Homeಮುಖಪುಟಬೀದರ್‌ನ ಪುಟ್ಟ ಮಕ್ಕಳ ಪ್ರತಿರೋಧ ಎದುರಿಸಲಾಗದಷ್ಟು ಬಿಜೆಪಿ ದಿವಾಳಿಯಾಗಿದೆ: ಸಿದ್ದರಾಮಯ್ಯ

ಬೀದರ್‌ನ ಪುಟ್ಟ ಮಕ್ಕಳ ಪ್ರತಿರೋಧ ಎದುರಿಸಲಾಗದಷ್ಟು ಬಿಜೆಪಿ ದಿವಾಳಿಯಾಗಿದೆ: ಸಿದ್ದರಾಮಯ್ಯ

- Advertisement -
- Advertisement -

ಬೀದರ್ ಶಾಲೆಯ ಮಕ್ಕಳು ತನಗೆ ಇಷ್ಟವಾಗದ ನಾಟಕ ಪ್ರದರ್ಶಿಸಿದರು ಎನ್ನುವ ಕ್ಷುಲಕ ಕಾರಣಕ್ಕೆ ಮಕ್ಕಳು ಮತ್ತು ಹೆತ್ತವರ ಮೇಲೆ ಪೊಲೀಸರನ್ನು ಛೂ ಬಿಟ್ಟು ಹಿಂಸಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ. ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ‍್ಧಾಂತಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೀದರ್ ಶಾಲೆಯ ಮಕ್ಕಳ ನಾಟಕದಲ್ಲಿ ದೇಶದ್ರೋಹ ಕಂಡ ಕುರುಡು ಬಿಜೆಪಿ ಸರ್ಕಾರಕ್ಕೆ ಕಲ್ಲಡ್ಕದ ಶಾಲೆಯಲ್ಲಿ ಮಕ್ಕಳು ಬಾಬರಿ ಮಸೀದಿ ಧ್ವಂಸ ಕಾರ್ಯಾಚರಣೆಯ ಅಣಕು ಪ್ರದರ್ಶನ ನೀಡಿ ನೆಲದ ಕಾನೂನನ್ನು ಉಲ್ಲಂಘಿಸಿದ ಮತ್ತು ನ್ಯಾಯಾಲಯವನ್ನು ಅಣಕ ಮಾಡಿದ ಕಿಡಿಗೇಡಿತನ ದೇಶದ್ರೋಹವಾಗಿ ಕಾಣುತ್ತಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಹೌದು, ಸರ್ವಾಧಿಕಾರಿ ದುರ್ಬಲನಾದಷ್ಟು ಕ್ರೂರಿಯಾಗುತ್ತಾನೆ. ದೆಹಲಿ ವಿಶ್ವವಿದ್ಯಾಲಯಗಳಿಗೆ ಪೊಲೀಸರನ್ನು ನುಗ್ಗಿಸಿದ, ಶಾಂತಿಯುತ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಲು ಪ್ರಚೋದನೆ ನೀಡಿದ ಸರ್ವಾಧಿಕಾರಿ ಮನಸ್ಸೇ ಬೀದರ್‌ನಲ್ಲಿ ಪುಟ್ಟಮಕ್ಕಳ ಮೇಲೆ ಸೇಡು ತೀರಿಸಲು ಹೊರಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೀದರ್ ನ ಶಾಹಿನ್ ವಿದ್ಯಾಸಂಸ್ಥೆ, ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲೆ ದಾಖಲಿಸಿರುವ ದೇಶದ್ರೋಹದ ಪ್ರಕರಣವನ್ನು ಪೊಲೀಸರು ತಕ್ಷಣ ವಾಪಸು ಪಡೆಯಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಭ್ರಷ್ಟರನ್ನು ಖರೀದಿಸಿ ಅಧಿಕಾರದಲ್ಲಿರುವ ಸರ್ಕಾರ, ಜನವಿರೋಧಿ ಕೃತ್ಯಕ್ಕಿಳಿದರೆ ನಿರೀಕ್ಷೆಗಿಂತ ಮೊದಲೇ ನಾಶವಾಗಲಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...