Homeಕರ್ನಾಟಕಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊರೊನಾ ಎರಡನೆ ಅಲೆಯ ಲಾಕ್‌ಡೌನ್‌ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿಟ್ಟುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಮಿಕರಿಗೆ ಸೇರಬೇಕಾಗಿದ್ದ ರೇಷನ್ ಕಿಟ್‌ಗಳನ್ನು ಬಿಜೆಪಿ ನಾಯಕರುಗಳು ಮತ್ತು ಅವರ ಸಂಬಂಧಿಕರ ಮನೆಗೆ ಸಾಗಾಟ ಮಾಡಿದ್ದಲ್ಲದೆ, ಅವಧಿ ಮುಗಿದಿರುವ ರೇಷನ್‌ ಕಿಟ್ಟುಗಳನ್ನು ಬಿಜೆಪಿ ಕಾರ್ಯಕರ್ತರು ಹಂಚುತ್ತಿದ್ದಾರೆ ಎಂದು ಬೆಳಗಾವಿಯ ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ. ಅಲ್ಲದೇ ರೇಷನ್‌ ಕಿಟ್‌ ಸಂಗ್ರಹ ಮಾಡಿಟ್ಟ ಗೋದಾಮಿಗೆ ಕಳೆದ ವಾರ ದಾಳಿ ನಡೆಸಿ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ಲಾಕ್‌ಡೌನ್‌‌‌ ಘೋಷಣೆಯಾದ ನಂತರ, ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಇಲಾಖೆಯು ರಾಜ್ಯದಾದ್ಯಂತ ರೇಷನ್‌ ಕಿಟ್‌ ಹಂಚಿಕೆ ಮಾಡಿತ್ತು. ಅದರಂತೆ ಬೆಳಗಾವಿಗೂ ರೇಷನ್‌ ಕಿಟ್‌ ತಲುಪಿತ್ತಾದರೂ ಮೂರು ತಿಂಗಳು ಕಳೆದರೂ ವಿತರಣೆ ಆಗದೆ ಸುಮಾರು 15-20 ಸಾವಿರದಷ್ಟು ಕಿಟ್‌ಗಳು ಬೆಳಗಾವಿಯ ಪಿಬಿ ನಗರದ ಸಾಯಿ ಭವನದಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದ ಬಿಜೆಪಿ ಶಾಸಕಿ

ಈ ನಡುವೆ, ಪಾಲಿಕೆ ಚುನಾವಣೆ ಘೋಷಣೆಯಾದಾಗ ಮತದಾರರಿಗೆ ರೇಷನ್‌ ಕಿಟ್‌ ಆಮಿಷವನ್ನು ತೋರಿಸಲಾಗಿತ್ತು. ಅದಾಗಿ ಚುನಾವಣೆ ಮುಗಿಯುತ್ತಿದ್ದಂತೆ ಈ ರೇಷನ್‌ ಕಿಟ್ಟುಗಳನ್ನು ಬಿಜೆಪಿಯ ಶಾಸಕರ ಆಪ್ತರ ಮನೆಗಳು, ಕೌನ್ಸಿಲರ್‌ಗಳ ಆಪ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ದಾಸ್ತಾನು ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಆದರೆ ಈ ಮಧ್ಯೆ, ಅಕ್ರಮವಾಗಿ ದಾಸ್ತಾನು ಮಾಡಿಟ್ಟ ರೇಷನ್‌ ಕಿಟ್‌ಗಳ ಅವಧಿ ಮುಗಿದಿದ್ದು ಕೂಡಾ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆಯೆ ವಿತರಣೆ ಆಗಬೇಕಿದ್ದ ರೇಷನ್‌ ಕಿಟ್‌ ಅನ್ನು, ಸ್ಥಳೀಯ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ವಿತರಿಸದೆ ಹಾಗೆ ಇಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್‌ ಮತ್ತು ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು, ಅಕ್ರಮವನ್ನು ತಡೆಗಟ್ಟುವಂತೆ ಆಗ್ರಹಿಸಿದ್ದಾರೆ. ಆದರೆ ಮನವಿ ನೀಡಿ ಇಷ್ಟು ದಿನ ಕಳೆದರೂ ಇರುವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಸರಳಾ ಸಾತ್ಪುತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾರ್ಮಿಕ ಇಲಾಖೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿಚಾರಿಸಲು ನಾನುಗೌರಿ.ಕಾಂ ಬೆಳಗಾವಿ ಕಾರ್ಮಿಕ ಇಲಾಖೆಯ ಉಪ ಆಯುಕ್ತರಾಗಿರುವ ವೆಂಕಟೇಶ್‌ ಎ. ಶಿಂಧಿಹಟಿ ಅವರಿಗೆ ಕರೆ ಮಾಡಿದ್ದು ಅವರು ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

ಇಷ್ಟೇ ಅಲ್ಲದೆ ಇದನ್ನು ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಜೀವ ಬೆದರಿಕೆ ಕೂಡಾ ಒಡ್ಡಿದ್ದಾರೆ ಎಂದು ದೂರಲಾಗಿದೆ. ಅಕ್ರಮಗಳನ್ನು ಮೊಬೈಲಿನಲ್ಲಿ ಸೆರೆಹಿಡಿಯಲು ತೆರಳಿದ್ದ, ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ದುಂಡಾವರ್ತನೆ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಐದಾರು ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಸರಳಾ ಸಾತ್ಪುತೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಕಚೇರಿಯಲ್ಲೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಕಾರ್ಯಕರ್ತ; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...