Homeಮುಖಪುಟ'ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ': ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

‘ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ’: ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ”ಗಾಂಧಿ ತತ್ವಕ್ಕೆ ಎಸಗಿದ ದ್ರೋಹ” ಎಂದು ಭಾರತ ಮೂಲದ ಅಮೆರಿಕದ ಕಾಂಗ್ರೆಸ್‌ ಸದಸ್ಯ ರೋ ಖನ್ನಾ ಹೇಳಿದ್ದಾರೆ.

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ 24 ಗಂಟೆಯೊಳಗೆ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ.

”ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಿರುವುದು ಗಾಂಧಿ ತತ್ವಗಳಿಗೆ ಮತ್ತು ಭಾರತದ ಮೌಲ್ಯಗಳಿಗೆ ಎಸಗಿದ ದೊಡ್ಡ ದ್ರೋಹವಾಗಿದೆ” ಎಂದು ರೋ ಖನ್ನಾ ಟ್ವೀಟ್‌ ಮಾಡಿದ್ದಾರೆ. ರೋ ಖನ್ನಾ ಅವರು ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಸಿಲಿಕಾನ್ ವ್ಯಾಲಿಯನ್ನು ಪ್ರತಿನಿಧಿಸುತ್ತಿದ್ದಾರೆ.

”ನನ್ನ ಅಜ್ಜ (ಮಹಾತ್ಮ ಗಾಂಧಿ) ಹಲವು ವರ್ಷಗಳ ಕಾಲ ಜೈಲಿನಲ್ಲಿ ಇದ್ದದ್ದು, ತ್ಯಾಗ ಮಾಡಿದ್ದು ಇದಕ್ಕಾಗಿ ಅಲ್ಲ” ಎಂದು ಖನ್ನಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಲೋಕಸಭೆ ಸದಸ್ಯ ಸ್ಥಾನದಿಂದ ರಾಹುಲ್‌ ಗಾಂಧಿಯನ್ನು ಅನರ್ಹಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿರುವ ಖನ್ನಾ, ”ಭಾರತೀಯ ಪ್ರಜಾಪ್ರಭುತ್ವದ ಪರವಾಗಿ ನಿರ್ಧಾರ ಹಿಂತೆಗೆದುಕೊಳ್ಳುವ ಶಕ್ತಿ ನಿಮಗೆ ಇದೆ” ಎಂದು ತಿಳಿಸಿದ್ದಾರೆ.

ಭಾರತ ಸರ್ಕಾರದ ನಡೆಯನ್ನು ಖಂಡಿಸಿರುವ ಅಮೆರಿಕದ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್‌ನ ಉಪಾಧ್ಯಕ್ಷ ಜಾರ್ಜ್ ಅಬ್ರಹಾಂ ಅವರು, ”ಇದು ಭಾರತದ ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವ ಮೂಲಕ, ಮೋದಿ ಸರ್ಕಾರವು ಎಲ್ಲೆಡೆ ಭಾರತೀಯರ ವಾಕ್ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನಾಲ್ಕು ಬಾರಿ ಲೋಕಸಭೆ ಸಂಸದರಾಗಿ ಆಯ್ಕೆಯಾಗಿದ್ದರು.

ಪ್ರಧಾನಿ ಮೋದಿ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?

‘ಮೋದಿ’ ಎಂಬ ಸರ್‌ನೇಮ್‌ (ಉಪನಾಮ) ಬಳಸಿದ್ದಕ್ಕಾಗಿ 2019ರಲ್ಲಿ ರಾಹುಲ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು. ಕರ್ನಾಟಕದಲ್ಲಿ ಚುನಾವಣಾ ಪೂರ್ವ ರ್‍ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ”ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಗುರಿಯಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರಾಹುಲ್‌ ಅವರಿಗೆ ಎರಡು ವರ್ಷ ಸಜೆ ನೀಡಿರುವ ಕಾರಣ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ ಎಂದು ಲೋಕಸಭಾ ಕಾರ್ಯಾಲಯವು ಅಧಿ ಸೂಚನೆಯಲ್ಲಿ ತಿಳಿಸಿದೆ. ತೀರ್ಪು ಪ್ರಕಟವಾದ 2023ರ ಮಾರ್ಚ್‌ 23ರಿಂದಲೇ ಅನರ್ಹತೆ ಅನ್ವಯ ಎಂದೂ ಹೇಳಲಾಗಿದೆ.

ಉನ್ನತ ನ್ಯಾಯಾಲಯವು ಸೂರತ್‌ ನ್ಯಾಯಾಲಯದ ತೀರ್ಪಿಗೆ ತಡೆ ನೀಡದೇ ಇದ್ದರೆ, ರಾಹುಲ್ ಅವರು ಮುಂದಿನ ಎಂಟು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...