Homeಮುಖಪುಟಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

- Advertisement -
- Advertisement -

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ ಮುಂದೆಯೇ ಬಹಿರಂಗವಾಗಿ ಸಾಬೀತುಪಡಿಸಲಿ ಎಂದು ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ನೇರ ಪಂಥಾಹ್ವಾನ ನೀಡಿದೆ.

ಯೋಜನೆಗೆ ಎಷ್ಟು ಪ್ರಮಾಣದ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಸ್ವತಃ ಗ್ರಹಿಸಲು ಸರ್ಕಾರ ಹಾಗೂ ಸಂಬಂಧಪಟ್ಟ ಜಿ-ಬಿಡಿ (G-BDA) ಅಧಿಕಾರಿಗಳು ಬಹಿರಂಗ ಜನಸಾಕ್ಷಿ ವಿಚಾರಣೆಯಲ್ಲಿ (Public Hearing) ಖುದ್ದು ಭಾಗವಹಿಸಬೇಕು ಎಂದು ಸಂಘಟನೆಯು ಆಗ್ರಹಿಸಿದೆ.

ರೈತರ ನೈಜ ಅಭಿಪ್ರಾಯ ಹಾಗೂ ಅಳಲುಗಳನ್ನು ದಾಖಲಿಸಲು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆಯು ಜುಲೈ 23ರಂದು ಬೆಳಿಗ್ಗೆ 10.30ಕ್ಕೆ ಬಿಡದಿ ಹೋಬಳಿಯ ಬೈರಮಂಗಲದಲ್ಲಿ ಬಹಿರಂಗ ಪಬ್ಲಿಕ್ ಹಿಯರಿಂಗ್ ಆಯೋಜಿಸಿದೆ. ನಿವೃತ್ತ ನ್ಯಾಯಮೂರ್ತಿ ಎ. ಗೋಪಾಲಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ನೂರಾರು ರೈತರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಈ ವಿಚಾರಣೆಗೆ ಸರ್ಕಾರ, ಅಧಿಕಾರಿಗಳು ಹಾಗೂ ಯೋಜನೆಗೆ ಬೆಂಬಲ ನೀಡುವವರು ಮುಕ್ತವಾಗಿ ಭಾಗವಹಿಸಿ ತಮ್ಮಲ್ಲೇನಾದರೂ ದಾಖಲೆಗಳಿದ್ದರೆ ಮಂಡಿಸಬಹುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕರಾದ ಬಡಗಲಪುರ ನಾಗೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್, ಸರ್ಕಾರ ಮಾಡುತ್ತಿರುವ ಪ್ರತಿಯೊಂದು ಹೇಳಿಕೆಯನ್ನು ಜನರ ಮುಂದೆಯೇ ಪರಿಶೀಲಿಸುವ ಸಮಯ ಬಂದಿದೆ. ಸತ್ಯವನ್ನು ಮುಚ್ಚಿಡುವ ಅಗತ್ಯ ನಮಗಿಲ್ಲ. ವಾಸ್ತವದಲ್ಲಿ 80%ಕ್ಕೂ ಹೆಚ್ಚು ರೈತರು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ಪ್ರಶ್ನಿಸಿದ ಅವರು, ನೀವು ಮತ್ತೆ ಮತ್ತೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನೇ ಚರ್ಚೆಗೆ ಕರೆಯುವ ಬದಲು, ನೇರವಾಗಿ ಸಂಕಷ್ಟದಲ್ಲಿರುವ ರೈತರ ಜೊತೆ ಮುಖಾಮುಖಿಯಾಗಿ ಮಾತನಾಡಿ. ರೈತರ ಒಪ್ಪಿಗೆಯಿಲ್ಲದೆ ಭೂಮಿ ಪಡೆಯುವುದಿಲ್ಲ ಎಂದು ಒಂದು ಕಡೆ ಹೇಳುತ್ತಾ, ಇನ್ನೊಂದೆಡೆ ಜಿ-ಬಿಡಿ ಅಧಿಕಾರಿಗಳಿಂದ ಅಂತಿಮ ನೋಟಿಸ್ ಕಳುಹಿಸುತ್ತಿರುವುದು ರೈತರಿಗೆ ಮಾಡುತ್ತಿರುವ ವಂಚನೆ. ಯೋಜನೆ ಪರವಾಗಿ ಮಾತನಾಡುತ್ತಿರುವವರಲ್ಲಿ ಹೆಚ್ಚಿನವರು ನಿಜವಾದ ಕೃಷಿಕರಲ್ಲ, ಬದಲಿಗೆ ಲಾಭದ ಕಣ್ಣಿಟ್ಟಿರುವ ರಿಯಲ್ ಎಸ್ಟೇಟ್ ಹೂಡಿಕೆದಾರರು. ಇದು ರಾಜಕೀಯ ಪಕ್ಷಗಳ ನಡುವಿನ ಯುದ್ಧವಲ್ಲ ಸರ್ಕಾರ ಮತ್ತು ರೈತರ ನಡುವಿನ ಜೀವನ್ಮರಣ ಹೋರಾಟ ಎಂದು ಸ್ಪಷ್ಟಪಡಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಬಿಡದಿ ಟೌನ್‌ಶಿಪ್‌ಗೆ ಗುರುತಿಸಲಾಗಿರುವ ಪ್ರದೇಶವನ್ನು ಬರಡುಭೂಮಿ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಅದು ಅತ್ಯಂತ ಫಲವತ್ತಾದ ಭೂಮಿಯಾಗಿದ್ದು, ದಲಿತರು ಸೇರಿದಂತೆ ನೂರಾರು ಕುಟುಂಬಗಳು ಕೃಷಿಯನ್ನೇ ನಂಬಿ ಬದುಕುತ್ತಿವೆ. ಆ ನೆಲವನ್ನು ಉಳಿಸಿಕೊಳ್ಳುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕಾರ್ಪೊರೇಟ್ ಮತ್ತು ಬಂಡವಾಳಶಾಹಿ ಮಾದರಿಯ ವಿರುದ್ಧ ದೇಶದಾದ್ಯಂತ ಜನರ ಪ್ರತಿರೋಧ ಶುರುವಾಗಿದೆ. ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿ ವಿರುದ್ಧ ನಡೆದ ಚಳುವಳಿಯಂತೆ ಬಿಡದಿಯಲ್ಲೂ ಜನರು ತಮ್ಮ ಹಕ್ಕುಗಳ ರಕ್ಷಣೆಗೆ ನಿಂತಿದ್ದಾರೆ. ಕೇವಲ ಹಣವಿದೆ ಎಂಬ ಕಾರಣಕ್ಕೆ ಕಾರ್ಪೊರೇಟ್ ಕಂಪನಿಗಳಿಗೆ ರೈತರ ಭೂಮಿಯನ್ನು ಕಬಳಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಸ್ಥಳೀಯ ರೈತ ಪ್ರಕಾಶ್ ಮಾತನಾಡಿ, ಮುಖ್ಯಮಂತ್ರಿಗಳ ಭರವಸೆಗೂ ಜಿ-ಬಿಡಿ ಅಧಿಕಾರಿಗಳ ನಡೆಗೂ ಸಂಪೂರ್ಣ ವಿರೋಧಾಭಾಸವಿದೆ. ಅಧಿಕಾರಿಗಳು ಭೂಮಿಯ ವಿಸ್ತೀರ್ಣವನ್ನು ಕಡಿಮೆ ತೋರಿಸಿ ಪರಿಹಾರದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ. ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು, ಸುಳ್ಳು ಕೇಸ್ ಹಾಕುವ ಬೆದರಿಕೆ ಒಡ್ಡಿ ರೈತರನ್ನು ಮಣಿಸಲು ನೋಡುತ್ತಿದ್ದಾರೆ. ತಜ್ಞರ ಸಲಹಾ ಸಮಿತಿ ವರದಿ ಬರುವವರೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಆಯೋಜಿಸಿರುವ ಈ ಪಬ್ಲಿಕ್ ಹಿಯರಿಂಗ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಯೋಜನೆ ಪರ-ವಿರೋಧ ಇರುವ ಎಲ್ಲರೂ ಭಾಗವಹಿಸಿ ತಮ್ಮ ದಾಖಲೆಗಳನ್ನು ಜನರ ಮುಂದಿಡಲು ಮುಕ್ತ ಅವಕಾಶ ನೀಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಬಡಗಲಪುರ ನಾಗೇಂದ್ರ, ಟಿ. ಯಶವಂತ್, ಕೆ. ವಿ. ಭಟ್, ನೂರ್ ಶ್ರೀಧರ್, ಗುರುಪ್ರಸಾದ್ ಕೆರಗೋಡು ಮತ್ತಿತರರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...