Homeಮುಖಪುಟಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

- Advertisement -
- Advertisement -

ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಸಂಪುಟ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಿಗೆ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ತಿಂಗಳಲ್ಲಿ ಚುನಾವಣೆಗೆ ಸಜ್ಜಾಗಿರುವ ಯುಪಿ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ.

ರಾಜೀನಾಮೆ ನೀಡಿದವರಲ್ಲಿ, ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ.

ಇದನ್ನೂ ಓದಿ:‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ರಾಜೀನಾಮೆ ನೀಡಿದ ರೋಷನ್ ಲಾಲ್ ವರ್ಮಾ ಅವರು, ಮಾಜಿ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ.

“ಐದು ವರ್ಷಗಳಿಂದ ನಮ್ಮ ಸಮಸ್ಯೆಗಳನ್ನು ಆಲಿಸಲಾಗಿಲ್ಲ. ಈ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು” ಎಂದು ರೋಷನ್ ಲಾಲ್ ವರ್ಮಾ ಹೇಳಿದ್ದಾರೆ.

ಯುಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ

ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಸಚಿವ ಸ್ಥಾನ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ

ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೌರ್ಯ ಅವರೊಂದಿಗಿನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

“ಮೌರ್ಯ ಯಾವಾಗಲೂ ನ್ಯಾಯ ಪರವಾಗಿ ನಿಂತವರು. ಜನಸಾಮಾನ್ಯರಲ್ಲಿ ಚಿರಪರಿಚಿತ ಮುಖವಾಗಿದ್ದಾರೆ. ನಾನು ಅವರನ್ನು ಮತ್ತು ಇತರ ಎಲ್ಲಾ ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಸಮಾಜವಾದಿ ಪಕ್ಷಕ್ಕೆ ಸ್ವಾಗತಿಸುತ್ತೇನೆ” ಎಂದು ಅಖಿಲೇಶ್‌ ಹೇಳಿದ್ದಾರೆ.

ಇದನ್ನೂ ಓದಿ:‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

ಮತ್ತೊಂದೆಡೆ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಅವರು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಮಾತುಕತೆಯಲ್ಲಿ ತೊಡಗುವಂತೆ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’;...

0
ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್...