Homeಕರ್ನಾಟಕಬೆಂಗಳೂರು ರಸ್ತೆಯಲ್ಲಿ ದೊಡ್ಡ ತೂತು: ಬೈಕ್ ಸವಾರನಿಗೆ ಅಪಘಾತ

ಬೆಂಗಳೂರು ರಸ್ತೆಯಲ್ಲಿ ದೊಡ್ಡ ತೂತು: ಬೈಕ್ ಸವಾರನಿಗೆ ಅಪಘಾತ

- Advertisement -
- Advertisement -

ಮೆಟ್ರೋ ಪಿಲ್ಲರ್‌ ಕುಸಿದು ಇಬ್ಬರು ದುರ್ಮರಣ ಹೊಂದಿದ ಎರಡು ದಿನಗಳಲ್ಲಿಯೇ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ವರದಿಯಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ದೊಡ್ಡ ತೂತು ಬಿದ್ದಿದ್ದು ಪರಿಣಾಮ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾಗಿದ್ದಾನೆ. ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವಾಣಿಜ್ಯ ಪ್ರದೇಶವಾದ ಜನನಿಬಿಡ ಬ್ರಿಗೇಡ್ ಟವರ್ಸ್ ಬಳಿಯ ಶೂಲೆ ಸರ್ಕಲ್ ರಸ್ತೆ ಮಧ್ಯೆದಲ್ಲಿ ದೊಡ್ಡ ಕುಳಿ ಬಿದ್ದಿದೆ. ಬಹುಭಾಗ ಕುಸಿದ ಬಿದ್ದ ಪರಿಣಾಮ ದೊಡ್ಡ ತೂತು ಉಂಟಾಗಿದೆ. ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಮಧ್ಯೆದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಆಯತಪ್ಪಿ ಸವಾರ ನೆಲಕ್ಕುರುಳಿದ್ದಾನೆ.

ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುನೀತ್ ಎಂದು ಗುರುತಿಸಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇಡೀ ದೃಶ್ಯಾವಳಿ ಸಿಸಿಕ್ಯಾಮರದಲ್ಲಿ ದಾಖಲಾಗಿದೆ. ಸದ್ಯ ರಸ್ತೆ ಕುಳಿ ಸುತ್ತಲೂ ಬಟ್ಟೆ ಸುತ್ತಿದ್ದು, ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಮುಂದಾಗುವ ಅಪಾಯಗಳನ್ನು ತಡೆಯಲಾಗಿದೆ.

ಮೊನ್ನೆ ತಾನೇ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಒಂದರ ಕಬ್ಬಿಣದ ರಾಡ್‌ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿತ್ತು.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಕಾಮಗಾರಿ ನಡೆಯುತ್ತಿರುವಾಗ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿವೆ. ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಮತ್ತು ಅವರ ಪತಿ ಹಾಗೂ ಮಕ್ಕಳು ಅಪಘಾತಕ್ಕೆ ಗುರಿಯಾಗಿದ್ದಾರೆ.

ಮೃತ ತೇಜಸ್ವಿನಿ ಅವರು ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್‌ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್‌ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪಿಲ್ಲರ್‌ ಕುಸಿದು ಮಹಿಳೆ, ಮಗು ಸಾವು: 40% ಕಮಿಷನ್ ನಿದರ್ಶನವೆಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...