Homeಮುಖಪುಟಕೊನೆಗೂ ಜಾಮೀನು ಪಡೆದು ನಿಟ್ಟುಸಿರು ಬಿಟ್ಟ ಬೀದರ್‌ನ ಶಾಹೀನ್‌ ಶಾಲೆಯ ಶಿಕ್ಷಕಿ ಮತ್ತು ಮಗುವಿನ ತಾಯಿ..

ಕೊನೆಗೂ ಜಾಮೀನು ಪಡೆದು ನಿಟ್ಟುಸಿರು ಬಿಟ್ಟ ಬೀದರ್‌ನ ಶಾಹೀನ್‌ ಶಾಲೆಯ ಶಿಕ್ಷಕಿ ಮತ್ತು ಮಗುವಿನ ತಾಯಿ..

- Advertisement -
- Advertisement -

ಕಳೆದ 15 ದಿನಗಳಿಂದ ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿದ್ದ ಬೀದರ್‌ನ ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಮತ್ತು ಶಾಲೆಯ ಮಗುವಿನ ತಾಯಿ ನೈಜುಬುನ್ನೀಶಗೆ ಇಂದು ಕೋರ್ಟ್‌ ಜಾಮೀನು ನೀಡಿದೆ.

ಫೆ.11 ರಂದು ಆರೋಪಿಗಳ ಪರವಾಗಿ 12 ವಕೀಲರ ತಂಡದ ಪರವಾಗಿ ಬೆಂಗಳೂರಿನ ಹಿರಿಯ ವಕೀಲರಾದ ಬಿ.ಟಿ ವೆಂಕಟೇಶ್‌ರವರು ವಾದ ಮಂಡಿಸಿದ್ದರು. ಇಂದಿಗೆ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಇಂದು ಜಾಮೀನು ನೀಡಿದೆ.

ಜನವರಿ 20ರಂದು ಈ ಶಾಲೆಯಲ್ಲಿ ಸಿಎಎ ವಿರುದ್ಧ ಪಠ್ಯೇತರ ಚಟುವಟಿಕೆಗಳ ಭಾಗವಾಗಿ ಮಕ್ಕಳಿಂದ ನಾಟಕ ಆಡಿಸಲಾಗಿತ್ತು. ಅದರಲ್ಲಿ ಯಾರಾದರೂ ದಾಖಲೆ ಕೇಳಿಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಸಂಭಾಷಣೆ ಇದ್ದ ಕಾರಣ ದೂರು ದಾಖಲಾಗಿತ್ತು.

ನಂತರ ಪೊಲೀಸರು ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಮತ್ತು ಶಾಲೆಯ ಮಗುವಿನ ತಾಯಿ ನೈಜುಬುನ್ನೀಶ ಎಂಬುವವರನ್ನು ಕಳೆದ 15 ದಿನಗಳಿಂದ ಬಂಧಿಸಿ ಜೈಲಿನಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನ್ಯಾಯವಾದಿ ಬಿ.ಟಿ.ವೆಂಕಟೇಶ್ ಮತ್ತು ಅವರ ತಂಡಕ್ಕೆ ಅಭಿನಂದನೆಗಳು ಮತ್ತು ಧನ್ಯವಾದಗಳು.

  2. ಮಕ್ಕಳ ಜೊತೆ ಅನುಚಿತವಾಗಿ ಬೇಜವಾಬ್ದಾರಿತನದಿಂದ ವರ್ತಿಸಿ ಅಧಿಕಾರವನ್ನು ದುರುಪಯೋಗ ಮಾಡಿದ ಪೋಲೀಸರನ್ನು ಶಿಕ್ಷಿಸಬೇಕು

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...