ಬೈಕ್‌ನಲ್ಲಿ ಬಂದ ಶಸ್ತ್ರಸಜ್ಜಿತ ದರೋಡೆಕೋರರು ಹಾಡಹಗಲೇ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದು, ಮತ್ತೊರ್ವನನ್ನು ಗಾಯಗೊಳಿಸಿ ಹಣ ದೋಚಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್‌ನಲ್ಲಿ ಎಸ್‌ಬಿಐ ಎಟಿಎಂಗೆ ತುಂಬಿಸಲು ತಂದಿದ್ದ ₹93 ಲಕ್ಷ ಹಣವನ್ನು ದೋಚಿ ಬೈಕ್‌ನಲ್ಲಿ ಪರಾರಿಯಾಗುತ್ತಿರುವ ವಿಡಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದರೋಡಕೋರರ ಕೈನಲ್ಲಿ ಗನ್ ಇದ್ದಿದ್ದರಿಂದ ಸಾರ್ವಜನಿಕರು ಅಸಹಾಯಕರಾಗಿದ್ದರು.
ಮೃತ ಮತ್ತು ಗಾಯಾಳುಗಳು ಬೆಳಿಗ್ಗೆ 11.30 ಕ್ಕೆ ಜನನಿಬಿಡ ಶಿವಾಜಿ ಚೌಕ್‌ನಲ್ಲಿರುವ ಎಟಿಎಂಗೆ ಹಣ ತುಂಬಲು ಬಂದಿದ್ದರು ಎಂದು ಅವರು ತಿಳಿಸಿದ್ದಾರೆ.
ಮೃತನನ್ನು ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಎಂದು ಪೊಲೀಸರು ಗುರುತಿಸಿದ್ದಾರೆ. ದರೋಡೆಕೋರರು ತಮ್ಮ ಅಪರಾಧವನ್ನು ನಿರ್ವಹಿಸಲು ಎಂಟು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ ಹತ್ತಿರದ ಎಲ್ಲ ರಸ್ತೆಗಳನ್ನು ಬ್ಯಾರಿಕೇಡ್ ಮಾಡಿದ್ದಾರೆ. ಅಪರಾಧಿಗಳನ್ನು ಬಂಧಿಸಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ.
ಇದನ್ನೂ ಓದಿ; ನೆಲಮಂಗಲ| 45 ವರ್ಷದ ದಲಿತ ಕಾರ್ಮಿಕನ ಥಳಿಸಿ ಕೊಲೆ; ಪತ್ರಕರ್ತ ಸೇರಿ ಇಬ್ಬರ ಬಂಧನ


