Homeಮುಖಪುಟಬೀದರ್: ಮೊರಾರ್ಜಿ ಶಾಲೆಗಳಲ್ಲಿ RSS ಶಿಬಿರ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಬೀದರ್: ಮೊರಾರ್ಜಿ ಶಾಲೆಗಳಲ್ಲಿ RSS ಶಿಬಿರ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

- Advertisement -
- Advertisement -

ರಾಜ್ಯದ ಹಲವು ಮೊರಾರ್ಜಿ ವಸತಿ ಶಾಲೆಗಳಲ್ಲಿ RSS ಕಾರ್ಯಕರ್ತರು ತಾಲೀಮು ಶಿಬಿರ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೀದರ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಮೊರಾರ್ಜಿ ವಸತಿ ಶಾಲೆಗಳನ್ನು ಅನಧಿಕೃತವಾಗಿ ಆರ್‌ಎಸ್‌ಎಸ್‌ ಶಿಬಿರಗಳಿಗೆ ನೀಡಿರುವುದನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಬೀದರ್ ತಾಲ್ಲೂಕಿನ ಕಮಠಾಣದ ಮೊರಾರ್ಜಿ ವಸತಿ ಶಾಲೆಯಲ್ಲಿ 9 ದಿನಗಳ ಕಾಲ ಸಂಘ ಪರಿವಾರದ ತಾಲೀಮು ಶಿಬಿರ ನಡೆಯುತ್ತಿದೆ. ಈ ಮೂಲಕ ಮಕ್ಕಳನ್ನು ಪಠ್ಯೇತರ ಚಟುವಟಿಕೆ ಹೆಸರಿನಲ್ಲಿ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಸಹ ಆರ್‌ಎಸ್‌ಎಸ್‌ ಶಿಬಿರ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮುಂಚೆ ಬೇರೆ ಕಡೆ ಶಿಬಿರ ಮಾಡುತ್ತಿದ್ದ ಆರ್‌ಎಸ್‌ಎಸ್‌ನವರು ಈ ಸರ್ಕಾರಿ ಶಾಲೆಗಳಿಗೆ ಕಾಲಿಟ್ಟಿದ್ದಾರೆ. ಆ ಮೂಲಕ ಮಕ್ಕಳ ಶಿಕ್ಷಣವನ್ನು ಹಾಳುಗೆಡವಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಏನಿದು ಶಿಬಿರ?

ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅಕ್ಟೋಬರ್ ತಿಂಗಳಿನಲ್ಲಿ, “ಬಾಲಕರು-ತರುಣರಿಗೆ ಯೋಗಾಸನ, ರಾಷ್ಟ್ರೀಯ ಚಿಂತನೆ ಕುರಿತು ದೈಹಿಕ – ಬೌದ್ಧಿಕ- ವ್ಯಕ್ತಿತ್ವ ವಿಕಸನ ಶಿಬಿರದ” ಹೆಸರಿನಲ್ಲಿ ತಾಲೀಮು ನಡೆಸಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಅವಕಾಶ ನೀಡಿದ್ದಾರೆ. ಆದರೆ ಆ ನೆಪದಲ್ಲಿ ಅನುಮತಿ ಪಡೆದು ಎಲ್ಲಾ ಕಡೆ ಆರ್‌ಎಸ್‌ಎಸ್‌ ತರಬೇತಿ ಶಿಬಿರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೂತಾಂಡಹಳ್ಳಿಯಲ್ಲಿರುವ ಕರ್ನಾಟಕ ಸರ್ಕಾರದ ಕ್ರೈಸ್ ಸಂಸ್ಥೆಯ ವಸತಿ ನಿಲಯವನ್ನು ನಾಳೆಯಿಂದ ಅಕ್ಟೋಬರ್ 09 ರಿಂದ 15ರವರೆಗೆ ಒಟ್ಟು 9 ದಿನಗಳ ಕಾಲ ಸಂಘ
ಪರಿವಾರದ ತಾಲೀಮು ಶಿಬಿರ ನಡೆಸಲು ಸ್ವತಃ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯೇ ವಸತಿ ಶಾಲೆಯನ್ನು ಹಿಂದುತ್ವ ಕಾರ್ಯಗಳಿಗೆ ಬಳಕೆಗೆ ಬಿಟ್ಟು ಕೊಡಲು ಶಿಫಾರಸ್ಸು ಮಾಡಿರುವುದು ಸರಿಯಲ್ಲ ಎಂದು ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ. ವಾಸುದೇವರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಾ (ಆರ್ ಎಸ್ ಎಸ್) ಸಂಘ ಕೋಲಾರ ವಿಭಾಗ ಪ್ರಶಿಕ್ಷಣ ಶಿಬಿರವನ್ನು ನಡೆಸಲು
ಕರ್ನಾಟಕ ಸರ್ಕಾರವೇ ಸರ್ಕಾರಿ ವಸತಿ ಶಾಲೆಗಳನ್ನು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳನ್ನು ಸಂಘ ಪರಿವಾರದ ತರಬೇತಿ ತಾಣಗಳನ್ನಾಗಿ ಮಾರ್ಪಡಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಕೋಲಾರ ಮೂಲದ ಪ್ರೇರಣಾ ಪ್ರತಿಷ್ಠಾನ ಆಯೋಜಿಸಿರುವ ಶಿಬಿರದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಹಿಂದು ಸಂಘಟನೆಯ ಕಾರ್ಯಕರ್ತರು ಭಾಗವಹಿಸುತ್ತಿದ್ದು ,ಇದರಿಂದ ವಸತಿ ಶಾಲೆಯ ವಿದ್ಯಾರ್ಥಿಗಳ ಭೋದನಾ ಚಟುವಟಿಕೆಗಳಿಗೆ ಅಡ್ಡಿಯಾಗಲಿದ್ದು, ತಕ್ಷಣವೇ ಸದರಿ ಆದೇಶ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೋಲಾರ ಮಾತ್ರವಲ್ಲದೆ ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಅಕ್ಟೋಬರ್ 7 ರಿಂದ ಈ ತರಬೇತಿ ನಡೆಯುತ್ತಿದೆ. ಬಾಲಕರು-ತರುಣರಿಗೆ ಯೋಗಾಸನ, ರಾಷ್ಟ್ರೀಯ ಚಿಂತನೆ ಕುರಿತು ದೈಹಿಕ – ಬೌದ್ಧಿಕ- ವ್ಯಕ್ತಿತ್ವ ವಿಕಸನ ಶಿಬಿರದ ಹೆಸರಿನಲ್ಲಿ ತಾಲೀಮು ನಡೆಸಲು ಅನುಮತಿ ನೀಡಲಾಗಿದೆ. ಆದರೆ ಅದರ ಹೆಸರಿನಲ್ಲಿ ಆರ್‌ಎಸ್‌ಎಸ್‌  ಪ್ರಾಥಮಿಕ ಶಿಕ್ಷಾ ವರ್ಗದ ತಾಲೀಮು ನಡೆಸುವುದಾಗಿ ಕರಪತ್ರಗಳನ್ನು ಹಂಚುತ್ತಿದೆ.

ಇದನ್ನೂ ಓದಿ: ಮೊರಾರ್ಜಿ ವಸತಿ ಶಾಲೆಗಳಲ್ಲಿ RSS ತಾಲೀಮು ಶಿಬಿರಕ್ಕೆ SFI ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...