Homeಕರ್ನಾಟಕಮದುವೆ ವಿವಾದ: ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ ಬಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರು

ಮದುವೆ ವಿವಾದ: ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ ಬಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರು

- Advertisement -
- Advertisement -

ಬಿಗ್ ಬಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರು, ಕೌಟುಂಬಿಕ ಕಲಹದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇತ್ತೀಚೆಗೆ ವಿವಾಹ ವಿವಾದದಿಂದ ಸುದ್ದಿಯಾಗಿದ್ದ ಚೈತ್ರಾ ಅವರು ಕೋಲಾರದ ಕುರುಬರಪೇಟೆಯ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಟಿ ಚೈತ್ರಾ ಕೊಟ್ಟೂರು ಮಂಡ್ಯ ಮೂಲದ ಉದ್ಯಮಿ ನಾಗಾರ್ಜುನ್‌ ಅವರನ್ನು ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಸ್ಥಾನದಲ್ಲಿ ಕಳೆದ ಮಾರ್ಚ್​ 28ರಂದು ವಿವಾಹವಾಗಿದ್ದರು. ಬೆಳಗ್ಗೆ ವಿವಾಹವಾಗಿ ಸಂಜೆಯೊಳಗೆ ವಿವಾಹ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ನನಗೆ ಬಲವಂತವಾಗಿ ಮದುವೆ ಮಾಡಲಾಗಿದೆ ಎಂದು ನಾಗಾರ್ಜುನ್ ಆರೋಪಿಸಿದ್ದರು.

 ಇದನ್ನೂ ಓದಿ: ಚೆಕ್‌ ಬೌನ್ಸ್ ಕೇಸ್: ಖ್ಯಾತ ನಟ ಶರತ್‌ಕುಮಾರ್ ಮತ್ತು ನಟಿ ರಾಧಿಕಾ ದಂಪತಿಗೆ ಒಂದು ವರ್ಷ ಜೈಲು

ಈ ಸಂಬಂಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು. ನಂತರ ಮಾತುಕತೆಗೆ ಬರುವುದಾಗಿ ನಾಗಾರ್ಜುನ್​ ಮತ್ತು ಪೋಷಕರು ತಿಳಿಸಿದ್ದರು. ನಾವಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದೆವು. ನಾಗಾರ್ಜುನ್‌ ನನಗೆ ಇಷ್ಟ. ಅವರಿಗೂ ನಾನು ಇಷ್ಟ. ಒಪ್ಪಿಯೇ ಮದುವೆಯಾಗಿದ್ದೇವೆ. ಬಲವಂತದಿಂದ ಮದುವೆಯಾಗಲು ಅವರು ಮಗುವಲ್ಲ ಎಂದು ಚೈತ್ರಾ ಹೇಳಿದ್ದರು.

ನಾಗಾರ್ಜುನ್ ಮಾತ್ತು ಚೈತ್ರಾ ಕೊಟ್ಟೂರು ಇಬ್ಬರು ಉತ್ತಮ ಸ್ನೇಹಿತರಾಗಿದ್ದು, ನಂತರ ಪರಸ್ಪರ ಆಪ್ತತೆ ಹೊಂದಿದ್ದರು ಎನ್ನಲಾಗಿದೆ. ನಾಗಾರ್ಜುನ್ ಅವರ ಹುಟ್ಟುಹಬ್ಬವನ್ನು ನಟಿ ಚೈತ್ರಾ ಕೊಟ್ಟೂರು ಭರ್ಜರಿಯಾಗಿ ಆಚರಿಸಿದ್ದರು.

ನಟಿ ಚೈತ್ರಾ ರಂಗಭೂಮಿ, ಸಿನಿಮಾ ನಟನೆ, ಜಾಹೀರಾತು ನಿರ್ದೇಶನ, ಬರವಣಿಗೆಯಲ್ಲಿ ಸಕ್ರಿಯರಾಗಿದ್ದರು. ಸೂಜಿದಾರ ಚಿತ್ರದಿಂದ ಗುರುತಿಸಿಕೊಂಡಿದ್ದಾರೆ. ಬೆಳ್ಳಿತೆರೆ ಜೊತೆಗೆ ಕಿರುತೆರೆಯ ಲಗ್ನಪತ್ರಿಕೆ ಧಾರಾವಾಹಿಯಲ್ಲು ಅಭಿನಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...