Homeಅಂತರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

ಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

- Advertisement -
- Advertisement -

ಕೊರೊನಾ ಮೂರನೇ ಅಲೆ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ.

3ನೇ ಅಲೆ ಸನಿಹದಲ್ಲಿದೆ. ಎರಡನೇ ಅಲೆಯನ್ನು ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿ ಎಚ್ಚರಿಕೆ ಮರೆಯಬೇಡಿ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರವಷ್ಟೇ ಎಚ್ಚರಿಕೆ ನೀಡಿತ್ತು. ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದರೂ ಸಮಾಧಾನದ ಸಂಗತಿಯೆಂದರೆ, ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.

ಮಹಾರಾಷ್ಟ್ರ ಮತ್ತು ಬಿಹಾರದ ನಂತರ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಿರುವ ಮೂರನೇ ರಾಜ್ಯ ಮಧ್ಯಪ್ರದೇಶವಾಗಿದೆ. ಸುಮಾರು ಮೂರು ವಾರಗಳಿಂದ ಭಾರತವು ಪ್ರತಿದಿನ 2,000 ಕ್ಕಿಂತ ಕಡಿಮೆ ಕೊರೊನಾ ಸಾವುಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 31,443 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು 118 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದ ಸಕ್ರಿಯ ಪ್ರಕರಣಗಳು ಪ್ರಸ್ತುತ 4,31,315 ದಷ್ಟಿದೆ, ಇದು 109 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಈವರೆಗೆ ಸುಮಾರು 4.10 ಲಕ್ಷ ಜನರು ಸಾವನ್ನಪ್ಪಿದ್ದಾರೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಭಾನುವಾರ ಎಚ್ಚರಿಕೆ ನೀಡಿತ್ತು.

ದೇಶದಲ್ಲಿ ಇದುವರೆಗೆ 39.46 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ 108 ಕೋಟಿ ವಯಸ್ಕರಿಗೆ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...