳಿಗಳ ಸುಮಾರು 9600 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ಥಳೀಯ ರೈತರು ಗಟ್ಟಿ ಧ್ವನಿಯಲ್ಲಿ ವಿರೋಧಿಸುತ್ತಿದ್ದಾರೆ. ವಾಸ್ತವವಾಗಿ ಇಲ್ಲಿನ ಬಹುಪಾಲು ಕುಟುಂಬಗಳು ರೈತಾಪಿ ಕುಟುಂಬಗಳಾಗಿದ್ದು, ವೃಷಭಾವತಿ ಜಲಾಶಯಕ್ಕೆ (ರಿಸರ್ವಾಯರ್) ಹೊಂದಿಕೊಂಡಂತಿರುವ ಈ ಭೂಮಿಗಳಲ್ಲಿ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ಮಾವು ಸೇರಿದಂತೆ ರೇಷ್ಮೆಯಂತಹ ವಾಣಿಜ್ಯ ಬೆಳೆಗಳು, ಹಲವು ಬಗೆಯ ಸೊಪ್ಪು, ಹಣ್ಣು, ತರಕಾರಿಗಳು ಹೇರಳವಾಗಿ ಬೆಳೆಯುವ ಪ್ರದೇಶವಾಗಿದೆ. ಹಾಲು ಇಲ್ಲಿನ ಮತ್ತೊಂದು ಬಹುಮುಖ್ಯ ಕೃಷಿ ಉತ್ಪಾದನೆಯಾಗಿದೆ.

​ಕಳೆದ 20 ವರ್ಷಗಳಿಂದಲೂ ಸುದ್ದಿಯಲ್ಲಿರುವ ಈ ಟೌನ್‌ಶಿಪ್ ಯೋಜನೆಯು ಎಲ್ಲಾ ಪಕ್ಷಗಳ ಸರ್ಕಾರಗಳ ಅವಧಿಯನ್ನೂ ದಾಟಿ ಬಂದಿದ್ದು, ಇದೇ ಕಾರಣಕ್ಕೆ ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.
​ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಭೂಸ್ವಾಧೀನಕ್ಕೆ ನೋಟಿಫಿಕೇಶನ್ ಮಾಡಿದ್ದು, ಆ ಭೂಮಿಯನ್ನು ಕೆಂಪು ವಲಯವಾಗಿ ಮೀಸಲಿರಿಸಿ ಯಾವುದೇ ರೀತಿಯ ಅಭಿವೃದ್ಧಿಯಾಗದಂತೆ ತಡೆ ಹಿಡಿದಿದ್ದರು. ಆದರೆ, ಇಂದು “ನಾವು ರೈತರ ಪರ, ಭೂಮಿ ಉಳಿಸುತ್ತೇವೆ” ಎಂದು ಸರಣಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಇದನ್ನೇ ದಾಳವಾಗಿ ಬಳಸಿಕೊಳ್ಳುತ್ತಿರುವ ಪ್ರಭಾವಿ ರಾಜಕಾರಣಿ, ಜಿಬಿಎ ನೇತೃತ್ವ ವಹಿಸಿರುವ ಡಿಕೆಶಿ, “ಟೌನ್‌ಶಿಪ್ ಮಾಡಿಯೇ ಸಿದ್ದ” ಎಂದು ಮುನ್ನುಗ್ಗುತ್ತಿದ್ದಾರೆ.

​ಎರಡೂ ಪಕ್ಷಗಳು ಪ್ರತಿದಿನ ಒಂದಿಲ್ಲೊಂದು ದಾಳ ಉರುಳಿಸುತ್ತಿವೆ. ಡಿಕೆಶಿ ಕೆಲವು ರೈತರನ್ನು ಕರೆದು “ಭೂಮಿ ನೀಡಲು ಸಿದ್ಧ” ಎಂದು ಹೇಳಿಕೆ ಕೊಡಿಸಿ, “80% ರೈತರು ಭೂಸ್ವಾಧೀನಕ್ಕೆ ಒಪ್ಪಿದ್ದಾರೆ” ಎಂದು ಪತ್ರಿಕಾಗೋಷ್ಠಿ ನಡೆಸಿದರೆ, ಜೆಡಿಎಸ್ ನಾಯಕರು ಗ್ರಾಮಗಳಿಗೆ ಭೇಟಿ ನೀಡಿ ಜನಾಭಿಪ್ರಾಯ ಸಂಗ್ರಹಣೆ ನಡೆಸುವ ನೆಪದಲ್ಲಿ ರೋಡ್ ಶೋ ನಡೆಸಿ, “ರೈತರು ಭೂಸ್ವಾಧೀನದ ವಿರುದ್ಧವಿದ್ದಾರೆ, ನಾವು ಅವರ ಜೊತೆಗಿದ್ದೇವೆ” ಎಂದಿದ್ದಾರೆ. ರೈತರು ಮಾತ್ರ, “ಡಿಕೆಶಿ ಸುಳ್ಳು ಹೇಳುತ್ತಿದ್ದಾರೆ, ಅವರ ಮಾತು ನಿಜವಾಗಿದ್ದರೆ ಭೂಮಿ ನೀಡಲು ಒಪ್ಪಿರುವ 80% ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಿ” ಎಂದು ಸವಾಲು ಹಾಕಿದ್ದಾರೆ.ದಿಯ ಈ ಟೌನ್‌ಶಿಪ್ ಯೋಜನೆ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದರೆ, ಈ ರಾಜಕಾರಣಿಗಳ ಪ್ರತಿಷ್ಠೆಯ ಬರಾಟೆಯ ಮಧ್ಯೆ ನಲುಗುತ್ತಿರುವುದು ಮಾತ್ರ ಸಾಮಾನ್ಯ ರೈತರು.

​ಇಲ್ಲಿರುವುದು ಸಣ್ಣ ಮತ್ತು ಅತಿ ಸಣ್ಣ ರೈತರಾದರೂ, ಮೊದಲಿನಿಂದಲೂ ನೀರಾವರಿ ಪ್ರದೇಶವಾಗಿರುವುದರಿಂದ ಮತ್ತು ಬೆಂಗಳೂರಿಗೆ ಹೊಂದಿಕೊಂಡಂತಿರುವುದರಿಂದ, ಈ ಭಾಗದ ಬಹುಪಾಲು ಕುಟುಂಬಗಳು ಆರ್ಥಿಕವಾಗಿ ಸದೃಢವಾಗಿವೆ.

​ಇವೆಲ್ಲವುಗಳ ಮಧ್ಯೆ ರೈತರು ಯಾವುದೇ ಕಾರಣಕ್ಕೂ ಭೂಮಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಬಿಡದಿ ರೈತರಿಗೆ ರಾಜ್ಯದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಕರ್ನಾಟಕ ಪ್ರಾಂತ್ಯ ರೈತಸಂಘ, ಕರ್ನಾಟಕ ರಾಜ್ಯ ರೈತಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿದಂತೆ ಹೋರಾಟಗಾರರು, ಬರಹಗಾರರು, ಪ್ರಗತಿಪರರು ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಪ್ರತಿದಿನ ಹೋರಾಟದ ಕಾವು ಹೆಚ್ಚುತ್ತಿದ್ದು ಇದು ನೇರವಾಗಿ ಡಿಕೆಶಿ ವಿರುದ್ಧ ತಿರುಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ರಮೇಶ್‌ ಚೀಮಾಚನಹಳ್ಳಿ

ದೇವನಹಳ್ಳಿ ಭೂ ಸ್ವಾದೀನ ವಿರೋಧಿ ಹೋರಾಟದ ಮುಂಚೂಣಿ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ರಮೇಶ್‌ ಚೀಮಾಚನಹಳ್ಳಿ
ರಮೇಶ್‌ ಚೀಮಾಚನಹಳ್ಳಿ
ದೇವನಹಳ್ಳಿ ಭೂ ಸ್ವಾದೀನ ವಿರೋಧಿ ಹೋರಾಟದ ಮುಂಚೂಣಿ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು
- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...