Homeಕರ್ನಾಟಕಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

- Advertisement -
- Advertisement -

ಕರ್ನಾಟಕದ ಬೀದರ್‌ನಲ್ಲಿ ದಸರಾ ಮೆರವಣಿಗೆಯ ಭಾಗವಾಗಿದ್ದ ಕಿಡಿಗೇಡಿಗಳ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ‘ಜೈಶ್ರೀರಾಮ್‌’ ಘೋಷಣೆಗಳನ್ನು ಕೂಗಿದೆ. ಕೋಮುಗಲಭೆಯನ್ನು ಹುಟ್ಟಿಹಾಕುವ ಉದ್ದೇಶದಿಂದ ಮದರಸಾದ ಮೂಲೆಯಲ್ಲಿ ಪೂಜೆಯನ್ನೂ ಮಾಡಿದೆ ಎಂದು ವರದಿಯಾಗಿದೆ.

ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಸಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶುಕ್ರವಾರದೊಳಗೆ ಎಲ್ಲಾ ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಪ್ರತಿಕ್ರಿಯೆ ನೀಡಿವೆ.

1460ರ ಕಾಲಘಟ್ಟದಲ್ಲಿ ಬೀದರ್‌ನಲ್ಲಿ ಕಟ್ಟಲಾದ ಮಹ್ಮದ್ ಗವಾನ್ ಮದರಸಾವು ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ಕಟ್ಟಡವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಿಡಿಗೇಡಿಗಳ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆ ಮಾಡಲು ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ‘ಜೈ ಶ್ರೀ ರಾಮ್’ ಮತ್ತು ‘ಹಿಂದೂ ಧರ್ಮ ಜೈ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದ್ದು, ಕಟ್ಟಡದ ಒಳಗೆ ಹೋಗಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳ ಗುಂಪನ್ನು ವಿಡಿಯೊದಲ್ಲಿ ನೋಡಬಹುದು.

ಬೀದರ್‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿವೆ. ಎಲ್ಲಾ ಆರೋಪಿಗಳನ್ನು ಬಂಧಿಸದಿದ್ದರೆ ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿವೆ.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಕೋಮುವಾದಿ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕೋಮುದ್ವೇಷಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಜರುಗಿಸದೆ ಇರುವುದು ಟೀಕೆಗೆ ಒಳಗಾಗಿದೆ.

ಆಗಸ್ಟ್‌ನಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೆಲವರು ಮುಂದಾಗಿದ್ದರು. ಹೈಕೋರ್ಟ್ ಅನುಮತಿಯೂ ಸಿಕ್ಕಿತ್ತು. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ತಡೆ ನೀಡಿತ್ತು.

ಬೊಮ್ಮಾಯಿಯವರ ಆಡಳಿತವನ್ನು ನೋಡುತ್ತಿದ್ದರೆ, ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಸ್ಪಷ್ಟವಾಗುತ್ತಿದೆ. ಮುಖ್ಯಮಂತ್ರಿಯವರೇ ‘ಉತ್ತರ ಪ್ರದೇಶ’ದ ಮಾದರಿ ಬಗ್ಗೆ ಮಾತನಾಡುತ್ತಿದ್ದಾರೆ.

ಕರಾವಳಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ಗೂಂಡಾಗಿರಿ (ಮಾರಲ್ ಪೊಲೀಸಿಂಗ್) ಹೆಚ್ಚಾಗುತ್ತಿದ್ದಾಗ ರಾಜ್ಯದ ಸಿಎಂ ಅವುಗಳಿಗೆ ಕಡಿವಾಣ ಹಾಕಲು‌ ಯತ್ನಿಸಬೇಕಿತ್ತು.‌ ಆದರೆ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಆತಂಕ ಮೂಡಿಸಿದರು.‌ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದಿದ್ದರು.

ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿದೆ.‌ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್ ವರೆಗೆ ಹೋಗಿದೆ.‌ ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ‌‌ ಆಚರಣೆಯಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ತಲೆಯ ಮೇಲೆ ಧರಿಸುವ ಬಟ್ಟೆಯೊಂದನ್ನು ವಿರೋಧಿಸಿ, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸುತ್ತೇವೆಂದು ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದ ಇಡೀ ರಾಜ್ಯವನ್ನು ವ್ಯಾಪಿಸಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೆಲವು ಮುಸ್ಲಿಂ ಯುವಕರಿಂದ ಕೊಲೆಯಾದ ಬಳಿಕ ಹೆಣದ ರಾಜಕಾರಣಕ್ಕೆ ರಾಜ್ಯ ಸಾಕ್ಷಿಯಾಯಿತು.‌ ಕೊಲೆಗೆ ಕಾರಣ ಬಹಿರಂಗವಾಗುವ ಮುನ್ನವೇ ಹೆಣವನ್ನು ಇಟ್ಟುಕೊಂಡು ಮಾಡಿದ ರಾಜಕಾರಣವನ್ನು ಮಾತ್ರ ಮರೆಯಲಾಗದು.‌ ಕೋಮುಸೂಕ್ಷ್ಮತೆ ಬಲ್ಲವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.

ಹಿಜಾಬ್ ನಿಷೇಧ ವಿರೋಧಿಸಿ ಮುಸ್ಲಿಂ ವರ್ತಕರು ಪ್ರತಿಭಟನೆ ಮಾಡಿದರೆಂಬ ಒಂದೇ ಕಾರಣಕ್ಕೆ ಹಿಂದೂಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವರ್ತಕರು ಭಾಗವಹಿಸುವಂತಿಲ್ಲ‌ ಎಂದು ನಿರ್ಬಂಧ ಹೇರುವ ಪ್ರವೃತ್ತಿಗಳು ಕಂಡು ಬಂದವು. ಇದನ್ನೂ ಬಿಜೆಪಿ ಸರ್ಕಾರ ಸಮರ್ಥನೆ ಮಾಡಿಕೊಂಡಿತು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪವನ್ನು ಎದುರಿಸುತ್ತಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳಿಗೆ ಹೆಸರಾದ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಆದೇಶವಿಲ್ಲದೆ ಈ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಬಹುತೇಕ ಒಂದೇ ಸಮುದಾಯದ ಜನರಿದ್ದ ಈ ಸಮಿತಿಯು ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಪರಿಷ್ಕರಣೆಗಳು ಆತಂಕಕಾರಿಯಾಗಿದ್ದವು. ಯಾವುದೇ ಆದೇಶವಿಲ್ಲದೆ ಆಗಿದ್ದ ಪರಿಷ್ಕರಣೆಯನ್ನು ಘಟನೋತ್ತರ ಆದೇಶದ ಮೂಲಕ ಸರ್ಕಾರ ಒಪ್ಪಿಕೊಂಡಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರದಲ್ಲಿ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಆದರೆ ಪರಿಹಾರ ನೀಡುವಾಗ ಸರ್ಕಾರ ತಾರತಮ್ಯ ನೀತಿ ಅನುಸರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...