Homeಮುಖಪುಟಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

ಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಸಲ್ಮಾನ್ ಖುರ್ಷಿದ್ ಅವರು ರಾಷ್ಟ್ರ ರಾಜಧಾನಿ ಪ್ರತಿಷ್ಠಿತ ಅಲ್ಪಸಂಖ್ಯಾತ ಸಂಸ್ಥೆ ಇಂಡಿಯಾ ಇಸ್ಲಾಮಿಕ್ ಕಲ್ಚರ್ ಸೆಂಟರ್ (ಐಐಸಿಸಿ) ಯ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಇದರಿಂದ ಈ ಪ್ರಾತಿನಿಧಿಕ ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವ ಸ್ಥಾಪಿಸಲು ಹೊರಟಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕ್ಕೆ ಮುಖಭಂಗವಾಗಿದೆ. ಖುರ್ಷಿದ್ ಅವರು 721 ಮತಗಳನ್ನು ಪಡೆದು ಜಯಭೇರಿ ಸಾಧಿಸಿದ್ದಾರೆ.

ಆರ್‌ಎಸ್‌ಎಸ್‌ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ)ನ ಸಂಚಾಲಕ ಮತ್ತು ಖ್ಯಾತ ಕ್ಯಾನ್ಸರ್ ತಜ್ಞ ಡಾ.ಮಜೀದ್ ಅಹ್ಮದ್ ತಾಳಿಕೋಟಿ ಸಂಸ್ಥೆಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದರು. ಐಐಸಿಸಿ ಮಾಜಿ ಅಧ್ಯಕ್ಷ ಸಿರಾಜುದ್ದೀನ್ ಖುರೇಷಿ ಅವರ ಬೆಂಬಲವೂ ತಾಳಿಕೋಟಿಯವರಿಗಿತ್ತು. ಆದರೆ, ಅವರು ಕೇವಲ 227 ಮತಗಳನ್ನಷ್ಟೇ ಪಡೆಯಲು ಸಾಧ್ಯವಾಯಿತು. ಖುರ್ಷಿದ್ ಬಳಿಕ ಉದ್ಯಮಿ ದಾನಿ ಆಸೀಫ್ ಹಬೂಬ್ 278 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಒಟ್ಟು 13 ಸದಸ್ಯರ ಆಡಳಿತ ಮಂಡಳಿಯಲ್ಲಿ ಕನಿಷ್ಠ ಎಂಟು ಮಂದಿ ಖುರ್ಷಿದ್ ಬೆಂಬಲಿಗರು ಆಯ್ಕೆಯಾಗಿದ್ದಾರೆ. “ಐಐಸಿಸಿ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿರುವುದು ನನಗೆ ಸಂದ ಅತಿದೊಡ್ಡ ಗೌರವ. ವಿಶ್ವಾಸ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲಾ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಐಐಸಿಸಿ ಮೌಲ್ಯಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಜೊತೆಯಾಗಿ ಕಾರ್ಯ ನಿರ್ವಹಿಸೋಣ” ಎಂದು ಖುರ್ಷಿದ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆಗಸ್ಟ್ 11ರಂದು ಐಐಸಿಸಿ ಚುನಾವಣೆ ನಡೆದಿದ್ದು, ಮೂರು ದಿನಗಳ ಮತ ಎಣಿಕೆ ಬಳಿಕ ಬುಧವಾರ ಫಲಿತಾಂಶ ಪ್ರಕಟಿಸಲಾಗಿದೆ. ನಿವೃತ್ತ ಉನ್ನತಾಧಿಕಾರಿ ಅಬ್ರಾರ್ ಅಹ್ಮದ್ ಹಾಗೂ ಹಬೀಬ್ ಕಣಕ್ಕೆ ಇಳಿಯುವ ಮೂಲಕ ಅಧ್ಯಕ್ಷ ಹುದ್ದೆಗೆ ಬಹುಮುಖಿ ಸ್ಪರ್ಧೆ ಇತ್ತು.

ಐಐಸಿಸಿ ಜನರಲ್ಲಿ ಪರಸ್ಪರ ತಿಳುವಳಿಕೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇಸ್ಲಾಂನ ನಿಜವಾದ ಸಂದೇಶವನ್ನು ಅತ್ಯಂತ ಸಹಿಷ್ಣು, ಉದಾರ, ಪ್ರಗತಿಪರ ಮತ್ತು ತರ್ಕಬದ್ಧವಾಗಿ ತಲುಪಿಸುವ ಕೆಲಸವನ್ನೂ ಈ ಸಂಸ್ಥೆ ಮಾಡುತ್ತದೆ. ಲೋಧಿ ರಸ್ತೆಯಲ್ಲಿ ಸರ್ಕಾರ ಮಂಜೂರು ಮಾಡಿರುವ ಜಮೀನಿನಲ್ಲಿ ಈ ಕೇಂದ್ರ ತಲೆ ಎತ್ತಿ ನಿಂತಿದೆ. ಐಐಸಿಸಿಯ ಆಡಳಿತ ಮಂಡಳಿಗೆ ಪ್ರತಿ ಐದು ವರ್ಷಗಳಿಗೊಮ್ಮೆ ಚುನಾವಣೆ ನಡೆಯುತ್ತದೆ.

ಈ ಸಂಸ್ಥೆಯು ಎಲ್ಲಾ ವರ್ಗಗಳ 4,000 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಆದರೆ, ಇತ್ತೀಚಿನ ಚುನಾವಣೆಯಲ್ಲಿ ಸುಮಾರು 2,000 ಜನರು ಮಾತ್ರ ಮತ ಚಲಾಯಿಸಲು ಅರ್ಹರಾಗಿದ್ದರು. ಐಐಸಿಸಿಯ ಚುನಾವಣೆಗೆ ಆರ್‌ಎಸ್‌ಎಸ್ ಬೆಂಬಲಿತ ತಾಳಿಕೋಟಿಯ ಪ್ರವೇಶವನ್ನು ಮುಸ್ಲಿಂ ಸಂಸ್ಥೆಗಳ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವ ಬಲಪಂಥೀಯ ಪ್ರಯತ್ನವೆಂದು ಬಣ್ಣಿಸಲಾಗಿದೆ.

ಇದನ್ನೂ ಓದಿ : ಮಾರಣಾಂತಿಕ ‘ಎಂಪಾಕ್ಸ್’ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...