Homeಮುಖಪುಟಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು?

ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು?

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದು ವರ್ಷವಾಗುತ್ತಾ ಬರುತ್ತಿದೆ. ಆದರೂ, ಭಿನ್ನಮತೀಯರ ರಾಗ ಮಾತ್ರ ಈವರೆಗೆ ತಣ್ಣಗಾಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಇಡೀ ರಾಜ್ಯ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಉಮೇಶ್‌ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್‌, ಮುರುಗೇಶ್‌ ನಿರಾಣಿ ಸೇರಿದಂತೆ ಅನೇಕರು ಮತ್ತೆ ಸಚಿವ ಸ್ಥಾನಕ್ಕಾಗಿ ಎರಡನೇ ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಅಲ್ಲದೆ, ಬಿಎಸ್‌ವೈ ತಲೆದಂಡಕ್ಕೂ ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.

ಅಸಲಿಗೆ ಇಡೀ ದೇಶಕ್ಕೆ ಕೊರೋನಾ ಮತ್ತು ಲಾಕ್‌ಡೌನ್ ವಕ್ಕರಿಸಿದ್ದ ಏಕೈಕ ಕಾರಣಕ್ಕೆ ಈ ಎಲ್ಲಾ ನಾಯಕರು ಇಷ್ಟು ದಿನ ತಮ್ಮ ಸಚಿವ ಸ್ಥಾನದ ಹೋರಾಟವನ್ನು ಪಕ್ಕಕಿಟ್ಟು ತಣ್ಣಗಿದ್ದರು. ಆದರೆ, ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ಬಿಜೆಪಿಯಲ್ಲಿ ಮತ್ತೆ ಸಚಿವ ಸಂಪುಟದ ವಿಸ್ತರಣೆಯ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಿಗೆ ಅತೃಪ್ತ ಶಾಸಕರು ಗುರುವಾರ ಔತಣ ಕೂಟದ ನೆಪದಲ್ಲಿ ಸಭೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಇಳಿಸಲು ಯೋಜನೆ ರೂಪಿಸಿದ್ದು, ಇದಕ್ಕೆ ಉತ್ತರ ಕರ್ನಾಟಕ ಭಾಗದ ಅನೇಕ ಶಾಸಕರ ಬೆಂಬಲ ಇದೆ ಎನ್ನಲಾಗುತ್ತಿದೆ.

ಉಮೇಶ್ ಕತ್ತಿ ನಡೆಸಿದರಾ ರಹಸ್ಯ ಸಭೆ?

ಜೂನ್ ಅಂತ್ಯದ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ, ಅರವಿಂದ ಲಿಂಬಾವಳಿ, ರಾಮದಾಸ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಚಿವ ಸ್ಥಾನ ಸಿಗುವುದು ಪಕ್ಕ ಎಂದು ಸ್ವತಃ ಸಿಎಂ ಯಡಿಯೂರಪ್ಪ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಬಿಜೆಪಿಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಅಸಮಾಧಾನ ಮತ್ತೊಮ್ಮೆ ಭುಗಿಲೆದ್ದಿದೆ. ಏಕೆಂದರೆ, ಉಮೇಶ್ ಕತ್ತಿ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರು, ಬಸನಗೌಡ ಪಾಟೀಲ್ ಈ ಹಿಂದೆ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಹಿರಿಯ ವ್ಯಕ್ತಿ. ಇನ್ನೂ ಪ್ರಬಲ ಪಂಚಮ ಸಾಲಿ ಲಿಂಗಾಯತ ಕೋಮಿಗೆ ಸೇರಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವಾರು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಆದರೆ, ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಲುವಾಗಿ ಈ ಎಲ್ಲಾ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನವನ್ನು ನಿರಾಕರಿಸಲಾಗಿತ್ತು. ಹೀಗಾಗಿ ಈ ತಂಡ ಕಳೆದ ಹಲವು ತಿಂಗಳಿನಿಂದ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಕಷ್ಟು ಶ್ರಮಿ ವಹಿಸಿತ್ತು. ಆದರೆ, ಕೊರೋನಾ ಕಾರಣಕ್ಕೆ ಇವರ ಪ್ರಯತ್ನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಆದರೆ, ಈ ತಂಡ ಮತ್ತೆ ತನ್ನ ಕೆಲಸವನ್ನು ಆರಂಭಿಸಿದೆ.

ಈ ಕೆಲಸದ ಭಾಗವಾಗಿ ಔತಣ ಕೂಟದ ನೆಪದಲ್ಲಿ ಬಿಜೆಪಿ ಪಕ್ಷದ ಸುಮಾರು 10 ಕ್ಕೂ ಹೆಚ್ಚು ಜನ ಶಾಸಕರು ಗುರುವಾರ ಬೆಂಗಳೂರಿನಲ್ಲಿ ಖಾಸಗಿ ಅಪಾರ್ಟ್‌‌ಮೆಂಟ್‌ ಒಂದರಲ್ಲಿ ಸಭೆ ನಡೆಸಿದ್ದಾರೆ.

ಉಮೇಶ್‌ ಕತ್ತಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್, ಅರವಿಂದ್ ಬೆಲ್ಲದ್, ಅಭಯ್ ಪಾಟೀಲ್, ನಿರಾಣಿ ಸೇರಿದಂತೆ ಗುಲ್ಬರ್ಗ ಜಿಲ್ಲೆಯ ಕೆಲ ಶಾಸಕರು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.
ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ , ರಾಜ್ಯ ರಾಜಕೀಯ ವಿಚಾರ, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಸಂಪುಟ ವಿಸ್ತರಣೆ, ರಾಜ್ಯ ನಾಯಕತ್ವ ವಿಚಾರ ಸೇರಿದಂತೆ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೆ, ರಾಜ್ಯ ಬಿಜೆಪಿ ಮತ್ತು ಸರ್ಕಾರದ ಸಂಬಂಧದ ಕುರಿತು ಕೆಲ ವಿಚಾರಗಳನ್ನು ಹೈಕಮಾಂಡ್ ನಾಯಕರ ಗಮನಕ್ಕೂ ತರಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಕತ್ತಿ ವಿರುದ್ಧ ಗರಂ ಆದ ಬಿಎಸ್‌ವೈ

ಶಾಸಕ ಉಮೇಶ್‌ ಕತ್ತಿ ನೇತೃತ್ವದಲ್ಲಿ ಗುರುವಾರ ಅತೃಪ್ತ ಶಾಸಕರ ಸಭೆ ನಡೆದಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಿಎಂ ಯಡಿಯೂರಪ್ಪ ವ್ಯಗ್ರರಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸ್ವತಃ ಉಮೇಶ್‌ ಕತ್ತಿಗೆ ದೂರವಾಣಿ ಮೂಲಕ ಕರೆ ಮಾಡಿರುವ ಬಿಎಸ್‌ವೈ, “ಅದೇನು ಬನ್ರಿ ಮಾತಾಡೋಣ, ನಿಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಲಾಗುವುದು” ಎಂದು ಮಾತುಕತೆಗೆ ಬುಲಾವ್ ನೀಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.


ಇದನ್ನೂ ಓದಿ : ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...