ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ದುರ್ಮರಣ ಹೊಂದಿದ ಎರಡು ದಿನಗಳಲ್ಲಿಯೇ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ವರದಿಯಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ದೊಡ್ಡ ತೂತು ಬಿದ್ದಿದ್ದು ಪರಿಣಾಮ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾಗಿದ್ದಾನೆ. ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ವಾಣಿಜ್ಯ ಪ್ರದೇಶವಾದ ಜನನಿಬಿಡ ಬ್ರಿಗೇಡ್ ಟವರ್ಸ್ ಬಳಿಯ ಶೂಲೆ ಸರ್ಕಲ್ ರಸ್ತೆ ಮಧ್ಯೆದಲ್ಲಿ ದೊಡ್ಡ ಕುಳಿ ಬಿದ್ದಿದೆ. ಬಹುಭಾಗ ಕುಸಿದ ಬಿದ್ದ ಪರಿಣಾಮ ದೊಡ್ಡ ತೂತು ಉಂಟಾಗಿದೆ. ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಮಧ್ಯೆದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಆಯತಪ್ಪಿ ಸವಾರ ನೆಲಕ್ಕುರುಳಿದ್ದಾನೆ.
ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುನೀತ್ ಎಂದು ಗುರುತಿಸಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇಡೀ ದೃಶ್ಯಾವಳಿ ಸಿಸಿಕ್ಯಾಮರದಲ್ಲಿ ದಾಖಲಾಗಿದೆ. ಸದ್ಯ ರಸ್ತೆ ಕುಳಿ ಸುತ್ತಲೂ ಬಟ್ಟೆ ಸುತ್ತಿದ್ದು, ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಮುಂದಾಗುವ ಅಪಾಯಗಳನ್ನು ತಡೆಯಲಾಗಿದೆ.
#Breaking in #Bengaluru: Road caves in near Brigade Towers on #BrigadeRoad in the central part of the city. No casualty reported. (🎥 by TOI Sunil)
What’s happening to B’luru roads? @NammaBengaluroo @TOIBengaluru @WFRising @srinualavilli @namma_BTM @sajjanrajmehta pic.twitter.com/g9QoNJ1lhh
— Rakesh Prakash (@rakeshprakash1) January 12, 2023
ಮೊನ್ನೆ ತಾನೇ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಒಂದರ ಕಬ್ಬಿಣದ ರಾಡ್ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿತ್ತು.
#BBMP–#Bengaluru's prime location Brigade Road big developed sinkhole, biker injured opposite Brigade Towers.@XpressBengaluru,@NewIndianXpress,@BoskyKhanna,@BBMPCOMM,@AshwiniMS_TNIE,@KannadaPrabha,@ramupatil_TNIE pic.twitter.com/u5xTHqyFxk
— Mohammed Yacoob (@yacoobExpress) January 12, 2023
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಕಾಮಗಾರಿ ನಡೆಯುತ್ತಿರುವಾಗ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿವೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಮತ್ತು ಅವರ ಪತಿ ಹಾಗೂ ಮಕ್ಕಳು ಅಪಘಾತಕ್ಕೆ ಗುರಿಯಾಗಿದ್ದಾರೆ.
ಮೃತ ತೇಜಸ್ವಿನಿ ಅವರು ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿದು ಮಹಿಳೆ, ಮಗು ಸಾವು: 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್


